AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಕಂದಮ್ಮನ ರಕ್ಷಣೆಗಾಗಿ ಬೀದಿ ನಾಯಿಗಳ ಜತೆ ಒಂಟಿಯಾಗಿ ಕಾದಾಡಿದ ಅಮ್ಮ

ರಸ್ತೆಯಲ್ಲಿ ತಾಯಿ ಮಗು ನಡೆದುಕೊಂಡು ಹೋಗುತ್ತಿರುವ ವೇಳೆ ಏಕಾಏಕಿ ದಾಳಿ ನಡೆಸಿವೆ. ತಕ್ಷಣ ತಾಯಿ ತನ್ನ ಮಗುವನ್ನು ಎತ್ತಿಕೊಂಡಿದ್ದು, ಈ ವೇಳೆ ನಾಯಿಗಳ ಗುಂಪು ಆಕೆಯ ಸುತ್ತಲೂ ಸುತ್ತುವರಿದಿದ್ದು, ಆಕೆಗೆ ಕಚ್ಚಲು ಮುಂದಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ತನ್ನ ಕಂದಮ್ಮನ ರಕ್ಷಣೆಗಾಗಿ ಬೀದಿ ನಾಯಿಗಳ ಜತೆ ಒಂಟಿಯಾಗಿ ಕಾದಾಡಿದ ಅಮ್ಮ
ಬೀದಿ ನಾಯಿಗಳ ದಾಳಿ
ಅಕ್ಷತಾ ವರ್ಕಾಡಿ
|

Updated on: Sep 24, 2024 | 10:55 AM

Share

ತೆಲಂಗಾಣ: ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಿಂಗಳುಗಳ ಹಿಂದೆಯಷ್ಟೇ ವಾಕಿಂಗ್ ಮಾಡುತ್ತಿದ್ದ ವೃದ್ದ ಮಹಿಳೆಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಯಿಂದ  ತಾಯಿಯೊಬ್ಬಳು ತನ್ನ ಮಗುವನ್ನು ರಕ್ಷಿಸಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ರಸ್ತೆಯಲ್ಲಿ ತಾಯಿ ಮಗು ನಡೆದುಕೊಂಡು ಹೋಗುತ್ತಿರುವ ವೇಳೆ ಏಕಾಏಕಿ ದಾಳಿ ನಡೆಸಿವೆ. ತಕ್ಷಣ ತಾಯಿ ತನ್ನ ಮಗುವನ್ನು ಎತ್ತಿ ಮಡಿಲಲ್ಲಿ ಕೂರಿಸಿ ನಾಯಿಗಳ ದಾಳಿಯಿಂದ ಮಗುವನ್ನು ರಕ್ಷಿಸಿದ್ದಾಳೆ. ಈ ವೇಳೆ ನಾಯಿಗಳ ಗುಂಪು ಆಕೆಯ ಸುತ್ತಲೂ ಸುತ್ತುವರಿದಿದ್ದು, ಆಕೆಗೆ ಕಚ್ಚಲು ಮುಂದಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಸ್ಪತ್ರೆಗೂ ಕಾಲಿಟ್ಟ ರೀಲ್ಸ್‌ ವೈರಸ್, ಕಫ್ತಾನ್ ತೊಟ್ಟು ರೋಗಿಗಳ ಮುಂದೆ ಸೊಂಟ ಬಳುಕಿಸಿದ ಯುವತಿ

@TheMuslim786 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ. ಸೆ. 22ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಎರಡು ದಿನಗಳಲ್ಲಿ 7ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ