Video: ಕ್ಲಾಸ್​​ ರೂಮ್​​ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ

Updated on: Jul 28, 2024 | 11:44 AM

ಶಾಲೆಯಲ್ಲಿ ಫ್ಯಾನ್​​​​​ ವ್ಯವಸ್ಥೆ ಇಲ್ಲದಿರುವ ಕಾರಣದಿಂದಾಗಿ ಶಿಕ್ಷಕಿ ಮಕ್ಕಳ ಕೈಗೆ ಬೀಸಣಿಗೆ ಕೊಟ್ಟು ಗಾಳಿ ಹಾಕಲು ಹೇಳಿ ನಿದ್ರೆಗೆ ಜಾರಿದ್ದಾಳೆ. ಈ ನಾಚಿಕೆಗೇಡಿನ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕ್ಲಾಸ್​​ ರೂಮ್​​ನಲ್ಲೇ ಗಡದ್ದಾಗಿ ನಿದ್ದೆಗೆ ಜಾರಿದ ಶಿಕ್ಷಕಿಯೊಬ್ಬಳಿಗೆ ಪುಟ್ಟ ಮಕ್ಕಳು ಬೀಸಣಿಗೆಯಿಂದ ಗಾಳಿ ಹಾಕುತ್ತಿರುವ ದೃಶ್ಯ ಉತ್ತರ ಪ್ರದೇಶದ ಅಲಿಗಢದ ಶಾಲೆಯೊಂದರಲ್ಲಿ ಕಂಡುಬಂದಿದೆ. ಈ ನಾಚಿಕೆಗೇಡಿನ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದ್ದಂತೆ ಮಕ್ಕಳ ಪೋಷಕರು ಗಲಿಬಿಲಿಗೊಂಡಿದ್ದು, ಶಿಕ್ಷಕಿಯ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶಿಸಿದ್ದಾರೆ.

ಅಲಿಗಢದ ಧನಿಪುರ ಬ್ಲಾಕ್‌ನ ಗೋಕುಲ್‌ಪುರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಫ್ಯಾನ್​​​​​ ವ್ಯವಸ್ಥೆ ಇಲ್ಲದಿರುವ ಕಾರಣದಿಂದಾಗಿ ಶಿಕ್ಷಕಿ ಮಕ್ಕಳ ಕೈಗೆ ಬೀಸಣಿಗೆ ಕೊಟ್ಟು ಗಾಳಿ ಹಾಕಲು ಹೇಳಿ ನಿದ್ರೆಗೆ ಜಾರಿದ್ದಾಳೆ. ಪುಟ್ಟ ಮಕ್ಕಳು ಗಾಳಿ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಬಗ್ಗೆ ವರದಿಯಾಗಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

Published on: Jul 28, 2024 11:44 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More