AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಬ್ಬಬ್ಬಾ! ಈ ಪೋರನ ಸ್ಟಂಟಿಂಗ್ ಟ್ಯಾಲೆಂಟ್ ನೋಡಿ, ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಸಾಹಸಮಯ ಸ್ಟಂಟ್ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿ ಮಕ್ಕಳು ಕೂಡ ಜೀವದ ಹಂಗು ತೊರೆದು ಅಪಾಯಕಾರಿ ಸ್ಟಂಟ್ ಗಳನ್ನು ಪ್ರಯತ್ನಿಸುವುದನ್ನು ನೋಡಿರಬಹುದು. ಆದರೆ ಇದೀಗ ಜಾತ್ರೆಯೊಂದರಲ್ಲಿ ಪುಟಾಣಿ ಮಗುವೊಂದು ಉಯ್ಯಾಲೆಯಲ್ಲಿ ಅಪಾಯಕಾರಿ ಸಾಹಸವನ್ನು ಪ್ರದರ್ಶಿಸಿದ್ದು, ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ.

ಸಾಯಿನಂದಾ
| Edited By: |

Updated on: Oct 19, 2024 | 3:53 PM

Share

ಇತ್ತೀಚೆಗಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದ ಬಳಕೆಯೂ ಹೆಚ್ಚಾಗಿದೆ. ಲೈಕ್ಸ್ ಹಾಗೂ ಫಾಲ್ಲೋರ್ಸ್ ಗಳಿಗಾಗಿ ಅಪಾಯಕಾರಿ ವಿಡಿಯೋಗಳನ್ನು ಶೇರ್ ಮಾಡುವುದನ್ನು ನೋಡಿರಬಹುದು. ದೊಡ್ಡವರು ಮಾತ್ರವಲ್ಲ ಮಕ್ಕಳ ಸ್ಟಂಟ್ ವಿಡಿಯೋಗಳು ನೆಟ್ಟಿಗರ ಎದೆ ಝಲ್ ಎನ್ನುವಂತೆ ಮಾಡುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮಗುವು ಸ್ವಿಂಗ್‌ನಲ್ಲಿ ಸಾಹಸ ಪ್ರದರ್ಶಿಸುತ್ತಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

ಈ ವಿಡಿಯೋದಲ್ಲಿ ಮಗು ಹೇಗೆ ನಿರ್ಭಯವಾಗಿ ಸ್ವಿಂಗ್‌ನಲ್ಲಿ ಸಾಹಸ ಪ್ರದರ್ಶಿಸುವುದನ್ನು ನೋಡಬಹುದು. ಇದು ಜಾತ್ರೆಯಲ್ಲಿ ಸೆರೆ ಹಿಡಿಯಲಾದ ದೃಶ್ಯವಾಗಿದ್ದು, ಮಗುವಿಗೆ ಕೇವಲ ಆರು ವರ್ಷ ವಯಸ್ಸಾಗಿರಬೇಕು. ಈ ವಿಡಿಯೋದ ಪ್ರಾರಂಭದಲ್ಲಿ ಮಗುವು ಉಯ್ಯಾಲೆಯೂ ಕೆಳಗೆ ಬರಲು ಕಾಯುತ್ತಿದೆ, ನಂತರ ಇದ್ದಕ್ಕಿದ್ದಂತೆ ಉಯ್ಯಾಲೆಯನ್ನು ಹತ್ತಿ ಸ್ಟಂಟ್ ಗಳನ್ನು ಮಾಡುವಲ್ಲಿ ನಿರತನಾಗಿದ್ದಾನೆ.

ತದನಂತರದಲ್ಲಿ ಮೇಲಿನಿಂದ ಕೆಳಕ್ಕೆ ಜಿಗಿದಿದ್ದು ಈ ಮಗುವಿನ ಸ್ಟಂಟ್ ನೋಡಿ, ಅಲ್ಲೇ ಇದ್ದ ಜನರು ಹೆದರಿಕೊಂಡಿದ್ದಾರೆ. ಆದರೆ, ಅಲ್ಲೇ ಅನೇಕ ಜನರಿದ್ದರೂ ಕೂಡ ಯಾರೂ ಮಗುವನ್ನು ಈ ಅಪಾಯಕಾರಿ ಸ್ಟಂಟ್ ಮಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾತ್ರ ಮಾಡಿಲ್ಲ. ಈ ವಿಡಿಯೋವನ್ನು Gulzar sahab ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಇದನ್ನೂ ಓದಿ: ಅಮ್ಮಾ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಅತ್ತ ಬಾಲಕನನ್ನು ತನ್ನ ಬಳಿಯೇ ಕೂರಿಸಿಕೊಂಡ ಬಸ್‌ ಚಾಲಕ

ಈ ವಿಡಿಯೋಗಳು ಅಧಿಕ ವೀಕ್ಷಣೆಗಳನ್ನು ಕಂಡಿದ್ದು ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದು ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗೆ ನೆಟ್ಟಿಗರೊಬ್ಬರೂ, ‘ಅವನು ಮನೆಯ ಹಿರಿಯ ಮಗನಾಗಿರಬೇಕು’ ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಕಲೆ ಗೊತ್ತಿಲ್ಲದವರು ಇದರಿಂದ ಕಲಿಯಬೇಕು’ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು, ‘ ಕುಟುಂಬವು ಈ ಮಗುವಿನಿಂದ ಬಲವಂತವಾಗಿ ಸ್ಟಂಟ್ ಗಳನ್ನು ಮಾಡಿಸುತ್ತಿದೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ ಈ ಅಪಾಯಕಾರಿ ಸ್ಟಂಟ್ ಮಗುವಿನ ಜೀವಕ್ಕೆ ತೊಂದರೆಯಾಗುವುದಂತೂ ಪಕ್ಕಾ’ ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ