Video: ಬಸ್ಸಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್

ಚಲಿಸುತ್ತಿರುವ ಬಸ್, ಆಂಬ್ಯುಲೆನ್ಸ್‌ಗಳಲ್ಲಿ ಹೆರಿಗೆ ನಡೆಯುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ಸಮಯದ ಹಿಂದೆಯಷ್ಟೇ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಹಿಳಾ ಕಂಡಕ್ಟರ್ ಒಬ್ಬರು ನರ್ಸ್ ಸಹಾಯದಿಂದ ಮಹಿಳೆಗೆ ಅದೇ ಬಸ್ಸಿನಲ್ಲಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ.

Video: ಬಸ್ಸಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್
ವೈರಲ್​​ ಪೋಸ್ಟ್​​​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 19, 2024 | 4:52 PM

ಟಿಜಿಎಸ್‌ಆರ್‌ಟಿಸಿ ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿ ಮತ್ತು ನರ್ಸ್ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಈ ಹಿಂದೆಯೂ ಚಲಿಸುತ್ತಿರುವ ಬಸ್, ಆಂಬ್ಯುಲೆನ್ಸ್‌ಗಳಲ್ಲಿ ಹೆರಿಗೆ ನಡೆದ ಘಟನೆಗಳು ನಡೆದಿದೆ. ಹೌದು ಕೆಲ ಸಮಯದ ಹಿಂದೆಯಷ್ಟೇ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಸುದ್ದಿಯೊಂದು ವೈರಲ್ ಆಗಿತ್ತು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಹಿಳಾ ಕಂಡಕ್ಟರ್ ಮತ್ತು ನರ್ಸ್ ಒಬ್ಬರು ಮಹಿಳೆಗೆ ಅದೇ ಬಸ್ಸಿನಲ್ಲಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಸಂಧ್ಯಾ ಎಂದು ಗುರುತಿಸಲಾಗಿರುವ ತುಂಬು ಗರ್ಭಿಣಿ ಮಹಿಳೆ ತನ್ನ ಕುಟುಂಬದೊಂದಿಗೆ ರಕ್ಷಾ ಬಂಧನವನ್ನು ಆಚರಿಸಲು ಮಹಬೂಬ್‌ನಗರ ಜಿಲ್ಲೆಯ ವನಪರ್ತಿಗೆ ಪ್ರಯಾಣಿಸುತ್ತಿದ್ದರು . ಬಸ್ ನಾಚಹಳ್ಳಿ ಸಮೀಪಿಸುತ್ತಿದ್ದಂತೆ ಆಕೆಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಸಂಧ್ಯಾ ನೋವಿನಿಂದ ನರಳುತ್ತಿದ್ದುದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಜಿ ಭಾರತಿ ನಾಚಹಳ್ಳಿ ಬಳಿ ಬಸ್ ನಿಲ್ಲಿಸಿದ್ದಾರೆ. ಮತ್ತು ತನ್ನ ಸಮಯ ಪ್ರಜ್ಞೆಯಿಂದ ಆ ಬಸ್ಸಿನಲ್ಲಿದ್ದ ನರ್ಸ್ ಸಹಾಯದಿಂದ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

ವೈರಲ್​​​ ಫೋಸ್ಟ್​​ ಇಲ್ಲಿದೆ ನೋಡಿ:

nbsp;

ಮಹಿಳೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಕ್ಷಣ ತಾಯಿ ಮತ್ತು ಮಗು ಇಬ್ಬರನ್ನೂ ಆಂಬ್ಯುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದರೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಮಧ್ಯರಾತ್ರಿ ಪಾರ್ಕ್​​ನಲ್ಲಿ ಯುವಕನ ಮುಂದೆ ಬೆತ್ತಲೆಯಾಗಿ ಲೈಂಗಿಕ ದೌರ್ಜನ್ಯ ಎಸಗಿದ ಮಹಿಳೆ

TGSRTC ಸಾರಿಗೆ ಅಧಿಕಾರಿಗಳು ಬಸ್ ನಿರ್ವಾಹಕಿ ಭಾರತಿ ಅವರ ಸಮಯ ಪ್ರಜ್ಞೆ ಮತ್ತು ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ