Viral News: ದೇವರ ವಿಗ್ರಹ ಕೆಡವಲು ಬಂದ ವ್ಯಕ್ತಿ ಏಕಾಏಕಿ ವಿಗ್ರಹದ ಮುಂದೆಯೇ ಬಿದ್ದು ಸಾವು

ಕಂಠ ಪೂರ್ತಿ ಕುಡಿದ ವ್ಯಕ್ತಿಯೊರ್ವ ಬೌದ್ಧ ಮಂದಿರಕ್ಕೆ ನುಗ್ಗಿ ಅಲ್ಲಿರುವ ಬುದ್ಧನ ಪ್ರತಿಮೆಯನ್ನು ಏರಿ ವಿಗ್ರಹ ಕೆಡವಲು ಯತ್ನಿಸಿದ್ದಾನೆ. ಈ ವೇಳೆ ಪ್ರತಿಮೆಯ ಚೂಪಾದ ಭಾಗವೊಂದು ಆತನ ಎದೆಗೆ ಚುಚ್ಚಿಕೊಂಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಅಲ್ಲೇ ಬಿದ್ದು ಸಾವನ್ನಪ್ಪಿದ್ದಾನೆ.

Viral News: ದೇವರ ವಿಗ್ರಹ ಕೆಡವಲು ಬಂದ ವ್ಯಕ್ತಿ ಏಕಾಏಕಿ ವಿಗ್ರಹದ ಮುಂದೆಯೇ ಬಿದ್ದು ಸಾವು
Follow us
|

Updated on: May 22, 2024 | 2:57 PM

ಥಾಯ್ಲೆಂಡ್‌: ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ  ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್‌ನ ಚೋನ್‌ಬುರಿ ಪ್ರಾಂತ್ಯದ ಬಾನ್‌ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಒಳಗೆ ಏಕಾಏಕಿ ನುಗ್ಗಿ ವಿಧ್ವಂಸಕ ಕೃತ್ಯ ಎಸಗುತ್ತಿದ್ದಂತೆ ಅಲ್ಲಿದ್ದ ಬೌದ್ಧ ಸನ್ಯಾಸಿಗಳು ಆತನನ್ನು ತಡೆಯಲು ಪ್ರಯತ್ನಿಸಿದ್ದರು, ಆದರೆ ಬೌದ್ಧ ಸನ್ಯಾಸಿಗಳ ಮೇಲೂ ಹಲ್ಲೆ ನಡೆಸಿ ದೇವರ ವಿಗ್ರಹವನ್ನು ಕೆಡವಲು ಮುಂದಾದ ವೇಳೆ ಏಕಾಏಕಿ ನೆಲದ ಮೇಲೆ ಬಿದ್ದು ಅಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಕಷ್ಟು ನೆಟ್ಟಿಗರು ಇದು ‘ಕರ್ಮದ ಫಲ’ ಎಂದು ಕಾಮೆಂಟ್​​ ಮಾಡಿದ್ದಾರೆ.

ಈ 49 ವರ್ಷದ ಥಾಯ್ ಎಂಬ ವ್ಯಕ್ತಿ ದೇವಾಲಯದ ಮುಖ್ಯ ಸಭಾಂಗಣವನ್ನು ಧ್ವಂಸಗೊಳಿಸುತ್ತಿದ್ದಾಗ, ಬುದ್ಧನ ಪ್ರತಿಮೆಯ ತೀಕ್ಷ್ಣವಾದ ಭಾಗವೊಂದು ಅವನ ತಲೆ ಮತ್ತು ಎದೆಗೆ ಚುಚ್ಚಿದೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಫೆಬ್ರವರಿ 27ರಂದು ಈ ಘಟನೆ ನಡೆದಿದ್ದು, ಗಲಭೆ ವೇಳೆ ಸಂಭವಿಸಿದ ಈ ವಿಚಿತ್ರ ಸಾವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಲ್ಲಿದೆ.

ಇದನ್ನೂ ಓದಿ: ರಸ್ತೆಯಿಂದ ಸೀದಾ ಮನೆಯ ಛಾವಣಿಗೆ, ಇದಕ್ಕೆ ಹೇಳುವುದು ಇಂತ ವಿಷಯದಲ್ಲಿ ಹುಡುಗಿಯರನ್ನು ನಂಬಬಾರದು 

The Thaiger ನ ವರದಿಯ ಪ್ರಕಾರ, ಪೊಲೀಸರು ದೇವಸ್ಥಾನದ ಒಳಗೆ ಹೋಗಿ ನೋಡಿದಾಗ ರಕ್ತದಲ್ಲಿ ಮಡುವಿನಲ್ಲಿ ವ್ಯಕ್ತಿಯ ಶವ ಕಂಡು ಬೆಚ್ಚಿಬಿದ್ದಿದ್ದರು. ಆತ ಅತಿ ಎತ್ತರದ ಬುದ್ಧನ ಪ್ರತಿಮೆಯನ್ನು ಏರಿ ಒಡೆಯಲು ಯತ್ನಿಸುತ್ತಿದ್ದಾಗ, ಪ್ರತಿಮೆಯ ಚೂಪಾದ ಭಾಗವೊಂದು ಆತನ ಎದೆಗೆ ಚುಚ್ಚಿಕೊಂಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಅಲ್ಲೇ ಬಿದ್ದು ಸಾವನ್ನಪ್ಪಿರುವುದು ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ