ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯದಲ್ಲೇ ಜೀವನ ಸಾಗಿಸುತ್ತಿದ್ದಾರೆ.

ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
Follow us
ಅಕ್ಷತಾ ವರ್ಕಾಡಿ
|

Updated on: Apr 11, 2024 | 3:16 PM

ಪಶ್ಚಿಮ ಬಂಗಾಳ: ಕಳೆದ ವರ್ಷ ಜೋರಾಗಿ ಸುರಿದ ಮಳೆದಿಂದಾಗಿ ಮಣ್ಣಿನ ಮನೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲದ ಕಾರಣ ವೃದ್ಧೆಯೊಬ್ಬಳು ಕಳೆದ ಒಂದು ವರ್ಷದದಿಂದ ಶೌಚಾಲಯವನ್ನೇ ಆಶ್ರಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. 4 ಅಡಿ ಅಗಲ ಹಾಗೂ 3 ಅಡಿ ಉದ್ದದ ಶೌಚಾಲಯದಲ್ಲೇ ಜೀವನ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಸುಂದ್ರಾಡಿ ಗ್ರಾಮದ ನಿವಾಸಿ ಮಿಥಿಲಾ ಮಹತೋ(66) ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇಬ್ಬರು ಮಕ್ಕಳಿಗೂ ಮದುವೆಯಾಗಿದೆ. ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯವನ್ನೇ ಜೀವನ ಸಾಗಿಸುತ್ತಿದ್ದಾರೆ. ದುರ್ಕು ಗ್ರಾಮ ಪಂಚಾಯತ್ ವೃದ್ಧೆಯ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿದೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಇದೀಗ ಮಹಿಳೆ ಹೃದಯವಿದ್ರಾವಕ ಘಟನೆ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ದುರ್ಕು ಗ್ರಾಮ ಪಂಚಾಯತ್ ಅಧಕ್ಷ್ಯೆ ಚಂದಮೋನಿ ಕರಮುಡಿ ಪ್ರತಿಕ್ರಿಯಿಸಿದ್ದು, ನಮಗೆ ತಮ್ಮ ಬಡಾವಣೆಯಲ್ಲಿ ವೃದ್ಧೆಯೊಬ್ಬರು ಶೌಚಾಲಯದಲ್ಲಿ ವಾಸವಾಗಿರುವುದು ಗೊತ್ತಿರಲಿಲ್ಲ. ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವಿವೇಕ ರಂಗ ಮಾತನಾಡಿ, ಬಡವರಿಗಾಗಿ ಇರುವ ಯೋಜನೆಗಳನ್ನು ಬದಿಗೊತ್ತಲಾಗುತ್ತಿದೆ. ಮೇಲಾಗಿ ಬಡವರ ಆಸರೆಗಾಗಿ ಕೇಂದ್ರ ಸರಕಾರದ ಹಣದಲ್ಲಿ ನಿರ್ಮಿಸಿರುವ ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಆ ಹಣದಲ್ಲಿ ಪಕ್ಷದ ಮುಖಂಡರ ಭವನ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್