Viral Video: ಹಾಯ್​​​ ಮೋದಿ ತಾತ ಎಂದ ಪುಟಾಣಿ, ಪ್ರಧಾನಿ ಮೋದಿ ಪ್ರತಿಕ್ರಿಯೆ ಹೇಗಿತ್ತು ನೋಡಿ? 

ಭಾನುವಾರ ನಡೆದ  ಭಾರತ ಮತ್ತು ಆಸ್ಟ್ರೇಲಿಯ ನಡುವಿನ  ಐಸಿಸಿ  ವಿಶ್ವಕಪ್ ಫೈನಲ್ ಪಂದ್ಯಾವಳಿಯನ್ನು  ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಹಲವು ಗಣ್ಯರು ಮೋದಿ ಸ್ಟೇಡಿಯಂಗೆ ಬಂದಿದ್ದರು. ಆ ವೇಳೆಯಲ್ಲಿ ಸ್ಟೇಡಿಯಂನಲ್ಲಿ ಪ್ರಧಾನಿ ಮೋದಿಯವರನ್ನು ಕಂಡ ಪುಟ್ಟ ಮಗುವೊಂದು  ಖುಷಿಯಿಂದ  ಕೈ ಸನ್ನೆ ಮಾಡುತ್ತಾ ಮುದ್ದಾಗಿ ಹಾಯ್ ಎಂದು ಹೇಳಿದ್ದಾಳೆ.  ಈ ಸುಂದರವಾದ  ವೀಡಿಯೋ  ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video: ಹಾಯ್​​​ ಮೋದಿ ತಾತ ಎಂದ ಪುಟಾಣಿ, ಪ್ರಧಾನಿ ಮೋದಿ ಪ್ರತಿಕ್ರಿಯೆ ಹೇಗಿತ್ತು ನೋಡಿ? 
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 22, 2023 | 11:41 AM

ಅಹಮದಬಾದ್​​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಬಂದಿದ್ದರು. ಆ ಕುರಿತ ಫೋಟೋ, ವೀಡಿಯೋ ಕ್ಲಿಪ್​​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಅದೇ ರೀತಿ ಇಲ್ಲೊಂದು ವಿಶ್ವಕಪ್ ಫೈನಲ್ ಪಂದ್ಯಾವಳಿಯ ಸಂದರ್ಭದಲ್ಲಿನ ಮುದ್ದಾದ ವಿಡಿಯೋ  ವೈರಲ್ ಆಗುತ್ತಿದೆ.  ವಿಶ್ವಕಪ್ ಫೈನಲ್ ಪಂದ್ಯಾವಳಿಯ ವೇಳೆ  ಸ್ಟೇಡಿಯಂನಲ್ಲಿ ಪ್ರಧಾನಿ ಮೋದಿಯವರನ್ನು ಕಂಡ ಪುಟ್ಟ ಬಾಲಕಿಯೊಬ್ಬಳು  ಬಹಳ ಖುಷಿಯಿಂದ  ಕೈ ಸನ್ನೆ ಮಾಡುತ್ತಾ  ಹಾಯ್ ಎಂದು ಹೇಳಿದ್ದಾಳೆ. ಆ ಪುಟ್ಟ ಮಗುವಿನ ಅಭಿಮಾನಕ್ಕೆ ಪ್ರತಿಕ್ರಿಯೆ ನೀಡಿದ ಮೋದಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ಈ ವೈರಲ್ ವಿಡಿಯೋವನ್ನು  @s_sagarshah ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ ಸುಂದರವಾದ ವಿಡಿಯೋ ಕ್ಲಿಪ್ನಲ್ಲಿ  ಸ್ಟೇಡಿಯಂನಲ್ಲಿ ಕುಳಿತು  ಪ್ರಧಾನಿ ಮೋದಿ ವಿಶ್ವಕಪ್ ಫೈನಲ್ ಪಂದ್ಯಾವಳಿಯನ್ನು ವೀಕ್ಷಿಸುತ್ತಿದ್ದ ವೇಳೆಯಲ್ಲಿ ಅವರನ್ನು ಕಂಡ ಪುಟ್ಟ  ಬಾಲಕಿಯೊಬ್ಬಳು ಖುಷಿಯಿಂದ ಕೈ ಸನ್ನೆ ಮಾಡುತ್ತಾ  ಮೋದಿಯವರಿಗೆ  ಹಾಯ್ ಎಂದು ಹೇಳುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Sagar Shah (@s_sagarshah)

ಈ ವಿಡಿಯೋದಲ್ಲಿ  ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸುತ್ತಿದ್ದ ನರೇಂದ್ರ ಮೋದಿಯವರನ್ನು ಕಂಡ ಪುಟ್ಟ ಬಾಲಕಿಯೊಬ್ಬಳು ಖುಷಿಯಿಂದ ಕೈಸನ್ನೆ ಮಾಡುತ್ತಲೇ  ಮೋದಿಯವರಿಗೆ  ಹಾಯ್ ಎಂದು ಹೇಳುತ್ತಾಳೆ.  ಅಲ್ಲೇ ಸ್ವಲ್ಪ ದೂರದಲ್ಲಿ ಕುಳಿತು ಕ್ರಿಕೆಟ್ ಪಂದ್ಯಾವಳಿಯನ್ನು  ವೀಕ್ಷಿಸುತ್ತಿದ್ದ ಪ್ರಧಾನಿ ಮೋದಿಯವರು  ಈ ಪುಟ್ಟ ಬಾಲಕಿಯನ್ನು ನೋಡಿ, ಪ್ರತಿಕ್ರಿಯಿಸಿದ ಆಕೆಗೂ ಹಾಯ್ ಎಂದು ಕೈಸನ್ನೆಯಲ್ಲೇ ಪ್ರತಿಕ್ರಿಯಿಸುತ್ತಾರೆ. ಈ ಸುಂದರವಾದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ: ಬರಿಗೈಯಲ್ಲಿ ದೈತ್ಯ ಅನಕೊಂಡ ಹಿಡಿದು, ಒಲವಿನ ಮುತ್ತಿಟ್ಟ ಎಂಟೆದೆ ಭಂಟ

ಎರಡು ದಿನಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾದ ಈ ಮುದ್ದಾದ ವಿಡಿಯೋ 8.3 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  413K ಲೈಕ್ಸ್ಗಳನ್ನು ಪಡೆದುಕೊಂಡಿದೆ. ಅಲ್ಲದೆ  ಪುಟ್ಟ ಹುಡುಗಿಯ ಅಭಿಮಾನಕ್ಕೆ  ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ ನಡೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:40 am, Wed, 22 November 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ