AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಕ್ಕಳಿಗಾಗಿ ಬಸ್ಸಿನಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಸಿದ ಬಸ್ ಚಾಲಕ

ಸಾಮಾನ್ಯವಾಗಿ ಎಲ್ಲಾ ಬಸ್ಸಿನಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳು ಸೇರಿದಂತೆ ಇನ್ನಿತ್ತರ ವ್ಯವಸ್ಥೆಗಳಿರುತ್ತದೆ. ಆದರೆ ಈ ಬಸ್ಸಿನಲ್ಲಿ ಮಕ್ಕಳಿಗೆ ಆಟ ಆಡಲು ವ್ಯವಸ್ಥೆ ಮಾಡಲಾಗಿದೆ. ಇದು ತಮಿಳುನಾಡಿನ ಬಸ್ ಚಾಲಕನು ಮಕ್ಕಳಿಗಾಗಿ ಆಟದ ಸ್ಟೀರಿಂಗ್ ಅಳವಡಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

Video: ಮಕ್ಕಳಿಗಾಗಿ ಬಸ್ಸಿನಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಸಿದ ಬಸ್ ಚಾಲಕ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Nov 30, 2025 | 1:56 PM

Share

ಮಕ್ಕಳೇ (Children) ಹಾಗೆ, ಆಟ ಆಡುವುದೇ ಪ್ರಪಂಚವಾಗಿರುತ್ತದೆ. ಹೀಗಾಗಿ ಈ ಪುಟ್ಟ ಮಕ್ಕಳನ್ನು ಸುಮ್ಮನೆ ಕೂರಿಸುವುದು ಹೆತ್ತವರಿಗೆ ತ್ರಾಸಿನ ಕೆಲಸ. ಬಸ್ಸಿನಲ್ಲಿ ಮಕ್ಕಳ ಜತೆಗೆ ಪ್ರಯಾಣ ಮಾಡುವಾಗ ಅವುಗಳನ್ನು ಸಂಭಾಳಿಸುವುದೇ ದೊಡ್ಡ ಸವಾಲಾಗಿರುತ್ತದೆ. ಆದರೆ ತಮಿಳುನಾಡಿನ (Tamil Nadu) ಬಸ್ ಚಾಲಕನೊಬ್ಬ ಮಕ್ಕಳಿಗಾಗಿ ಬಸ್ಸಿನಲ್ಲಿ ಹೊಸ ವ್ಯವಸ್ಥೆ ಮಾಡಿದ್ದು, ಮಕ್ಕಳನ್ನು ಖುಷಿ ಪಡಿಸಲು  ಆಟಿಕೆ ಸ್ಟೀರಿಂಗ್ ಅನ್ನು ಅಳವಡಿಸಲಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

log.kya.sochenge ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಚಾಲಕ ಬಸ್ ಓಡಿಸುತ್ತಿದ್ದಂತೆ, ಪಕ್ಕದಲ್ಲೇ ಕುಳಿತಿರುವ ಪುಟಾಣಿಯೊಂದು ಸ್ಟೀರಿಂಗ್ ಹಿಡಿದು ಬಸ್ ಓಡಿಸುವುದನ್ನು ನೋಡಬಹುದು. ಆದರೆ ಪುಟಾಣಿ ಮಕ್ಕಳಿಗಾಗಿ ಡ್ರೈವರ್ ತನ್ನ ಡ್ರೈವಿಂಗ್ ಸೀಟಿನ ಪಕ್ಕದಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಸಿಕೊಂಡಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋ ಇದುವರೆಗೆ ಹದಿನೆಂಟು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಬಾಲ್ಯದ ಕನಸು ಎಂದರೆ, ಮತ್ತೊಬ್ಬರು, ಡ್ರೈವರ್ ಸೆಲ್ಯೂಟ್ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರ ಇದು ಉಳಿದ ಬಸ್ಸಿನ ಡ್ರೈವರ್ ಏಕಾಗ್ರತೆಗೆ ಅಡ್ಡಿಯಾಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sun, 30 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್