AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದು ಸೂರಿಲ್ಲದವರ ಬದುಕಿನ ನೈಜ ಚಿತ್ರಣ, ರೈಲು ಹಳಿಗಳ ಪಕ್ಕದಲ್ಲಿ ಕುಳಿತು ಜೀವನ ಕಳೆಯುತ್ತಿರುವ ಕುಟುಂಬ!

ದಿನ ಬೆಳಗಾಗದರೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಕೆಲವು ವಿಡಿಯೋಗಳು ನೆಟ್ಟಿಗರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತದೆ. ಇನ್ನು ಕೆಲವು ವಿಡಿಯೋಗಳು ನೋಡುಗರಿಗೆ ಭಯ ಹುಟ್ಟಿಸುತ್ತದೆ. ಆದರೆ ಇದೀಗ ಮುಂಬೈನ ಹಳಿಗಳ ಮೇಲೆ ಕುಟುಂಬವೊಂದು ಅಡುಗೆ ಮಾಡುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಮಹಿಮ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ರೆಕಾರ್ಡ್ ಮಾಡಲಾಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿವೆ.

Viral Video: ಇದು ಸೂರಿಲ್ಲದವರ ಬದುಕಿನ ನೈಜ ಚಿತ್ರಣ, ರೈಲು ಹಳಿಗಳ ಪಕ್ಕದಲ್ಲಿ ಕುಳಿತು ಜೀವನ ಕಳೆಯುತ್ತಿರುವ ಕುಟುಂಬ!
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 27, 2024 | 3:08 PM

Share

ಬದುಕು ಎಷ್ಟು ಕ್ರೂರಿ ಅಲ್ವಾ, ಕೆಲವರಿಗೆ ಐಷಾರಾಮಿ ಬದುಕು, ಇನ್ನು ಕೆಲವರಿಗೆ ಸೂರಿಲ್ಲದ ಬದುಕು. ಒಬ್ಬರಿಗೆ ಕೂತು ತಿನ್ನುವಷ್ಟು ಇದ್ದರೂ ಆರೋಗ್ಯವಿರುವುದಿಲ್ಲ. ಇನ್ನೊಬ್ಬರಿಗೆ ದುಡಿದರೆ ಮಾತ್ರ ಇವತ್ತಿನ ಜೀವನ ಸಾಗುವುದು. ಎಲ್ಲರ ಬದುಕು ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ನಾಳೆಯ ಭವಿಷ್ಯದ ಚಿಂತೆಯಾದರೆ, ಇನ್ನು ಕೆಲವರಿಗೆ ಇವತ್ತು ಹೊಟ್ಟೆ ತುಂಬಿಸಿಕೊಳ್ಳುವುದು ಹೇಗೆ ಎನ್ನುವ ಆಲೋಚನೆ. ನಮಗೆ ಒಂದು ದಿನ ತಿನ್ನಲು ಆಹಾರವಿಲ್ಲದೇ ಹೋದರೆ, ಹಸಿವನ್ನು ಸಹಿಸುವುದು ಕಷ್ಟವಾಗುತ್ತದೆ. ಅದೆಷ್ಟೋ ಜನರು ಇರಲು ಸೂರು, ಹೊಟ್ಟೆಗೂ ಸರಿಯಾಗಿಲ್ಲದೆ, ರಸ್ತೆ ಬದಿಯಲ್ಲಿ ಅಡುಗೆ ಅಲ್ಲೇ ತಮ್ಮ ಜೀವನವನ್ನು ಕಳೆಯುತ್ತಾರೆ. ಆದರೆ ಇದೀಗ ಯಾವುದೇ ಭಯ ಆತಂಕವಿಲ್ಲದೇ, ಕುಟುಂಬವೊಂದು ರೈಲು ಹಳಿಗಳ ನಡುವೆ ಕುಳಿತು ಒಲೆಯ ಮೇಲೆ ಆಹಾರವನ್ನು ತಯಾರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಈ ವಿಡಿಯೋದಲ್ಲಿ ರೈಲು ಹಳಿಗಳ ನಡುವೆ ಕುಳಿತು ಒಲೆಯ ಮೇಲೆ ಆಹಾರವನ್ನು ತಯಾರಿಸುತ್ತಿದ್ದರೆ ಇತ್ತ ಹುಡುಗಿಯೊಬ್ಬಳು ಓದುತ್ತಿದ್ದಾಳೆ. ಅಲ್ಲೇ ಕೆಲ ಮಕ್ಕಳು ಸುತ್ತಲೂ ಓಡುತ್ತಿದ್ದರೆ, ಇನ್ನು ಕೆಲವರು ಮಲಗಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಮುಂಬೈ ಸೆಂಟ್ರಲ್ ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್‌ಎಂ) ವೀಡಿಯೊವನ್ನು ಗಮನಿಸಿದ್ದು, ಆ ತಕ್ಷಣವೇ ಪಶ್ಚಿಮ ರೈಲ್ವೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಅಬ್ಬಬ್ಬಾ ಚಿರತೆಯ ದಾಳಿಯಿಂದ ಸ್ವಲ್ಪದರಲ್ಲಿಯೇ ಪಾರಾದ ಶ್ವಾನ

ವೈರಲ್​​ ವಿಡಿಯೋ ಇಲ್ಲಿದೆ:

ಈಗಾಗಲೇ ವೈರಲ್ ಆಗಿರುವ ಈ ವಿಡಿಯೋವು 21,000 ಕ್ಕೂ ಹೆಚ್ಚು ವೀಕ್ಷಣೆ ಕಂಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುವ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು, “ತುಂಬಾ ಅಪಾಯಕಾರಿ ದಯವಿಟ್ಟು ಯಾರಾದರೂ ಅದರ ಮೇಲೆ ಕ್ರಮ ತೆಗೆದುಕೊಳ್ಳಿ” ಎಂದರೆ, ಮತ್ತೊಬ್ಬರು “ನಿಮ್ಮ ಜೀವನವು ಅಕ್ಷರಶಃ ಸರಿಯಾದ ಹಾದಿಯಲ್ಲಿದ್ದಾಗ” ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು,” ಇದು ತುಂಬಾ ಅಪಾಯಕಾರಿ ದಯವಿಟ್ಟು ಯಾರಾದರೂ ಕ್ರಮ ತೆಗೆದುಕೊಳ್ಳಿ” ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ