Viral Video: ಬೆಲ್ಲ ತಯಾರಿಕೆಯ ವಿಡಿಯೋ ನೋಡಿ ನೆಟ್ಟಿಗರು ಶಾಕ್​​​, ನೀವು ಒಮ್ಮೆ ನೋಡಿ

ಸಿಹಿಯನ್ನು ಯಾರು ಇಷ್ಟ ಪಡಲ್ಲ ಹೇಳಿ, ಇಷ್ಟ ಪಟ್ಟು ಸೇವಿಸುವ ಸಿಹಿ ತಿಂಡಿಗಳಲ್ಲಿ ಸಿಹಿಕಾರಕವಾಗಿ ಬೆಲ್ಲ ಅಥವಾ ಸಕ್ಕರೆಯನ್ನು ಬಳಸುತ್ತಾರೆ. ಮಧುಮೇಹಿಗಳು ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದೇ ಹೆಚ್ಚು. ಆದರೆ ಎಂದಾದರೂ ಕಾರ್ಖಾನೆಗಳಲ್ಲಿ ಬೆಲ್ಲ ಉತ್ಪಾದನೆಯ ಪ್ರಕ್ರಿಯೆಯೂ ಹೇಗಿರುತ್ತದೆ ಎಂದು ಯೋಚಿಸಿದ್ದೀರಾ. ಇದೀಗ ಕಾರ್ಖಾನೆಯಲ್ಲಿ ಬೆಲ್ಲ ಉತ್ಪಾದನೆ ಪ್ರಕ್ರಿಯೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video: ಬೆಲ್ಲ ತಯಾರಿಕೆಯ ವಿಡಿಯೋ ನೋಡಿ ನೆಟ್ಟಿಗರು ಶಾಕ್​​​, ನೀವು ಒಮ್ಮೆ ನೋಡಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 24, 2024 | 10:27 AM

ಬೆಲ್ಲ ಸಿಹಿಯಾಗಿರುವುದರ ಜೊತೆಗೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದ್ದು ದಿನನಿತ್ಯದ ಆಹಾರಗಳಲ್ಲಿ ಈ ಬೆಲ್ಲವನ್ನು ಬಳಸುವವರ ಸಂಖ್ಯೆಯೂ ಹೆಚ್ಚೇ ಎನ್ನಬಹುದು. ಇತ್ತೀಚಿನ ದಿನಗಳಲ್ಲಿ ಬೆಲ್ಲವನ್ನು ಸಾಂಪ್ರದಾಯಿಕ ವಿಧಾನಗಳಿಂದ ತಯಾರಿಸುವವರ ಸಂಖ್ಯೆಯೂ ಕಡಿಮೆಯಾಗಿದ್ದು, ಯಂತ್ರಗಳ ಸಹಾಯದಿಂದ ಕಾರ್ಖಾನೆಗಳಲ್ಲಿ ದಿನಕ್ಕೆ ಬೃಹತ್ ಪ್ರಮಾಣದಲ್ಲಿ ಬೆಲ್ಲವು ಉತ್ಪಾದನೆಯಾಗುತ್ತದೆ. ಇದೀಗ ಕಾರ್ಖಾನೆಯಲ್ಲಿ ಬೆಲ್ಲ ಉತ್ಪಾದನೆಯ ಪ್ರಕ್ರಿಯೆಯ ವಿಡಿಯೋವೊಂದು ಹರಿದಾಡುತ್ತಿದ್ದು ಈ ವಿಡಿಯೋ ನೋಡಿದ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಾರ್ಖಾನೆಯಲ್ಲಿ ಕೆಲಸಗಾರರು ಕಬ್ಬಿನ ರಸವನ್ನು ಹೊರತೆಗೆಯಲು ಯಂತ್ರವನ್ನು ಬಳಸಿದ್ದಾರೆ. ಆ ಬಳಿಕ ಕಬ್ಬಿನ ರಸವನ್ನು ಗಟ್ಟಿಯಾಗುವವರೆಗೆ ಕುದಿಸಲಾಗಿದೆ. ಕುದಿಸಿದ ನಂತರದಲ್ಲಿ ಈ ಬೆಲ್ಲದ ಮಿಶ್ರಣವನ್ನು ನೆಲದ ಮೇಲೆ ಇಡಲಾಗಿದೆ. ಅಲ್ಲಿನ ಕೆಲಸಗಾರರು ಬೆಲ್ಲದ ಮಿಶ್ರಣವನ್ನು ಕೈಯಿಂದ ತೆಗೆದು ಅಚ್ಚು ಮಾಡುತ್ತಿದ್ದಾರೆ. ಈ ವೇಳೆಯಲ್ಲಿ ಕಾರ್ಖಾನೆಯ ಕೆಲಸಗಾರರಲ್ಲಿ ಯಾರು ಕೂಡ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆಲ್ಲ ತಯಾರಿಕೆ ಪ್ರಕ್ರಿಯೆಯಲ್ಲಿ ಬಳಸಲಾದ ಪಾತ್ರೆಗಳು ಅನೈರ್ಮಲ್ಯ ಸ್ಥಿತಿಯಲ್ಲಿರುವುದನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ಇದನ್ನೂ ಓದಿ:ಇದು ಎತ್ತಿನ ಗಾಡಿ ಅಲ್ಲ….. ಮತ್ತೇನು?; ವಿಡಿಯೋ ವೈರಲ್​ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ ಕೆಲವೇ ಕ್ಷಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೈಕ್‌ ಗಳು ಬಂದಿದ್ದು, ಕಾರ್ಖಾನೆಯಲ್ಲಿ ಸ್ವಚ್ಛತೆಯ ಬಗ್ಗೆ ಗಮನ ಕೊಡದೇ ಇದ್ದಿರುವುದಕ್ಕೆ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಈ ವಿಡಿಯೋ ನೋಡಿದ ಬಳಕೆದಾರರೊಬ್ಬರು, “ಇದು ಸಿಮೆಂಟ್ ಅನ್ನು ಬೆರೆಸಿದಂತೆ” ಎಂದು ಟೀಕಿಸಿದ್ದಾರೆ. ಮತ್ತೊಬ್ಬರು ‘ಸರ್ಕಾರ ಏನು ಮಾಡುತ್ತಿದೆ, ಇದನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕೊಟ್ಟವರು ಯಾರು’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು “ಅದು ಅಸಹ್ಯಕರವಾಗಿದೆ, ನಾನು ಅದನ್ನು ತಿಂದಿದ್ದೇನೆ ಎಂದು ನಂಬಲು ಸಾಧ್ಯವಿಲ್ಲ” ಎಂದಿದ್ದಾರೆ. ಹೀಗೆ ಈ ವಿಡಿಯೋವನ್ನು ನೋಡಿ ಬೆಲ್ಲ ಮಾಡುವ ಪ್ರಕ್ರಿಯೆಯ ಬಗ್ಗೆ ಕೆಲವರು ಟೀಕಿಸಿದರೆ, ಇನ್ನು ಕೆಲವರು ಅಲ್ಲಿನ ಸ್ವಚ್ಛಯ ಬಗ್ಗೆ ಗಮನ ಹರಿಸಿದೆ ಇದ್ದದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Tue, 23 January 24

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್