Video: ಕ್ಲಾಸ್ ರೂಮ್ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ
ಶಾಲೆಯಲ್ಲಿ ಫ್ಯಾನ್ ವ್ಯವಸ್ಥೆ ಇಲ್ಲದಿರುವ ಕಾರಣದಿಂದಾಗಿ ಶಿಕ್ಷಕಿ ಮಕ್ಕಳ ಕೈಗೆ ಬೀಸಣಿಗೆ ಕೊಟ್ಟು ಗಾಳಿ ಹಾಕಲು ಹೇಳಿ ನಿದ್ರೆಗೆ ಜಾರಿದ್ದಾಳೆ. ಈ ನಾಚಿಕೆಗೇಡಿನ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕ್ಲಾಸ್ ರೂಮ್ನಲ್ಲೇ ಗಡದ್ದಾಗಿ ನಿದ್ದೆಗೆ ಜಾರಿದ ಶಿಕ್ಷಕಿಯೊಬ್ಬಳಿಗೆ ಪುಟ್ಟ ಮಕ್ಕಳು ಬೀಸಣಿಗೆಯಿಂದ ಗಾಳಿ ಹಾಕುತ್ತಿರುವ ದೃಶ್ಯ ಉತ್ತರ ಪ್ರದೇಶದ ಅಲಿಗಢದ ಶಾಲೆಯೊಂದರಲ್ಲಿ ಕಂಡುಬಂದಿದೆ. ಈ ನಾಚಿಕೆಗೇಡಿನ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಮಕ್ಕಳ ಪೋಷಕರು ಗಲಿಬಿಲಿಗೊಂಡಿದ್ದು, ಶಿಕ್ಷಕಿಯ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶಿಸಿದ್ದಾರೆ.
ಅಲಿಗಢದ ಧನಿಪುರ ಬ್ಲಾಕ್‌ನ ಗೋಕುಲ್‌ಪುರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಫ್ಯಾನ್ ವ್ಯವಸ್ಥೆ ಇಲ್ಲದಿರುವ ಕಾರಣದಿಂದಾಗಿ ಶಿಕ್ಷಕಿ ಮಕ್ಕಳ ಕೈಗೆ ಬೀಸಣಿಗೆ ಕೊಟ್ಟು ಗಾಳಿ ಹಾಕಲು ಹೇಳಿ ನಿದ್ರೆಗೆ ಜಾರಿದ್ದಾಳೆ. ಪುಟ್ಟ ಮಕ್ಕಳು ಗಾಳಿ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಬಗ್ಗೆ ವರದಿಯಾಗಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
Published on: Jul 28, 2024 11:44 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

