AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್

ರೈಲು, ಮೆಟ್ರೋಗಳಲ್ಲಿ ಈ ಜೇಬುಗಳ್ಳರ ಕಾಟ ಇದ್ದಿದ್ದೆ. ಇದೀಗ ದೆಹಲಿ ಮೆಟ್ರೋದಲ್ಲಿ ಕಳ್ಳನೊಬ್ಬ ಪ್ರಯಾಣಿಕರ ಮೊಬೈಲ್  ಎಗರಿಸಲು ಮುಂದಾದಾಗ ಯೂಟ್ಯೂಬರ್ ಒಬ್ಬರ ಕೈಗೆ ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಕಳ್ಳ ಸಿಕ್ಕ ಖುಷಿಯಲ್ಲಿ ಯೂಟ್ಯೂಬರ್ ವಿಡಿಯೋ ಮಾಡಿ ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ ಎನ್ನುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 16, 2024 | 11:14 AM

ಸಾಮಾಜಿಕ ಜಾಲತಾಣದಲ್ಲಿ ದೆಹಲಿ ಮೆಟ್ರೋದಲ್ಲಿ ನಡೆಯುವ ಚಿತ್ರ ವಿಚಿತ್ರ ಘಟನೆಗಳ ಬಗೆಗಿನ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವೊಮ್ಮೆ ಪ್ರಯಾಣಿಕರ ನಡುವಿನ ವಾದ ವಿವಾದಗಳು, ಸೀಟಿಗಾಗಿ ನಡೆಯುವ ಜಡೆ ಜಗಳಗಳು, ಪ್ರೇಮಿಗಳ ರೊಮ್ಯಾನ್ಸ್, ರೀಲ್ಸ್ ಹುಚ್ಚಾಟ ಹೀಗೆ ಇಂತಹ ಒಂದಲ್ಲಾ ಒಂದು ಘಟನೆಗಳಿಗೆ ಸಂಬಧಿಸಿದ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯೂಟ್ಯೂಬರ್ ಒಬ್ಬರು, ಮೆಟ್ರೋದಲ್ಲಿ ಪ್ರಯಾಣಿಕರ ಪರ್ಸ್, ಮೊಬೈಲ್  ಕಳ್ಳತನ ಮಾಡುತ್ತಿದ್ದಂತಹ ಜೇಬುಗಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ವಿಡಿಯೋ ಮಾಡುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು @Gharkekalesh ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ದೆಹಲಿ ಮೆಟ್ರೋದಲ್ಲಿ ವ್ಲಾಗರ್ ಕೈಗೆ ಮೊಬೈಲ್ ಕಳ್ಳ ಸಿಕ್ಕಿಬಿದ್ದಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ದೆಹಲಿ ಮೆಟ್ರೋದಲ್ಲಿ ಸಿಕ್ಕಿದ್ದೆ ಚಾನ್ಸ್ ಎನ್ನುತ್ತಾ  ಕಳ್ಳನೊಬ್ಬ ಪ್ರಯಾಣಿಕರ ಜೇಬಿನಿಂದ ಪರ್ಸ್, ಮೊಬೈಲ್ ಎಗರಿಸುವ ಕೆಲಸಕ್ಕೆ ಮುಂದಾಗಿದ್ದಾನೆ. ಅಲ್ಲೇ ವಿಡಿಯೋ ಮಾಡುತ್ತಾ ನಿಂತಿದ್ದ ಇದ್ದ ಯೂಟ್ಯೂಬರ್ ಒಬ್ಬರಿಗೆ ಈತನ ಕಳ್ಳಾಟ ಗೊತ್ತಾಗಿ ಆತನ ಕತ್ತಿನ ಪಟ್ಟಿ ಹಿಡಿದು ಏನ್ ಮಾಡ್ತಿದ್ದೀಯಾ ನೀನು ಎಂದು ಕೇಳುತ್ತಾರೆ. ಅದಕ್ಕೆ ಆ ಕಳ್ಳ ನಾನು ನನ್ನ ಮೊಬೈಲ್ ಹುಡುಕುತ್ತಿದ್ದೇನೆ ಎಂದು ಸುಳ್ಳು ಹೇಳ್ತಾನೆ. ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಖುಷಿಯಲ್ಲಿ ಆ ಯೂಟ್ಯೂಬರ್ ವಿಡಿಯೋ ಮಾಡುತ್ತಾ   ಅಮ್ಮಾ…. ನಾನು ಕಳ್ಳನನ್ನು ಹಿಡಿದುಬಿಟ್ಟೆ  ಎನ್ನುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿ ಇನ್ನು ಮುಂದೆ ಕಳ್ಳತನ ಮಾಡದಂತೆ ಬುದ್ಧಿವಾದ ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಆಸ್ಟ್ರೇಲಿಯಾದ ಬೀದಿಗಳಲ್ಲಿ ಚಪ್ಪಲಿ ಇಲ್ಲದೆ ಬರಿಗಾಲಿನಲ್ಲಿ ನಡೆದಾಡುತ್ತಿರುವ ಜನರು; ಏನಿದು ಹೊಸ ಟ್ರೆಂಡ್

ಮೇ 14 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆ ಯೂಟ್ಯೂಬರ್ ಈ ಕ್ಷಣಕ್ಕಾಗಿ ಅದೆಷ್ಟು ದಿನದಿಂದ ಕಾದು ಕುಳಿತಿದ್ದರೋ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ