AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಾರಿಕೆಯಿಂದ ಬಸ್ ಅಡ್ಡಗಟ್ಟಿ ನೀರು ಕುಡಿದ ಕೋತಿಗಳು; ವಿಡಿಯೋ ವೈರಲ್

ಪ್ರತಿದಿನ, ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವೀಡಿಯೊಗಳು ಬಿಡುಗಡೆಯಾಗುತ್ತವೆ ಮತ್ತು ವೈರಲ್ ಆಗುತ್ತವೆ. ಉರಿ ಬಿಸಿಲಿಗೆ ಮನುಷ್ಯರು ಮಾತ್ರವಲ್ಲ ಪ್ರಾಣಿಗಳಿಗೂ ದಾಹ ತಡೆಯಲು ಸಾಧ್ಯವಾಗುವುದಿಲ್ಲ. ಕೋತಿಗಳ ಗುಂಪೊಂದು ಬಸ್​ಗೆ ಅಡ್ಡಹಾಕಿವೆ. ಈ ಘಟನೆಯನ್ನು ಬಸ್​​ನಲ್ಲಿದ್ದ ಪ್ರಯಾಣಿಕರು ರೆಕಾರ್ಡ್ ಮಾಡಿಕೊಂಡಿದ್ದಾರೆ. ನೀರಿನ ದಾಹಕ್ಕೆ ಬಸ್ ಅಡ್ಡಗಟ್ಟಿದ ಮಂಗಗಳ ವಿಡಿಯೋ ವೈರಲ್ ಆಗಿದೆ. ನೀವಿನ್ನೂ ಈ ವಿಡಿಯೋ ನೋಡಿಲ್ಲವಾದರೆ ನೋಡಿಬಿಡಿ.

ಬಾಯಾರಿಕೆಯಿಂದ ಬಸ್ ಅಡ್ಡಗಟ್ಟಿ ನೀರು ಕುಡಿದ ಕೋತಿಗಳು; ವಿಡಿಯೋ ವೈರಲ್
Monkey Blocked RoadImage Credit source: TV9
ಸುಷ್ಮಾ ಚಕ್ರೆ
|

Updated on: May 22, 2026 | 8:35 PM

Share

ನವದೆಹಲಿ, ಮೇ 22: ಭಾರತದಲ್ಲಿ ಬೇಸಿಗೆಯ ಧಗೆ ಜೋರಾಗಿದೆ. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಶಾಖದ ಮಟ್ಟವು ತುಂಬಾ ತೀವ್ರವಾಗಿದೆ. ನಿಮ್ಮ ಮನೆಯ ಮುಂದೆ ಒಂದು ಬಟ್ಟಲಿನಲ್ಲಿ ಸ್ವಲ್ಪ ನೀರಿಟ್ಟರೆ ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗುತ್ತದೆ. ನೀರು ಸಿಗದೆ ಎಷ್ಟೋ ಪಕ್ಷಿಗಳು ಸಾಯುತ್ತಿವೆ. ಮಹಾರಾಷ್ಟ್ರದಲ್ಲಿ ನೀರಿಗಾಗಿ ಸರ್ಕಾರಿ ಬಸ್ ಅನ್ನು ಮಂಗಗಳ (Monkey Video) ಗುಂಪೊಂದು ತಡೆಯುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು ನೀವೂ ಒಮ್ಮೆ ನೋಡಿ.

ಭಾರತದಲ್ಲಿನ ಹೆಚ್ಚಿನ ತಾಪಮಾನವು ಮನುಷ್ಯರನ್ನು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಪರಿಣಾಮ ಬೀರಿದೆ. ಕಾಡುಗಳಲ್ಲಿನ ಜಲಮೂಲಗಳು ಒಣಗುತ್ತಿರುವುದರಿಂದ, ಪ್ರತಿ ವರ್ಷ ಕಾಡಿನಲ್ಲಿರುವ ಪ್ರಾಣಿಗಳು ಆಹಾರ ಮತ್ತು ನೀರನ್ನು ಹುಡುಕುತ್ತಾ ಜನರು ವಾಸಿಸುವ ಸ್ಥಳಗಳಿಗೆ ಬರುತ್ತವೆ. ಮಹಾರಾಷ್ಟ್ರದಲ್ಲಿ ಮಂಗಗಳ ಗುಂಪೊಂದು ನೀರಿಗಾಗಿ ಸರ್ಕಾರಿ ಬಸ್‌ನ ದಾರಿಯನ್ನು ತಡೆದ ಘಟನೆಗೆ ಸಂಬಂಧಿಸಿದ ವೀಡಿಯೊ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಕೆಲವು ಮಂಗಗಳು ರಸ್ತೆಯಲ್ಲಿ ಕುಳಿತಿವೆ. ಸಾರ್ವಜನಿಕರು ಅವುಗಳಿಗೆ ಕುಡಿಯಲು ನೀರು ನೀಡುತ್ತಿದ್ದಾರೆ. ತುಂಬಾ ಬಾಯಾರಿಕೆಯಾಗಿರುವ ಮಂಗಗಳು ನೀರನ್ನು ಕಸಿದುಕೊಂಡು ಕುಡಿಯುತ್ತಿವೆ. ಇದೆಲ್ಲವೂ ವಿಡಿಯೋದಲ್ಲಿ ದಾಖಲಾಗಿದೆ.

ನೀರಿಗಾಗಿ ಬಸ್ಸನ್ನು ತಡೆದ ಮಂಗಗಳು, ನೀರು ಕುಡಿದು ಬಾಯಾರಿಕೆ ತಣಿಸಿಕೊಂಡ ನಂತರವೇ ಬಸ್ಸಿಗೆ ದಾರಿ ಮಾಡಿಕೊಟ್ಟವು. ಈ ವಿಡಿಯೋ ಪ್ರಸ್ತುತ ಅಂತರ್ಜಾಲದಲ್ಲಿ ಚರ್ಚೆಯಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ