ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

|

Updated on: Jul 27, 2024 | 11:00 AM

ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಬಾಲಕಿ ಚಾರ್ಜ್ ಮಾಡಲು ಮುಂದಾಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
Follow us on

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ನಡೆದಿದೆ. ಅಂಜಲಿ ಕಾರ್ತಿಕಾ (9) ಮೃತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ. ಶುಕ್ರವಾರ (ಜುಲೈ 26) ಈ ದಾರುಣ ಘಟನೆ ನಡೆದಿದೆ.

ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಮೃತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ