Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅತ್ಯಾಚಾರ ಎಸಗಲು ಮುಂದಾದ ಕಾಮಾಂಧನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು; ವಿಡಿಯೋ ವೈರಲ್

ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಿಳೆಯರು, ಹೆಣ್ಣುಮಕ್ಕಳು ಮಾತ್ರವಲ್ಲದೆ ಕಾಮಾಂಧರು ಪ್ರಾಣಿಗಳ ಮೇಲೂ ಅತ್ಯಾಚಾರ ನಡೆಸುತ್ತಿದ್ದಾರೆ. ಇಂತಹ ಹೀನ ಕೃತ್ಯಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇವೆ. ಇದೀಗ ಇಲ್ಲೊಬ್ಬ ವ್ಯಕ್ತಿ ಕೂಡಾ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಬಿಸಾಕಿದೆ. ಕೊನೆಗೆ ಹಸುವಿನ ದಾಳಿಯಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

Viral Video: ಅತ್ಯಾಚಾರ ಎಸಗಲು ಮುಂದಾದ ಕಾಮಾಂಧನನ್ನು ಕೊಂಬಿನಿಂದ ತಿವಿದು  ಬಿಸಾಕಿದ ಹಸು; ವಿಡಿಯೋ ವೈರಲ್
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 18, 2024 | 2:20 PM

ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಹಸುವಿನ ಮೇಲೆ ಅತ್ಯಾಚಾರ ಎಸಗಿದ, ಶ್ವಾನದ ಮೇಲೆ ಅತ್ಯಾಚಾರ ಎಸಗಿದ ಹೀನ ಕೃತ್ಯದ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇವೆ. ಇದೀಗ ಇಲ್ಲೊಬ್ಬ ಕಾಮಾಂಧ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಮಾಡಿದ ತಪ್ಪಿಗೆ ಆತನಿಗೆ ತಕ್ಕ ಶಾಸ್ತಿಯಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದ್ದು, ಇಲ್ಲಿಗೆ ಪ್ರವಾಸ ಬಂದಿದ್ದ ರಷ್ಯಾದ 26 ವರ್ಷದ ಕುವ್ಶಿನೋವ್ ಎಂಬಾತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಹೀಗೆ ಅತ್ಯಾಚಾರ ಎಸಗಲು ಹೋದ ಸಂದರ್ಭದಲ್ಲಿ ಕೋಪಗೊಂಡ ಹಸು ಈ ಕಾಮಾಂಧನ ಮೇಲೆ ಕೊಂಬಿನಿಂದ ಸರಿಯಾಗಿ ದಾಳಿ ನಡೆಸಿದೆ. ಕೊನೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತ ಪೋಸ್ಟ್ ಒಂದನ್ನು Beautiful Russia ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲು ಬಂದ ವ್ಯಕ್ತಿಯ ಮೇಲೆ ಭೀಕರವಾಗಿ ದಾಳಿ ನಡೆಸುವ ದೃಶ್ಯವನ್ನು ಕಾಣಬಹುದು. ಕುಡಿದ ಮತ್ತಿನಲ್ಲಿ ರಷ್ಯಾ ಪ್ರವಾಸಿಗನೊಬ್ಬ ಸಂಪೂರ್ಣ ಬೆತ್ತಲೆಯಾಗಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಆ ಸಂದರ್ಭದಲ್ಲಿ ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಡಿ, ಸರಿಯಾಗಿ ದಾಳಿ ನಡೆಸಿದೆ. ಕೊನೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ಆಗಸ್ಟ್ 17 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಅವನನ್ನು ಬಚಾವ್ ಮಾಡಿ ಪೊಲೀಸರು ತಪ್ಪು ಮಾಡಿದ್ರು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಕಾಮುಕನ ಸೊಕ್ಕಡಗಿಸಿದ ಹಸುವಿಗೆ ನನ್ನ ಸಲಾಂ’ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ