AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವು

ಅಯನಾವರಂ ಪೊಲೀಸರು ಸ್ಥಳಕ್ಕಾಗಮಿಸಿ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಲ್ಯಾಪ್‌ಟಾಪ್‌ ಚಾರ್ಜರ್‌ ಹಿಡಿದುಕೊಂಡ ಸ್ಥಿತಿಯಲ್ಲಿ ಡಾ.ಸರಣಿತಾ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tamil Nadu: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವು
ಮೃತ ಡಾ.ಸರಣಿತಾ( 32)
ಅಕ್ಷತಾ ವರ್ಕಾಡಿ
|

Updated on: May 29, 2024 | 3:07 PM

Share

ತಮಿಳುನಾಡು: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( 32) ಮೃತ ದುರ್ದೈವಿ. ಚೆನ್ನೈನ ಆಸ್ಪತ್ರೆಯಲ್ಲಿ ತರಬೇತಿ ಪಡೆಯಲು ಬಂದಿದ್ದ ಸರಣಿತಾ ತರಬೇತಿಗಾಗಿ ಅಯನವರಂನ ಹಾಸ್ಟೆಲ್‌ನಲ್ಲಿ ತಂಗಿದ್ದರು. ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ಆಕೆಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ನಾಮಕ್ಕಲ್ ಜಿಲ್ಲೆಯ ಕಿಲ್ವೆಲ್ಲೂರು ಮೂಲದ ಡಾ.ಸರಣಿತಾ ,2016 ರಲ್ಲಿ ಡಾ.ಉದಯಕುಮಾರ್ ಎಂಬವರನ್ನು ವಿವಾಹವಾಗಿದ್ದರು ಮತ್ತು ಈ ದಂಪತಿಗೆ 5 ವರ್ಷದ ಮಗುವಿದೆ. ಉದಯಕುಮಾರ್ ಕೊಯಮತ್ತೂರಿನಲ್ಲಿ ಇಎಸ್‌ಐ ಆಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸರಾಣಿತಾ ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವ್ಯಾಸಂಗಕ್ಕಾಗಿ ಚೆನ್ನೈಗೆ ಬಂದಿದ್ದರು. ಚೆನ್ನೈನ ಆಸ್ಪತ್ರೆಯಲ್ಲಿ ಒಂದು ತಿಂಗಳ ತರಬೇತಿಗಾಗಿ ಇಲ್ಲಿಗೆ ಬಂದಿರುವ ಅವರು ತರಬೇತಿಗಾಗಿ ಮಹಿಳಾ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ನಿನ್ನೆ ಬೆಳಗ್ಗೆ ಸರನಿತಾ ಅವರನ್ನು ಆಕೆಯ ಪತಿ ಮೊಬೈಲ್ ಮೂಲಕ ಸಂಪರ್ಕಿಸಿದ್ದರು. ಆದರೆ ಬಹಳ ಹೊತ್ತಾದರೂ ಫೋನ್ ತೆಗೆಯಲಿಲ್ಲ. ಇದಾದ ಬಳಿಕ ಸರನಿತಾ ಅವರ ಪತಿ ಅವರು ತಂಗಿದ್ದ ಹೊಟೇಲ್ ಆಡಳಿತ ಮಂಡಳಿಗೆ ಕರೆ ಮಾಡಿ ಆಕೆಯ ಕೊಠಡಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಗುಪ್ತಾಂಗವನ್ನು ಕಚ್ಚಿ ಹಿಡಿದ ಹಾವು; ಹಾವಿನಿಂದ ಬಿಡಿಸಿಕೊಳ್ಳಲು ಪರದಾಡಿದ ವ್ಯಕ್ತಿ

ಕೊಠಡಿಯೊಳಗಿದ್ದ ಸರನಿತಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇರುವುದರಿಂದ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಯನಾವರಂ ಪೊಲೀಸರು ಸ್ಥಳಕ್ಕಾಗಮಿಸಿ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಲ್ಯಾಪ್‌ಟಾಪ್‌ ಚಾರ್ಜರ್‌ ಹಿಡಿದುಕೊಂಡ ಸ್ಥಿತಿಯಲ್ಲಿಡಾ.ಸರಣಿತಾ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!