ವೃದ್ಧ ಮಾವನಿಗೆ ಮನಬಂದಂತೆ ಚಪ್ಪಲಿಯಲ್ಲಿ ಹೊಡೆದ ಸೊಸೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

|

Updated on: Dec 08, 2024 | 2:39 PM

ವೀಲ್​​ ಚೇರ್‌ನಲ್ಲಿದ್ದ ವೃದ್ಧನಿಗೆ ಆತನ ಸೊಸೆ ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಗಳು ಹೊರಬಿದ್ದ ನಂತರ, ನೆಟ್ಟಿಗರು ಈ ಕ್ರೂರ ಕೃತ್ಯವನ್ನು ಖಂಡಿಸುತ್ತಿದ್ದಾರೆ ಮತ್ತು ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಘಟನೆಯ ನಿಜವಾದ ಕಾರಣ ಇನ್ನೂ ಅಸ್ಪಷ್ಟವಾಗಿದೆ.

ಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್ ಚೇರ್ ನಲ್ಲಿದ್ದ ವೃದ್ಧ ಮಾವನಿಗೆ ಸೊಸೆಯೊಬ್ಬಳು ಮನಬಂದಂತೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆಯು ನವೆಂಬರ್‌ನಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಹೇಗೆ ಕಾಣಿಸಿಕೊಂಡಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ವೃದ್ದನಿಗೆ ಮನಬಂದಂತೆ ಥಳಿಸಿರುವುದನ್ನು ಕಾಣಬಹುದು. ಘಟನೆ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ಮುದುಕನಿಗೆ ಹೊಡೆಯುತ್ತಿರುವಾಗ ಸಾಕು ನಾಯಿ ಬೊಗಳುತ್ತಾ ಹೊಡೆಯದಂತೆ ತಡೆಯುತ್ತಿರುವುದನ್ನು ಕಾಣಬಹುದು.

ವೀಡಿಯೋ ವೈರಲ್​ ಆಗುತ್ತಿದ್ದಂತೆ, ಎಕ್ಸ್ ಬಳಕೆದಾರರು ವೃದ್ಧನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಘಟನೆಯ ಹಿಂದಿನ ಕಾರಣ ಅಸ್ಪಷ್ಟವಾಗಿದ್ದರೂ, ನೆಟಿಜನ್‌ಗಳು ಈ ವಿಷಯವನ್ನು ಪರಿಶೀಲಿಸುವಂತೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​

@TeluguScribe ಎಂಬ ಟ್ವಿಟರ್​ ಖಾತೆಯಲ್ಲಿ ಡಿಸೆಂಬರ್​ 08ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕ್ರೂರ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ