Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಮಳೆ ಸುರಿಯುವ ಸಂದರ್ಭಗಳಲ್ಲಿ  ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಏಕೆಂದ್ರೆ ರಸ್ತೆ ಮೇಲೆ ಹರಿಯುತ್ತಿರುವ ಮಳೆ ನೀರಿನಿಂದ ವಾಹನಗಳು ಸ್ಕಿಡ್ ಆಗಿ ಅಪಘಾತಗಳು ಸಂಭವಿಸುತ್ತದೆ. ಅದೇ ರೀತಿ ಮೊನ್ನೆ ಸುರಿದ  ದಿಢೀರ್ ಮಳೆಯಿಂದಾಗಿ  ಕೊಡಗಿನ ಬೋಯಿಕೇರಿ ತಿರುವಿನಲ್ಲಿ  ವೇಗವಾಗಿ ಬರುತ್ತಿದ್ದ ಮಾರುತಿ 800 ಕಾರ್ ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರು  ನೇರವಾಗಿ ಪಕ್ಕದ ಸಣ್ಣ ಕಂದಕ್ಕೆ  ಉರುಳಿಬಿದ್ದಿದೆ. ಈ  ರಸ್ತೆ ಅಪಘಾತ ಕುರಿತ ವಿಡಿಯೋ ಇದೀಗ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 06, 2024 | 1:16 PM

ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ವಾಹನ ಚಲಾಯಿಸುವಾಗ ಪ್ರತಿಯೊಂದು ಸಣ್ಣ ವಿಷಯಕ್ಕೂ ವಿಶೇಷ ಗಮನ ನೀಡಬೇಕಾಗುತ್ತದೆ. ಏಕೆಂದ್ರೆ  ಮಳೆಯಿಂದಾಗಿ  ರಸ್ತೆ ಗುಂಡಿ, ಗೋಚರದ ಕೊರತೆ, ಜಾರು ಮೇಲ್ಮೈಗಳ  ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇದೇ ಕಾರಣಕ್ಕೆ ಮಳೆಯ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಹಾಗೂ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಇದೇ ರೀತಿ ಮೊನ್ನೆ  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದಂತಹ ಮಾರುತಿ 800 ಕಾರು ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ಪಕ್ಕದ ಸಣ್ಣ ಕಂದಕಕ್ಕೆ  ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.  ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

@kodaguConnect ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಮೊನ್ನೆ ಸುರಿದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನ ರಸ್ತೆಯಲ್ಲಿ ವಾಹನಗಳು ನಿಧಾನಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಮುಂದೆಯಿಂದ ವೇಗವಾಗಿ ಬಂದಂತಹ ಮಾರುತಿ 800 ಕಾರು ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಕ್ಕದ ಸಣ್ಣ ಕಂದಕ್ಕೆ ಹೋಗಿ ಬೀಳುವಂತಹ ಭೀಕರ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಮ್ಮ ಕೊಡಗು ಪ್ರವಾಸಿ ತಾಣವೇ ಹೊರತು, ಕಸದ ತೊಟ್ಟಿಯಲ್ಲ, ಪ್ರವಾಸಿಗರಿಗೆ ಚಳಿ ಬಿಡಿಸಿದ ಯುವಕ 

ವಿಡಿಯೋ ಇಲ್ಲಿದೆ:

ಜನವರಿ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋಗೆ ಹಲವಾರು ಕಮೆಂಟ್ಸ್ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ʼವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಸ್ಕಿಡ್ ಆಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ತಿರುವಿನ ಪ್ರದೇಶಗಳಲ್ಲಿ ನಿಧಾನವಾಗಿ ಬಹಳ ಜಾಗರೂಕತೆಯಿಂದ ವಾಹನ ಚಲಾಯಿಸಿʼ ಎಂದು ಸಲಹೆ ನೀಡಿದ್ದಾರೆ.  ಇನ್ನೂ ಅನೇಕರು ಮಳೆಯ ಸಂದರ್ಭದಲ್ಲಿ ಇಷ್ಟು ವೇಗವಾಗಿ ವಾಹನ ಚಲಾಯಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ