AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು
Wedding tragedy
ಅಕ್ಷತಾ ವರ್ಕಾಡಿ
|

Updated on:Jan 24, 2024 | 1:07 PM

Share

ಇತ್ತೀಚೆಗೆ ಆಘಾತಕಾರಿ ಘಟನೆಯೊಂದು ಇಟಲಿಯಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಡ್ಯಾನ್ಸ್ ಫ್ಲೋರ್ ಕುಸಿದ ಪರಿಣಾಮ ವಧು, ವರ ಸೇರಿ 37 ಮಂದಿ ಅತಿಥಿಗಳು 25 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ನವವಿವಾಹಿತರಾದ ಪಾವೊಲೊ ಮುಗ್ನೈನಿ ಮತ್ತು ವಲೇರಿಯಾ ಯಬಾರಾ ಇಬ್ಬರು ಇಟಲಿಯ ಪಿಸ್ಟೋಯಾದಲ್ಲಿನ ಕಾನ್ವೆಂಟ್‌ನಲ್ಲಿ ಸುಮಾರು 150 ಜನರನ್ನು ತಮ್ಮ ಮದುವೆಗೆ ಆಹ್ವಾನಿಸಿದರು. ಮದುವೆಯ ರಾತ್ರಿ ಡ್ಯಾನ್ಸ್ ಮಾಡುತ್ತಿರುವಾಗ ಈ ಘಟನೆ ಸಂಭವಿಸಿದ್ದು, ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ನವವಿವಾಹಿತರ ಚಿತ್ರವು ಅಂತರ್ಜಾಲದಲ್ಲಿ ವೈರಲ್​​ ಆಗುತ್ತಿದ್ದು, ಇದರಲ್ಲಿ ಪಾವೊಲೊ ಮತ್ತು ವಲೇರಿಯಾ ಪ್ರತ್ಯೇಕ ಆಸ್ಪತ್ರೆಯ ಬೆಡ್‌ಗಳಲ್ಲಿ ಅಕ್ಕಪಕ್ಕದಲ್ಲಿ ಡ್ರಿಪ್ಸ್​​​ ಹಾಕಿ ಮಲಗಿರುವುದನ್ನು ಕಾಣಬಹುದು. ದುರಂತ ಘಟನೆಯ ಬಗ್ಗೆ ತ್ವರಿತ ಕ್ರಮ ಕೈಗೊಂಡು, ದಂಪತಿಗಳು ಮದುವೆ ಹಾಲ್​​​ನ ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ಪ್ರಕರಣವನ್ನು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:06 pm, Wed, 24 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್