
ಟ್ರಾಫಿಕ್ ಸಿಗ್ನಲ್ನಲ್ಲಿ ಜೊಮಾಟೊ (Zomato) ಡೆಲಿವರಿ ಬಾಯ್ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬಡತನದ ನಡುವೆಯೂ ತನ್ನ ಗುರಿಯನ್ನು ಸಾಧಿಸಲು ಈ ಯುವಕನ ಕಷ್ಟಪಡುತ್ತಿರುವುದನ್ನು ಕಂಡು ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
@ayusshsanghi ಎಂಬ ಟ್ವಿಟರ್ ಖಾತೆಯಲ್ಲಿ ಮಾರ್ಚ್ 29ರಂದು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 60 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ‘ಈ ವೀಡಿಯೊವನ್ನು ನೋಡಿದ ನಂತರ, ನೀವು ಕಷ್ಟಪಟ್ಟು ಅಧ್ಯಯನ ಮಾಡಲು ಬೇರೆ ಯಾವುದೇ ಪ್ರೇರಣೆ ಅಗತ್ಯವಿಲ್ಲ’ ಎಂದು ಪೋಸ್ಟ್ಗೆ ಕ್ಯಾಪ್ಷನ್ ಬರೆಯಲಾಗಿದೆ.
ಇದನ್ನೂ ಓದಿ: ಈ ಐಸ್ಕ್ರೀಮ್ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್ಕ್ರೀಮ್ ಬೇಕು ಎಂದು ಹಠ ಮಾಡಲ್ಲ!
ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ‘ಬಡತನ ವ್ಯಕ್ತಿಯನ್ನು ಸಮಯಕ್ಕೆ ಮುಂಚಿತವಾಗಿ ಜವಾಬ್ದಾರನನ್ನಾಗಿ ಮಾಡುತ್ತದೆ.’ ಎಂದು ನರಟ್ಟಿಗರೊಬ್ಬರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ