ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ; ಪ್ರಯಾಣಿಕರನ್ನು ರಕ್ಷಿಸಿದ ಕಂಡಕ್ಟರ್
ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಪ್ರತಿನಿತ್ಯ ಒಂದಲ್ಲಾ ಒಂದು ಹೃದಯಾಘಾತದ ಆಘಾತಕಾರಿ ಸುದ್ದಿಗಳು ಕೇಳಿ ಬರುತ್ತಲೇ ಇವೆ. ಇದೀಗ ತಮಿಳುನಾಡಿನಲ್ಲಿ ಇಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಚಾಲಕ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿ, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ವಾಹನ ನಿಯಂತ್ರಣ ತಪ್ಪುತ್ತಿದ್ದಂತೆ, ಬಸ್‌ನ ನಿರ್ವಾಹಕ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ, ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ. ಈ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ತಮಿಳುನಾಡು, ಮೇ 24: ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿಯ ಕಾರಣದಿಂದಾಗಿ ಹೃದಯಾಘಾತದಿಂದ (Heart attack) ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಸಮಸ್ಯೆ ಹೆಚ್ಚುತ್ತಿದೆ. ನಿನ್ನೆಯಷ್ಟೇ ಪತ್ನಿಯ ಸಿಮಂತ ಸಂಭ್ರಮದಲ್ಲೇ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿತ್ತು. ಇದೀಗ ಮತ್ತೊಂದು ಅಂತಹದ್ದೇ ಹೃದಯಾಘಾತದ ಪ್ರಕರಣವೊಂದು ತಮಿಳುನಾಡಿನಲ್ಲಿ (Tamil Nadu) ಬೆಳಕಿಗೆ ಬಂದಿದ್ದು, ಬಸ್ ಚಲಾಯಿಸುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ (bus driver suffers heart attack) ತುತ್ತಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಚಾಲಕ ಕುಸಿದು ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಬಸ್ ಅಡ್ಡಾದಿಡ್ಡಿ ಓಡಲಾರಂಭಿಸಿದ್ದು, ತಕ್ಷಣ ತನ್ನ ಸಮಯ ಪ್ರಜ್ಞೆಯಿಂದ ಕಂಡಕ್ಟರ್ ತನ್ನ ಕೈಯಿಂದ ಬ್ರೇಕ್ ಹಾಕಿ, ಬಸ್ ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಈ ಘಟನೆಯ ದೃಶ್ಯ ಬಸ್ಸಿನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ:
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಶುಕ್ರವಾರ (ಮೇ, 23) ಈ ಘಟನೆ ನಡೆದಿದ್ದು, ಖಾಸಗಿ ಬಸ್ ಪಳನಿ ಬಸ್ ನಿಲ್ದಾಣದಿಂದ ಪುದುಕೊಟ್ಟೈಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತಕ್ಕೆ ತುತ್ತಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕಂಡಕ್ಟರ್ ಓಡಿ ಬಂದು ತನ್ನ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸುವ ಮೂಲಕ ಬಸ್ಸಿನಲ್ಲಿದ್ದ 35 ಪ್ರಯಾಣಿಕರ ಪ್ರಾಣವನ್ನು ರಕ್ಷಣೆ ಮಾಡಿದ್ದಾರೆ. ದುರಾದೃಷ್ಟವಶಾತ್ ಚಾಲಕ ಪ್ರಭು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದೃಶ್ಯ ಬಸ್ಸಿನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನ ಕಿಟಕಿ ಹತ್ತಿ ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆಟೋ ಚಾಲಕ
ವೈರಲ್ ವಿಡಿಯೋ ಇಲ್ಲಿದೆ ನೋಡಿ:
பழனி அருகே மாட்டுப் பாதையில் தனியார் பேருந்து ஓட்டுநர் திடீர் மாரடைப்பால் மரணம். துரிதமாக செயல்பட்டு பேருந்தை நிறுத்திய நடத்துநர்.#heartattack #TamilNadu #Chanakyaa
Stay informed with the latest news through Chanakyaa via https://t.co/sbYbLDGhBo pic.twitter.com/358EDntWLE
— சாணக்யா (@ChanakyaaTv) May 23, 2025
ChanakyaaTv ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಸ್ ಚಲಾಯಿಸುತ್ತಿರುವಾಗಲೇ ಚಾಲಕ ಕುಸಿದು ಬೀಳುತ್ತಿರುವ ದೃಶ್ಯವನ್ನು ಕಾಣಬಹುದು. ಚಾಲಕ ಕುಸಿದು ಬೀಳುತ್ತಿದ್ದಂತೆ ಬಸ್ ನಿಯಂತ್ರಣ ತಪ್ಪಿದ್ದು, ತಕ್ಷಣ ಓಡಿ ಬಂದ ಕಂಡಕ್ಟರ್ ತನ್ನ ಕೈಗಳಿಂದ ತುರ್ತು ಬ್ರೇಕ್ ಹಾಕಿ ಬಸ್ ನಿಲ್ಲಿಸುವ ಮೂಲಕ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ನಂತರ ಪ್ರಯಾಣಿಕರು ಮತ್ತು ಕಂಡಕ್ಟರ್ ಚಾಲಕ ಪ್ರಭು ಅವರ ಸಹಾಯಕ್ಕೆ ಧಾವಿಸಿದ್ದಾರೆ. ಈ ಆಘಾತಕಾರಿ ದೃಶ್ಯವನ್ನು ಕಂಡು ನೋಡುಗರು ಬೆಚ್ಚಿ ಬಿದ್ದಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








