AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಆನೆಗಳ ಆಟ ತುಂಟಾಟಗಳನ್ನು ನೋಡುವುದೇ ಚಂದ. ಆದರೆ ಇದೀಗ ಪುಟಾಣಿ ಮರಿ ಆನೆಯೊಂದು ಮಹಿಳೆಯ ಕೆನ್ನೆಗೆ ಪ್ರೀತಿಯಿಂದ ಮುತ್ತಿಟ್ಟಿದೆ. ಆನೆ ಹಾಗೂ ಮಹಿಳೆಯ ಹೃದಯಸ್ಪರ್ಶಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಹೃದಯಯನ್ನು ಗೆದ್ದುಕೊಂಡಿದೆ. ಈ ದೃಶ್ಯ ನೋಡಿದ ಬಳಕೆದಾರರು ಇದು ನಿಜಕ್ಕೂ ಮುದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Video: ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Jul 13, 2025 | 3:01 PM

Share

ಥೈಲ್ಯಾಂಡ್‌, ಜುಲೈ 13: ಪ್ರಾಣಿಗಳು ಮನುಷ್ಯರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತವೆ. ತನ್ನನ್ನು ಯಾರು ಹೆಚ್ಚು ಪ್ರೀತಿ ಮಾಡುತ್ತಾರೋ ಅವರೆಂದರೆ ಅವುಗಳಿಗೆ ಅದೇನೋ ಸಲಿಗೆ, ಎಲ್ಲಿಲ್ಲದ ಪ್ರೀತಿ. ಇದೀಗ ಥೈಲ್ಯಾಂಡ್ ಉದ್ಯಾನವನವೊಂದರ (Elephant Park in Thailand) ಹೃದಯಸ್ಪರ್ಶಿ ಕ್ಷಣದ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಬಟೂಲ್ (Batool) ಹೆಸರಿನ ಮಹಿಳೆಯೊಬ್ಬಳು ಪಾರ್ಕ್‌ಗೆ ಭೇಟಿ ಕೊಟ್ಟ ವೇಳೆ ಮರಿಯಾನೆಯೊಂದು ಆಕೆಯ ಕೆನ್ನೆಗೆ ಮುತ್ತಿಟ್ಟಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

draroobabatool ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಇದುವರೆಗಿನ ಅತ್ಯಂತ ಅನಿರೀಕ್ಷಿತ ಮುತ್ತು. ನಾನು ಹಲೋ ಎಂದು ಹೇಳಲು ಹೋಗಿದ್ದೆ. ಆದರೆ, ಅದಕ್ಕೆ ಪ್ರತಿಯಾಗಿ ಮುತ್ತು ನಿರೀಕ್ಷಿಸಿರಲಿಲ್ಲ. ಈ ಮರಿಯಾನೆಯ ಹೆಸರು ಅಮೆಲಿಯಾ, ಆಕೆಗೆ ಮೂರು ವರ್ಷ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಇದರಲ್ಲಿ ಥೈಲ್ಯಾಂಡ್ ಉದ್ಯಾನವನಕ್ಕೆ ಭೇಟಿ ಕೊಟ್ಟ ಬಟೂಲ್ ಅವರು ಮೂರು ವರ್ಷದ ಅಮೆಲಿಯಾ ಮರಿಯಾನೆಯ ಹತ್ತಿರ ನಿಂತಿರುವುದನ್ನು ನೋಡಬಹುದು. ಮೊದಲಿಗೆ ಇಬ್ಬರ ನಡುವೆ ಶಾಂತ ಸಂವಹನವು ನಡೆಯುವಂತೆ ಕಾಣುತ್ತಿದೆ. ಆ ಬಳಿಕ ಅಮೆಲಿಯಾ ತನ್ನ ಸೊಂಡಿಲನ್ನು ಮೇಲಕ್ಕೆತ್ತಿ ಮಹಿಳೆಯ ಕೆನ್ನೆಗೆ ಮುತ್ತನ್ನಿಟ್ಟಿದೆ.

ಇದನ್ನೂ ಓದಿ
Image
ಕುಮಟಾ ಬಳಿಯ ಗುಹೆಯಲ್ಲಿ ಇಬ್ಬರು ಮಕ್ಕಳ ಜೊತೆ ರಷ್ಯಾದ ಮಹಿಳೆಯ ನಿಗೂಢ ವಾಸ
Image
ಕನ್ನಡ "ಬಡ ಆರ್ಥಿಕತೆಯ" ಭಾಷೆ, ನಾನು ಇಂಗ್ಲಿಷ್ ಮಾತನಾಡುತ್ತೇನೆ
Image
ಮಳೆ ನೀರಲ್ಲಿ ಐಫೋನ್‌ ಕಳೆದು ಹೋಯ್ತು ಎಂದು ಬಿಕ್ಕಿ ಬಿಕ್ಕಿ ಅತ್ತ ಯುವಕ
Image
ಹೊಸ ಆಸನ ವ್ಯವಸ್ಥೆಯನ್ನು ಅಳವಡಿಸಿಕೊಂಡ ಕೇರಳದ ಶಾಲೆಗಳು

ಇದನ್ನೂ ಓದಿ : Video : ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಆನೆ : ಎರಡು ಗಂಟೆಗಳ ಕಾಲ ಸ್ಥಗಿತಗೊಂಡ ರೈಲು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋ ನಾಲ್ಕು ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು, ಈ ದೃಶ್ಯ ನೋಡಲು ನಿಜಕ್ಕೂ ಮುದ್ದಾಗಿದೆ, ಕ್ಯೂಟಿ ಎಂದಿದ್ದಾರೆ. ಇನ್ನೊಬ್ಬರು, ನಾನು ನೋಡಿದ ಅದ್ಭುತ ಹೃದಯ ಸ್ಪರ್ಶಿ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ನಾನು ಈ ವಿಡಿಯೋವನ್ನು ನಾಲ್ಕರಿಂದ ಐದು ಬಾರಿ ನೋಡಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 13 July 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ