Viral Video: ದೀಪಾವಳಿ ಬೋನಸ್​; ತಮಿಳುನಾಡಿನ ಟೀ ಎಸ್ಟೇಟ್​ ಉದ್ಯೋಗಿಗಳಿಗೆ ರಾಯಲ್ ಎನ್​ಫೀಲ್ಡ್​

Royal Enfield: ತಮಿಳುನಾಡಿನ ಪಿ ಶಿವಕುಮಾರ ಎಂಬ ಚಹಾತೋಟದ ಮಾಲಿಕ ತನ್ನ ಉದ್ಯೋಗಿಗಳಿಗೆ ರಾಯಲ್​ ಎನ್​ಫೀಲ್ಡ್​ ಬೈಕ್​ಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ದೀಪಾವಳಿ ಬೋನಸ್​ ಪಡೆದ ಉದ್ಯೋಗಿಗಳು ಖುಷಿಯಿಂದ ಬೈಕ್ ಓಡಿಸುತ್ತಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ. ನೀವೂ ಈ ವಿಡಿಯೋ ನೋಡಬೇಕೆ?

Viral Video: ದೀಪಾವಳಿ ಬೋನಸ್​; ತಮಿಳುನಾಡಿನ ಟೀ ಎಸ್ಟೇಟ್​ ಉದ್ಯೋಗಿಗಳಿಗೆ ರಾಯಲ್ ಎನ್​ಫೀಲ್ಡ್​
ತನ್ನ ಉದ್ಯೋಗಿಗಳಿಗೆ ದೀಪಾವಳಿಗೆ ರಾಯಲ್ ಎನ್​ಫೀಲ್ಡ್​ ಉಡುಗೊರೆಯಾಗಿ ಕೊಟ್ಟ ತಮಿಳುನಾಡಿನ ಟೀ ಎಸ್ಟೇಟ್ ಮಾಲಿಕ ಪಿ. ಶಿವಕುಮಾರ್
Follow us
ಶ್ರೀದೇವಿ ಕಳಸದ
|

Updated on: Nov 09, 2023 | 1:52 PM

Diwali Bonus : ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil Nadu) ಟೀ ಎಸ್ಟೇಟ್ ಮಾಲಿಕರೊಬ್ಬರು ತಮ್ಮ ಉದ್ಯೋಗಿಗಳಿಗೆ ರಾಯಲ್ ಎನ್​ಫೀಲ್ಡ್​ಅನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ನೆಟ್ಟಿಗರು ಈ ಉಡುಗೊರೆಯನ್ನು ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ : Viral: ಹಾಂಗ್​ಕಾಂಗ್​; ಸ್ನೇಕ್​ ಪಿಝಾ ತಿನ್ನಲು ಯಾರಿಗೆಲ್ಲ ಧೈರ್ಯವಿದೆ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೀಲಗಿರಿ ಜಿಲ್ಲೆಯ ಕೋಟಗಿರಿ ನಗರದಲ್ಲಿರುವ ಟೀ ಎಸ್ಟೇಟ್‌ನ ಮಾಲಿಕ ಪಿ. ಶಿವಕುಮಾರ ತಮ್ಮ 15 ಉದ್ಯೋಗಿಗಳಿಗೆ ದೀಪಾವಳಿಗಾಗಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ವೈರಲ್ ಆಗಿರುವ ವಿಡಿಯೋ ಮೂಲತಃ ಪಿಟಿಐನದ್ದು. ವಿವಿಧ ಆಟಗಳಲ್ಲಿ ಉದ್ಯೋಗಿಗಳನ್ನು ತೊಡಗಿಸಿಕೊಂಡ 42 ವರ್ಷದ ಎಸ್ಟೇಟ್ ಮಾಲಿಕರು ಅವರುಗಳಿಗೆ ಬೈಕ್​ ಕೀಗಳನ್ನು ಕೊಡುತ್ತಾರೆ.

ರಾಯಲ್ ಎನ್​ಫೀಲ್ಡ್​ ಬೈಕ್​ ಇವರ ದೀಪಾವಳಿ ಬೋನಸ್​

ಇತ್ತೀಚೆಗೆ ಹರಿಯಾಣಾದ ಪಂಚಕುಲದ ಫಾರ್ಮಾ ಕಂಪನಿ ಮಾಲಿಕರೊಬ್ಬರು ದೀಪಾವಳಿ ಉಡುಗೊರೆಯಾಗಿ ಹೊಸ ಕಾರುಗಳನ್ನು ತಮ್ಮ ಉದ್ಯೋಗಿಗಳಿಗೆ ಕೊಟ್ಟಿರುವುದನ್ನು ಇಲ್ಲಿ ಸ್ಮರಿಸಬಹುದು. ಮಿಟ್ಸ್‌ಕಾರ್ಟ್ ಅಧ್ಯಕ್ಷ ಎಂಕೆ ಭಾಟಿಯಾ 12 ಉದ್ಯೋಗಿಗಳಿಗೆ ಹೊಚ್ಚಹೊಸ ಟಾಟಾ ಪಂಚ್ ಕಾರುಗಳ ಕೀಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : Viral Video: ಇಡೀ ಕಲ್ಲಂಗಡಿಯನ್ನು ಕರಿದ ಭೂಪ; ತಲೆ ಕೆರೆದುಕೊಳ್ಳುತ್ತಿರುವ ನೆಟ್​ಮಂದಿ

ಆಹಾ ಇಂಥ ಮಾಲಿಕರ ಸಂತತಿ ಹೆಚ್ಚಲಿ. ಇಂತ ಮಾಲಿಕರು ನಮಗೂ ಬೇಕು. ನಿಜಕ್ಕೂ ಈ ವಿಡಿಯೋ ನೋಡಿ ಖುಷಿಯಾಯಿತು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ