AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕನ ಬಂಧನ

ಇನ್ನೇನು ಅಂತಿಮ ಪರೀಕ್ಷೆ ಸಮೀಪಿಸುತ್ತಿದ್ದಂತೆ ಶಿಕ್ಷಕ ಲಕ್ಷ್ಮಣ್ ಮಕ್ಕಳು ಪರೀಕ್ಷೆಗೆ ಸಿದ್ಧರಾಗಲಿ ಎಂಬ ಕಾರಣಕ್ಕೆ ಚಿಕ್ಕ ಪರೀಕ್ಷೆ ಒಂದನ್ನು ನಡೆಸಿದ್ದರು. ಆದರೆ 62 ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರು. ಇದರಿಂದ ಕೋಪಗೊಂಡಿದ್ದ ಶಿಕ್ಷಕ ವಿದ್ಯಾರ್ಥಿಗಳ ಬೆನ್ನಿನ ಮೇಲೆ ಬೊಬ್ಬೆ ಬರುವಂತೆ ಸರಿಯಾಗಿ ಥಳಿಸಿದ್ದಾರೆ.

ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕನ ಬಂಧನ
ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕನ ಬಂಧನ
ಅಕ್ಷತಾ ವರ್ಕಾಡಿ
|

Updated on: Feb 21, 2024 | 10:51 AM

Share

ತೆಲಂಗಾಣ: ಕಡಿಮೆ ಅಂಕ ಪಡೆದಿದ್ದಕ್ಕೆ ಹತ್ತನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿರುವ ಘಟನೆ ತಿರುಮಲಯಪಾಲೆಂನ ಮದಿರಿಪುರಂನಲ್ಲಿ ನಡೆದಿದೆ. ಇಲ್ಲಿನ ತೆಲಂಗಾಣ ಬುಡಕಟ್ಟು ಕಲ್ಯಾಣ ಬಾಲಕರ ಗುರುಕುಲ ಶಾಲೆಯ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರು. ಇದರಿಂದ ಕೋಪಗೊಂಡಿದ್ದ ಶಿಕ್ಷಕ ಲಕ್ಷ್ಮಣ್ ರಾವ್ ವಿದ್ಯಾರ್ಥಿಗಳಿಗೆ ಸರಿಯಾಗಿ ಥಳಿಸಿದ್ದಾರೆ. ವಿದ್ಯಾರ್ಥಿಯೊಬ್ಬನ ಬೆನ್ನಿನ ಮೇಲೆ ಬೊಬ್ಬೆ ಕಂಡು ಪೋಷಕರು ಆತಂಕ ಉಂಟಾಗಿದ್ದು, ವಿಚಾರಿಸಿದಾಗ ವಿದ್ಯಾರ್ಥಿ ಶಿಕ್ಷಕರು ಹೊಡೆದಿರುವುದನ್ನು ಬಾಯಿಬಿಟ್ಟಿದ್ದಾನೆ. ಪೋಷಕರ ದೂರಿನ ಆಧಾರದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಮದಿರಿಪುರಂ ಗಿರಿಜನ ಕಲ್ಯಾಣ ಬಾಲಕರ ಗುರುಕುಲ ಶಾಲೆಯಲ್ಲಿ 10ನೇ ತರಗತಿಯಲ್ಲಿ 62 ವಿದ್ಯಾರ್ಥಿಗಳಿದ್ದಾರೆ. ಇನ್ನೇನು ಅಂತಿಮ ಪರೀಕ್ಷೆ ಸಮೀಪಿಸುತ್ತಿದ್ದಂತೆ ಶಿಕ್ಷಕ ಲಕ್ಷ್ಮಣ್ ಮಕ್ಕಳು ಪರೀಕ್ಷೆಗೆ ಸಿದ್ಧರಾಗಲಿ ಎಂಬ ಕಾರಣಕ್ಕೆ ಪರೀಕ್ಷೆ ಒಂದನ್ನು ನಡೆಸಿದ್ದರು. ಆದರೆ 62 ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರು. ಇದರಿಂದ ಕೋಪಗೊಂಡಿದ್ದ ಶಿಕ್ಷಕ ವಿದ್ಯಾರ್ಥಿಗಳ ಬೆನ್ನಿನ ಮೇಲೆ ಬೊಬ್ಬೆ ಬರುವಂತೆ ಸರಿಯಾಗಿ ಥಳಿಸಿದ್ದಾರೆ.

ಇದನ್ನೂ ಓದಿ: ಮಡದಿಗೂ ಸಮಾನ ಗೌರವ, ವಧುವಿನ ಪಾದ ಸ್ಪರ್ಶಿಸಿದ ವರ, ನಾಚಿ ನೀರಾದ ವಧು

ಮಂಗಳವಾರ ರಾತ್ರಿ ಸುಮಾರು 25 ವಿದ್ಯಾರ್ಥಿಗಳಿಗೆ ಥಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಬೆನ್ನು ಕೆಂಪಾಗಿ ಬೊಬ್ಬೆ ಬರಲು ಪ್ರಾರಂಭಿಸಿದೆ. ಈ ಬಗ್ಗೆ ಕೆಲ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಫೋನ್‌ನಲ್ಲಿ ಮಾಹಿತಿ ನೀಡಿದ್ದಾರೆ. ಗುರುಕುಲ ಸಮೀಪದ ಚಂದ್ರತಾಂಡದ ವಿದ್ಯಾರ್ಥಿ ನಿಲಯಕ್ಕೆ ಪೋಷಕರು ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಎಸ್ಸೈ ಗಿರಿಧರ್ ರೆಡ್ಡಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ವಿವರ ಪಡೆದು, ನಂತರ ಶಿಕ್ಷಕನನ್ನು ಬಂಧಿಸಿ ಠಾಣೆಗೆ ಕರೆದೊಯ್ದಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!