ವೆಲ್ಲೂರು: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸಿ ಗಣೇಶೋತ್ಸವದಲ್ಲಿ ನೃತ್ಯ ಮಾಡಿದ ವ್ಯಕ್ತಿಯನ್ನು ಜಿಲ್ಲಾ ಪೊಲೀಸರು ಅರುಣ್ ಕುಮಾರ್ ಎಂದು ಗುರುತಿಸಿದ್ದು, ಕೋಮು ಭಾವನೆಯನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಿದ್ದಾರೆ.
ಗಣೇಶ ಚತುರ್ಥಿ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಉದ್ದೇಶ ಹೊಂದಿದೆ ಎಂಬ ದೂರಿನ ಆಧಾರದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಕೇರಳದ ಮಾಲ್ನ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್, ಬುರ್ಖಾ ಧರಿಸಿ ಪ್ರವೇಶಿಸಿದ್ದ ಟೆಕ್ಕಿ
ಈ ಘಟನೆ ಸೆಪ್ಟೆಂಬರ್ 21ರಂದು ನಡೆದಿದೆ ಎನ್ನಲಾಗಿದೆ. ಸುಮಾರು 3 ನಿಮಿಷಗಳ ಕಾಲ ಇರುವ ಈ ವಿಡಿಯೋ ಅಂತರ್ಜಾಲದಲ್ಲಿ ಟ್ರೆಂಡ್ ಆಗಿದ್ದು, ಈ ಘಟನೆಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.
Man dances in #GaneshChaturthi procession wearing burqa (mostly worn by Muslim women) in Tamil Nadu’s #Vellore district. Police have identified him as Arun Kumar and arrested him for inciting communal disharmony@TheSiasatDaily pic.twitter.com/g297VbXa50
— Jibran Nazir | جبران نزیر (@JibraanDar) September 24, 2023
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಆಧರಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಈ ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆ ಹಚ್ಚಲು ಹುಡುಕಾಟ ಆರಂಭಿಸಿದ್ದಾರೆ.