AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​

ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​
ಆಡಿ ಕಾರಿನಲ್ಲಿ ಟೀ ಸ್ಟಾಲ್Image Credit source: Instagram
ಅಕ್ಷತಾ ವರ್ಕಾಡಿ
|

Updated on:Apr 09, 2023 | 12:09 PM

Share

ಮುಖ್ಯಾಂಶಗಳು

  • ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
  • ಕಾರಿನ ಮಾಲೀಕರು ತಮ್ಮ ಹೊಸ ಮಾರ್ಕೆಟಿಂಗ್ ತಂತ್ರದ ಭಾಗವಾಗಿ ಆಡಿ ಕಾರನ್ನು ಬಳಸುತ್ತಿದ್ದಾರೆ ಎಂದು ಬಳಕೆದಾರರೊಬ್ಬರು ಕಾಮೆಂಟ್​​ ಮಾಡಿದ್ದಾರೆ.
  • ವಾರದ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್​ ಮಾಡಲಾದ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ಐಷಾರಾಮಿ ಕಾರುಗಳಲ್ಲಿ ಮುಂಚೂಣಿಯಲ್ಲಿರುವ ಆಡಿ ಕಾರು(Audi Car)  ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಜೊತೆಗೆ ಆಡಿ ಕಾರು ಎಂದಾಕ್ಷಣ ನೆನಪಾಗುವುದೇ ಐಷಾರಾಮಿ ಜೀವನ. ಆದ್ರೆ ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಾರದ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್​ ಮಾಡಲಾದ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋವನ್ನು ಆಶಿಶ್ತ್ರಿವೇದಿ 24 ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್​​ ಮಾಡಲಾಗಿದೆ. ಈ ವಿಡಿಯೋದಲ್ಲಿ ರಸ್ತೆಯ ಬದಿಯಲ್ಲಿ ಆಡಿ ಕಾರು ನಿಲ್ಲಿಸಲಾಗಿದೆ. ಕಾರಿನ ಡಿಕ್ಕಿಯನ್ನು ತೆರೆದು ಚಿಕ್ಕ ಸ್ಟಾಲ್​​ ರೀತಿಯಲ್ಲಿ ಟೀ ಮಾರುತ್ತಿರುವುದನ್ನು ಕಾಣಬಹುದು. ಕ್ಯಾಮರಾದಲ್ಲಿ ಸೆರೆಯಾಗಿರುವ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್​​ ಮೂಲಕ ಚರ್ಚೆಗಿಳಿದ್ದಿದ್ದಾರೆ.

ಕಾರಿನ ಮಾಲೀಕರು ತಮ್ಮ ಹೊಸ ಮಾರ್ಕೆಟಿಂಗ್ ತಂತ್ರದ ಭಾಗವಾಗಿ ಆಡಿ ಕಾರನ್ನು ಬಳಸುತ್ತಿದ್ದಾರೆ ಎಂದು ಬಳಕೆದಾರರೊಬ್ಬರು ಕಾಮೆಂಟ್​​ ಮಾಡಿದರೆ, ಮತ್ತೊಬ್ಬರು ಆಡಿ ಕಾರಿನ ಮಾಲೀಕರಿಗೇಕೆ ಟೀ ಮಾರುವ ದುಸ್ಥಿತಿ ಬಂತು ಎಂದು ಬರೆದುಕೊಂಡಿದ್ದಾರೆ. ಐಷಾರಾಮಿ ಕಾರುಗಳಿಂದ ಚಹಾವನ್ನು ಮಾರಾಟ ಮಾಡುವುದು ವ್ಯಾಪಾರ ಮಾಲೀಕರ ವಿಶಿಷ್ಟ ಮಾರ್ಕೆಟಿಂಗ್ ತಂತ್ರವಾಗಿದೆ ಎಂದು ಮತ್ತೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ, ವ್ಯವಹಾರಕ್ಕೆ ಹೆಸರನ್ನು ನೀಡಿ ಅದನ್ನು ‘ಆಡಿ ಚಾಯ್‌ವಾಲಾ’ ಎಂದು ಕರೆದಿದ್ದಾರೆ. ಅನೇಕ ಬಳಕೆದಾರರು ವೀಡಿಯೊವನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿ ಆಡಿ ಖರೀದಿಸಿ ಈಗ ಕಾರಿನ ಮೇಲೆ ಇಎಂಐ ಪಾವತಿಸಲು ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವು ಬಳಕೆದಾರರು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Sun, 9 April 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ