ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​

ಈ ವಿಲಕ್ಷಣ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​
ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 15, 2022 | 11:16 AM

ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಪಾನಮತ್ತ ವ್ಯಕ್ತಿಯೊಬ್ಬ ಪೊಲೀಸ್ ವಾಹನದ ಮೇಲೆ ಹತ್ತಿಕೊಂಡು ಜಾಲಿ ರೈಡ್​​​  ಹೋದ ವಿಲಕ್ಷಣ ಘಟನೆ ನಡೆದಿದ್ದು, ಸದ್ಯ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪಾನಮತ್ತ ವ್ಯಕ್ತಿ ಚಲಿಸುತ್ತಿರುವ ಪೊಲೀಸ್ ಕಾರಿನ ಮೇಲೆ ಶರ್ಟ್ ಇಲ್ಲದೆ ಕುಳಿತುಕೊಂಡು ಉತ್ಸಾಹದಲ್ಲಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ. ಇಂಡಿಯಾ. ಕಾಮ್ ಪ್ರಕಾರ ಹೈದರಾಬಾದ್‌ನ ಆಸಿಫ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗಲಾಟೆಯನ್ನು ಸೃಷ್ಟಿಸಿದ ವ್ಯಕ್ತಿಯನ್ನು ಅಜಯ್ ಸಿಂಗ್ (28) ಎಂದು ಗುರುತಿಸಲಾಗಿದೆ. ಈತ ಕುಡಿದ ಮತ್ತಿನಲ್ಲಿ ಪೊಲೀಸ್ ಗಸ್ತು ಕಾರಿನ ವಿಂಡ್‌ಶೀಲ್ಡ್ ಮತ್ತು ಹಿಂಬದಿಯ ಮಿರರ್​ನ್ನು ಒಡೆದು ಹಾಕಿದ್ದಾನೆ.

ಈ ವಿಲಕ್ಷಣ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮದ್ಯವು ಅತ್ಯಾಚಾರ ಮತ್ತು ಕೊಲೆಗೆ ಮಾತ್ರವಲ್ಲದೆ ಪೊಲೀಸ್ ವಾಹನಗಳ ಮೇಲೆ ದಾಳಿಗೂ ಕಾರಣವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಸೋಮವಾರ ರಾತ್ರಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಗಲಾಟೆ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರನ್ನು ಸ್ವೀಕರಿಸಿದ ನಂತರ, ಪೊಲೀಸ್ ಗಸ್ತು ವಾಹನವು ಆ ಪ್ರದೇಶವನ್ನು ತಲುಪಿದ್ದು, ಟ್ರಾಫಿಕ್​ನಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ ವಾಹನದ ಮೇಲೆ ಸಿಂಗ್ ಆಶ್ಚರ್ಯಚಕಿತವಾಗಿ ಹತ್ತಿದ್ದಾನೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸತತ 3ನೇ ದಿನ ಇಡಿ ವಿಚಾರಣೆ ಎದುರಿಸಲಿರುವ ರಾಹುಲ್ ಗಾಂಧಿ

ಈ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, ಆತ ಕುಡಿದು ಜಗಳ ಮಾಡಿ,  ತೊಂದರೆ ಸೃಷ್ಟಿಸಿ ಜನರಿಗೆ ಬೆದರಿಕೆ ಹಾಕುತ್ತಿದ್ದ. ನಮ್ಮ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಅವನು ಮೊದಲು ಹೊರಟುಹೋಗಿದ್ದು, ಇದ್ದಕ್ಕಿದ್ದಂತೆ ಕೊಡಲಿಯಂತಹ ಆಯುಧದೊಂದಿಗೆ ಹಿಂತಿರುಗಿ ಚಲಿಸುತ್ತಿದ್ದ ಗಸ್ತು ಕಾರಿನ ಮೇಲೆ ಹಾರಿದ್ದಾನೆ. ಇದೆಲ್ಲವೂ ಎಷ್ಟು ವೇಗವಾಗಿ ನಡೆಯಿತು ಎಂದರೆ ನಮ್ಮ ಅಧಿಕಾರಿಗಳೂ ಆಶ್ಚರ್ಯಚಕಿತರಾದರು. ಬಹಳ ಕಷ್ಟಪಟ್ಟು ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:15 am, Wed, 15 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ