AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಿಯರ್‌ ಬಾಟಲ್‌ನಲ್ಲಿ ಪತ್ತೆಯಾಯ್ತು ಸತ್ತ ಹಲ್ಲಿ; ಕಿಕ್ಕೇರಿಸುವ ಮುನ್ನ ಜೋಪಾನ ಮದ್ಯ ಪ್ರಿಯರೇ….

ಇತ್ತೀಚಿಗಷ್ಟೇ ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆಯಾದ ಸುದ್ದಿಯೊಂದು ಭಾರೀ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಗ್ರಾಹಕರೊಬ್ಬರು ಖದೀದಿಸಿದ ಬಿಯರ್‌ ಬಾಟಲ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ತಾನು ಕಂಠಪೂರ್ತಿ ಕುಡಿಯಬೇಕೆಂದು ಖದೀದಿಸಿದ ಬಿಯರ್‌ನಲ್ಲಿ ಹಲ್ಲಿ ಇರುವುದನ್ನು ಕಂಡು ಆ ಗ್ರಾಹಕ ಫುಲ್‌ ಶಾಕ್‌ ಆಗಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 29, 2024 | 3:25 PM

Share

ಯಾವುದೇ ಬಗೆಯ ಆಹಾರವನ್ನು ತಯಾರಿಸುವಾಗ ಅಲ್ಲಿ ಸ್ವಚ್ಛತೆಯನ್ನು ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಯಾಕಂದ್ರೆ ಕೆಲವೊಮ್ಮೆ ಕಣ್ತಪ್ಪಿ ತಯಾರಿಸುವಂತಹ ಆಹಾರಗಳಿಗೆ ಹಲ್ಲಿಯೋ ಅಥವಾ ಇನ್ಯಾವುದೋ ವಸ್ತುಗಳು ಬೀಳುವಂತಹ ಸಾಧ್ಯತೆ ಇರುತ್ತದೆ. ಹೀಗೆ ಐಸ್‌ಕ್ರೀಮ್‌ನಲ್ಲಿ ಬೆರಳು ಪತ್ತೆಯಾದ, ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆಯಾದ ಕೆಲವೊಂದು ಸುದ್ದಿಗಳು ಕೂಡಾ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ತಾನು ಕಂಠಪೂರ್ತಿ ಕುಡಿಯಬೇಕೆಂದು ಖದೀದಿಸಿದ ಬಿಯರ್‌ನಲ್ಲಿ ಹಲ್ಲಿ ಇರುವುದನ್ನು ಕಂಡು ಆ ಗ್ರಾಹಕ ಫುಲ್‌ ಶಾಕ್‌ ಆಗಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಈ ಘಟನೆ ತೆಲಂಗಾಣದ ವಿಕಾರಾಬಾದ್‌ ಜಿಲ್ಲೆಯಲ್ಲಿ ನಡೆದಿದ್ದು, ಗ್ರಾಹಕರೊಬ್ಬರು ವೈನ್‌ಶಾಪ್‌ನಿಂದ ಖರೀದಿಸಿದ ಬಡ್‌ವೈಸರ್‌ ಬಿಯರ್‌ ಬಾಟಲ್‌ನಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಈ ಅಚ್ಚರಿಯ ಘಟನೆ ಸುರಕ್ಷತೆ ಮತ್ತು ನೈರ್ಮದ್ಯದ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ವರದಿಗಳ ಪ್ರಕಾರ ಇಲ್ಲಿನ ಕೆರಳ್ಳಿ ಗ್ರಾಮದ ಲಕ್ಷ್ಮೀಕಾಂತ್‌ ರೆಡ್ಡಿ ಮತ್ತು ಅನಂತಯ್ಯ ಎಂಬ ಇಬ್ಬರು ವ್ಯಕ್ತಿಗಳು ಪಾರ್ಟಿಯ ಸಲುವಾಗಿ ಧಾರೂರಿನ ವೈನ್‌ ಶಾಪ್‌ನಿಂದ ಸುಮಾರು 4,000 ರೂಪಾಯಿ ಮೌಲ್ಯದ ಮದ್ಯವನ್ನು ಖರೀದಿಸಿದ್ದರು. ಹೀಗೆ ಎಣ್ಣೆ ಪಾರ್ಟಿಯಲ್ಲಿ ಬಡ್‌ ವೈಸರ್‌ ಬಿಯರ್‌ ಬಾಟಲ್‌ ಓಪನ್‌ ಮಾಡಿದಾಗ ಅದರಲ್ಲಿ ಸತ್ತ ಹಲ್ಲಿಯೊಂದು ತೇಳುವುದು ಪತ್ತೆಯಾಗಿದೆ. ಈ ದೃಶ್ಯ ಕಂಡು ಶಾಕ್‌ ಆಗಿದ್ದಾರೆ. ಕೂಡಲೇ ಮದ್ಯ ಖರೀದಿಸಿದ ಆ ಇಬ್ಬರು ವ್ಯಕ್ತಿಗಳು ಪೊಲೀಸ್‌ ಠಾಣೆಯಲ್ಲಿ ನಡೆದ ಘಟನೆಯ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಕಾಂಡೋಮ್ ಭಾರತದಲ್ಲಿ ಲಭ್ಯವಿದೆಯೇ?, ಇದನ್ನು ಹೇಗೆ ಬಳಸುವುದು?

YakkatiSowmith ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಡ್‌ವೈಸರ್‌ ಬಿಯರ್‌ ಬಾಟಲಿಯ ಒಳಗೆ ಸತ್ತ ಹಲ್ಲಿ ತೇಳುತ್ತಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ತೋರಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಈ ಆಘಾತಕಾರಿ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!