Viral Video: ಕೈಮುಗಿದು, ದೇವರ ಚಿನ್ನವನ್ನೇ ಎಗರಿಸಿದ ಕಳ್ಳ; ವೈರಲ್‌ ಆಯ್ತು ವಿಡಿಯೋ

ದೇವಾಲಯದಲ್ಲಿ ಕಳ್ಳತನಕ್ಕೂ ದೇವರಿಗೆ ಕೈ ಮುಗಿದು ಹುಂಡಿ ಹಣವನ್ನು, ದೇವರ ಕಿರೀಟವನ್ನು ಕದ್ದ ಕಳ್ಳರ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಇಲ್ಲೊಬ್ಬ ಕಳ್ಳ ದೇವಾಲಯಕ್ಕೆ ಬಂದು ಅಮ್ಮಾ ನೀನೇ ನನ್ನನ್ನು ಕಾಪಾಡ್ಬೇಕು ಎಂದು ಭಕ್ತಿಯಿಂದ ಕೈ ಮುಗಿದು ದೇವಿ ವಿಗ್ರಹದ ಚಿನ್ನವನ್ನೇ ಎಗರಿಸಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral Video: ಕೈಮುಗಿದು, ದೇವರ  ಚಿನ್ನವನ್ನೇ ಎಗರಿಸಿದ ಕಳ್ಳ; ವೈರಲ್‌ ಆಯ್ತು ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 11, 2024 | 11:52 AM

ಕಳ್ಳನೊಬ್ಬ ಕಳ್ಳತನ ಮಾಡುವ ಮುನ್ನ ಮಾಡಿದ ಒಂದು ಕೆಲಸ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೌದು ದೇವ್ರು ಎಲ್ಲಾ ಕಡೆ ಇರ್ತಾನೆ, ನಾವು ಮಾಡುವ ಸರಿ-ತಪ್ಪುಗಳನ್ನೆಲ್ಲಾ ನೋಡುತ್ತಿರುತ್ತಾನೆ, ಏನಾದ್ರೂ ತಪ್ಪು ಮಾಡಿದ್ರೆ ಆ ತಪ್ಪಿಗೆ ತಕ್ಕ ಶಾಸ್ತಿ ಮಾಡುತ್ತಾನೆ ಎನ್ನುವ ಭಯದಿಂದ ಇಲ್ಲೊಬ್ಬ ಕಳ್ಳ ಅಮ್ಮಾ ನೀನೇ ಕಾಪಾಡ್ಬೇಕು ಎಂದು ದೇವರಿಗೆ ಭಕ್ತಿಯಿಂದ ಕೈ ಮುಗಿದು ದೇವರ ವಿಗ್ರಹದ ಮೇಲಿದ್ದ ಚಿನ್ನದ ಸರವನ್ನೇ ಎಗರಿಸಿದ್ದಾನೆ. ಈ ದೃಶ್ಯ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಅಯ್ಯಯ್ಯೋ ಇದೆಂಥಾ ಅವಸ್ಥೆ ಎಂದು ನೆಟ್ಟಿಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ಈ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮದನಹಳ್ಳಿ ಪಟ್ಟಣದ ಬಾಟಗಂಗಮ್ಮ ದೇವಾಲಯದಲ್ಲಿ ಕಳ್ಳನೊಬ್ಬ ಅಮ್ಮನವರ ಚಿನ್ನವನ್ನು ಕದ್ದಿದ್ದಾನೆ. ಯಾರಿಗೂ ಅನುಮಾನ ಬಾರದಂತೆ ಸಾಮಾನ್ಯ ಭಕ್ತರಂತೆ ಗರ್ಭಗುಡಿಯ ಒಳಗೆ ಬಂದ ಕಳ್ಳ ಭಕ್ತಿಯಿಂದ ಕೈ ಮುಗಿದು, ದೇವರ ವಿಗ್ರಹದ ಮೇಲಿದ್ದ ಚಿನ್ನದ ಸರವನ್ನು ಎಗರಿಸಿ ಎಸ್ಕೇಪ್‌ ಆಗಿದ್ದಾನೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕಳ್ಳನೊಬ್ಬ ಮೊದಲಿಗೆ ದೇವರಿಗೆ ಭಕ್ತಿಯಿಂದ ಕೈ ಮುಗಿದು, ನಂತರ ಯಾರು ಅಲ್ಲಿ ಇಲ್ಲದಿರುವುದನ್ನು ಗಮನಿಸಿ ದೇವಿ ವಿಗ್ರಹದ ಮೇಲಿನ ಚಿನ್ನದ ಸರವನ್ನು ಎಗರಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ

ಆಗಸ್ಟ್‌ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಹಳ ಭಕ್ತಿಯಿಂದ ದೇವರ ಚಿನ್ನವನ್ನು ಕದ್ದಿದ್ದಾನೆʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಇದೆಂಥಾ ಅವಸ್ಥೆ ಎಂದು ತಲೆ ಚಚ್ಚಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ