Viral: ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಐಫೋನ್;‌ ಸಿಮ್‌ ಕೊಡ್ಬೋದು ಆದ್ರೆ ಫೋನ್‌ ಕೊಡಲು ಸಾಧ್ಯವಿಲ್ಲ ಎಂದ ದೇವಸ್ಥಾನ ಆಡಳಿತ ಮಂಡಳಿ

ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಭಕ್ತರೊಬ್ಬರು ದೇವಾಲಯದ ಹುಂಡಿಗೆ ಕಾಣಿಕೆ ಹಾಕುವ ಸಂದರ್ಭದಲ್ಲಿ ಅವರ ಜೇಬಿನಲ್ಲಿದ್ದ ಐಫೋನ್‌ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದೆ. ಅವರು ಕೂಡಲೇ ದೇವಾಲಯದ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಒಮ್ಮೆ ಹುಂಡಿಗೆ ಬಿದ್ದ ವಸ್ತು ಅದು ದೇವರಿಗೆ ಸಲ್ಲುತ್ತದೆ ಅದನ್ನು ವಾಪಸ್‌ ನೀಡಲಾಗುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಫೋನ್‌ ಕೊಡಲು ನಿರಾಕರಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಐಫೋನ್;‌ ಸಿಮ್‌ ಕೊಡ್ಬೋದು ಆದ್ರೆ ಫೋನ್‌ ಕೊಡಲು ಸಾಧ್ಯವಿಲ್ಲ ಎಂದ ದೇವಸ್ಥಾನ ಆಡಳಿತ ಮಂಡಳಿ
Devotee's Iphone Dropped Into Donation Box Declared Temple Property
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Dec 22, 2024 | 12:16 PM

ಸಾಮಾನ್ಯವಾಗಿ ನಾವೆಲ್ಲರೂ ದೇವಸ್ಥಾನಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನ ಪಡೆದು ಕಾಣಿಕೆ ಹುಂಡಿಗೆ ಹಣ ಹಾಕುತ್ತೇವೆ ಅಲ್ವಾ. ಅದೇ ರೀತಿ ಇಲ್ಲೊಬ್ರು ಭಕ್ತರು ಕೂಡಾ ದೇವಾಲಯವೊಂದಕ್ಕೆ ದೇವರ ದರ್ಶನ ಪಡೆಯಲು ಬಂದಿದ್ದ ಸಂದರ್ಭದಲ್ಲಿ ಕಾಣಿಕೆ ಹುಂಡಿಗೆ ಹಣ ಹಾಕಲು ಮುಂದಾಗಿದ್ದಾರೆ. ಹೀಗೆ ಕಾಣಿಕೆ ಹಾಕುವ ಸಂದರ್ಭದಲ್ಲಿ ಅವರ ಜೇಬಿನಲ್ಲಿದ್ದ ದುಬಾರಿ ಬೆಲೆಯ ಐಫೋನ್‌ ಕೂಡಾ ಆಕಸ್ಮಿಕವಾಗಿ ಹುಂಡಿಗೆ ಜಾರಿ ಬಿದ್ದಿದೆ. ಅವರು ಕೂಡಲೇ ದೇವಾಲಯದ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಒಮ್ಮೆ ಹುಂಡಿಗೆ ಬಿದ್ದ ವಸ್ತು ಅದು ದೇವರಿಗೆ ಸಲ್ಲುತ್ತದೆ ಅದನ್ನು ವಾಪಸ್‌ ನೀಡಲಾಗುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಫೋನ್‌ ಕೊಡಲು ನಿರಾಕರಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ತಮಿಳುನಾಡಿನ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದು, ಇತ್ತೀಚಿಗೆ ಈ ದೇವಸ್ಥಾನಕ್ಕೆ ಭಕ್ತರೊಬ್ಬರು ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವರ ದುಬಾರಿ ಬೆಲೆಯ ಐಫೋನ್‌ ಕಾಣಿಕೆ ಹುಂಡಿಗೆ ಜಾರಿ ಬಿದ್ದಿದೆ. ಫೋನನ್ನು ಹಿಂದಿರುಗಿಸುವಂತೆ ಕೇಳಿದಾಗ, ಹುಂಡಿಗೆ ಬಿದ್ದ ಯಾವುದೇ ವಸ್ತುವನ್ನು ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿಕೆ ನೀಡಿದೆ.

ಟೈಮ್ಸ್‌ ಆಫ್‌ ಇಂಡಿಯಾ ವರದಿ ಪ್ರಕಾರ, ವಿನಾಯಕಪುರಂ ನಿವಾಸಿ ದಿನೇಶ್‌ ಅವರು ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು. ಹೀಗೆ ಪೂಜೆ ಮುಗಿಸಿ ಹುಂಡಿಗೆ ಕಾಣಿಕೆ ಹಾಕಲು ಜೇಬಿನಿಂದ ಹಣ ತೆಗೆಯುವ ಸಂದರ್ಭದಲ್ಲಿ ಜೇಬಿನಲ್ಲಿದ್ದ ಐಫೋನ್‌ ಜಾರಿ ಹುಂಡಿಗೆ ಬಿದ್ದಿದೆ. ಕೂಡಲೇ ದಿನೇಶ್‌ ದೇವಸ್ಥಾನದ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಫೋನ್‌ ವಾಪಸ್‌ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ದೇವಾಲಯದ ಆಡಳಿತ ಮಂಡಳಿಯು ದೇವಸ್ಥಾನದ ಸಂಪ್ರದಾಯವನ್ನು ಉಲ್ಲೇಖಿಸಿ, ಹುಂಡಿಯಲ್ಲಿ ಹಾಕುವ ಯಾವುದೇ ವಸ್ತುವನ್ನು ವಾಪಸ್‌ ನೀಡಲಾಗುವುದಿಲ್ಲ, ಅದೆಲ್ಲವೂ ದೇವರಿಗೆ ಸಲ್ಲುತ್ತದೆ. ಅದು ಆಕಸ್ಮಿಕವಾಗಿ ಬಿದ್ದರೂ ಹಿಂದಿರುಗಿಸಲಾಗುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ತೊಟ್ಟ ಈ ಉಡುಪಿನ ಬೆಲೆ ಬರೋಬ್ಬರಿ 2.54 ಲಕ್ಷ ರೂ.

ಇದರಿಂದ ನಿರಾಶೆಗೊಂಡ ದಿನೇಶ್‌ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿ ಹುಂಡಿಯನ್ನು ಯಾವಾಗ ತೆರೆಯಲಾಗುತ್ತದೆ ಎಂಬ ಮಾಹಿತಿಯನ್ನು ಪಡೆದರು. ಅಂತಿಮವಾಗಿ ಎರಡು ತಿಂಗಳ ಬಳಿಕ ಶುಕ್ರವಾರ (ಡಿ.20) ಐಫೋನ್‌ ಸಿಗುವ ಭರವಸೆಯಲ್ಲಿ ದಿನೇಶ್‌ ದೇವಸ್ಥಾನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಹುಂಡಿಯಲ್ಲಿ ಬಿದ್ದ ಫೋನನ್ನು ಕೊಡಲು ಸಾಧ್ಯವಿಲ್ಲ ಬೇಕಾದರೆ ಸಿಮ್‌ ಅನ್ನು ತೆಗೆದುಕೊಳ್ಳಿ ಎಂದು ಆಡಳಿತ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ. ಈ ಸುದ್ದಿ ಇದೀಗ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?