ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 11, 2022 | 1:26 PM

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ