Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ

ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸದ್ದಿಗೆ ಮನೆಯೊಳಗಿದ್ದ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದಿದ್ದು, ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ
Follow us
ಅಕ್ಷತಾ ವರ್ಕಾಡಿ
| Updated By: ಅಕ್ಷಯ್​ ಪಲ್ಲಮಜಲು​​

Updated on: May 24, 2024 | 1:15 PM

ಭಿವಾನಿ: ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಗುಂಡಿನ ದಾಳಿಯ ಸಮಯದಲ್ಲಿ, ಹೊರಗೆ ನಿಂತಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಮನೆಯ ಹೊರಗಡೆ ಏನೋ ಶಬ್ದವಾಗುತ್ತಿರುವುದನ್ನು ಕಂಡ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದು, ಧೈರ್ಯದಿಂದ ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿದ್ದಾಳೆ. ಈ ಫಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ನಿನ್ನೆ(ನವೆಂಬರ್​​ 27) ಬೆಳಗ್ಗೆ 7:30ರ ಸುಮಾರಿಗೆ ಭಿವಾನಿಯ ಡಾಬರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವಂತೆ, ದಾಳಿಕೋರರು ಹರಿಕಿಶನ್ ಎಂಬಾತನ ಮೇಲೆ ಒಂಬತ್ತು ಭಾರೀ ಗುಂಡು ಹಾರಿಸಿದ್ದು ಕಂಡು ಬಂದಿದೆ. ಸದ್ಯ ಹರಿಕಿಶನ್ಗೆ ಅಲ್ಲಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರವಿ ಈ ಹಿಂದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದು, ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಪೊಲೀಸರಿಂದ ತಿಳಿದುಬಂದಿದೆ.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ

ವಿಡಿಯೋದಲ್ಲಿ ಹರಿಕಿಶನ್ ತನ್ನ ಮನೆಯ ಬಳಿ ನಿಂತಿರುವುದನ್ನು ಕಾಣಬಹುದು. ಆ ಸಮಯದಲ್ಲೇ ಏಕಾಏಕಿ ಎರಡು ಬೈಕ್‌ಗಳು ಬಂದಿದ್ದು, ಬೈಕಿನಲ್ಲಿ ಬಂದ ನಾಲ್ವರು ಏಕಾಏಕಿ ಹರಿಕಿಶನ್​ ಮೇಲೆ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅಷ್ಟೊತ್ತಿಗಾಗಲೇ ಮಹಿಳೆಯೊಬ್ಬಳು ಪೊರಕೆ ಹಿಡಿದು ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ಶೂಟರ್‌ಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಲ್ಲಿ ಒಬ್ಬರು ಮಹಿಳೆಯ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ