ಪ್ರತಿಯೊಬ್ಬ ತಂದೆತಾಯಿ ಕೂಡಾ ತಮ್ಮ ಮಕ್ಕಳ ಹುಟ್ಟು ಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ, ಉಡುಗೊರೆಗಳನ್ನು ನೀಡುವ ಮೂಲಕ ಬಹಳ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ಇನ್ನೂ ಕೆಲವರಂತೂ ಹುಟ್ಟು ಹಬ್ಬದ ದಿನ ದುಂದುವೆಚ್ಚಗಳನ್ನು ಮಾಡಿ ಪಾರ್ಟಿ ಪಬ್ ಎನ್ನುತ್ತಾ ಎಂಜಾಯ್ ಮಾಡುತ್ತಿರುತ್ತಾರೆ. ಆದರೆ ಇಲ್ಲೊಬ್ಬರು ವ್ಯಕ್ತಿ ಯಾವುದೇ ದುಂದುವೆಚ್ಚವನ್ನು ಮಾಡದೆ ಆ ಹಣದಲ್ಲಿ ಬಡವರಿಗೆ ಸಹಾಯ ಮಾಡುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗಿದ್ದು, ತಂದೆ-ಮಗನ ಈ ಉತ್ತಮ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.
ಈ ಕುರಿತ ವಿಡಿಯೋವೊಂದನ್ನು ಕರ್ನಾಟಕ ಹಿಂದೂ (@karnatakaHindus) ಎಂಬ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ತಂದೆಯೊಬ್ಬರು ತನ್ನ ಮಗನ ಜನ್ಮ ದಿನವನ್ನು ಆಚರಿಸಿದ್ದು ಹೀಗೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ವೈರಲ್ ವಿಡಿಯೋದಲ್ಲಿ ತಂದೆಯೊಬ್ಬರು ಬಡವರಿಗೆ ಸಹಾಯ ಮಾಡುವ ಮೂಲಕ ತಮ್ಮ ಮಗನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿರುವ ದೃಶ್ಯವನ್ನು ಕಾಣಬಹುದು. ತಂದೆಯೊಬ್ಬರು ಬೀದಿಬದಿಯಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾ ಜೀವನ ಸಾಗಿಸುವವರಿಗೆ ಛತ್ರಿ ಹಾಗೂ ಬಟ್ಟೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಮತ್ತು ಮಗ ಅವರೆಲ್ಲರ ಕಾಲಿಗೆ ಬಿದ್ದು, ಆಶೀರ್ವಾದವನ್ನು ಪಡೆದಿದ್ದಾನೆ.
ಇದನ್ನೂ ಓದಿ: ಸ್ವಂತ ಕಂಪನಿಯಲ್ಲಿ ಕೆಲಸಕ್ಕಾಗಿ 2 ಗಂಟೆ ಸರತಿ ಸಾಲಿನಲ್ಲಿ ನಿಂತಿದ್ದ ಈ ಬಿಲಿಯನೇರ್, ಯಾಕೆ ಗೊತ್ತಾ?
ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಚೆಂದದ ಮನ ಮುಟ್ಟುವ ಆಚರಣೆ, ದುಂದುವೆಚ್ಚ ಮಾಡಿ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಬದಲು ಈ ರೀತಿಯಾಗಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: