AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ ಮುದ್ದಾದ ದೃಶ್ಯ

ಸೋಷಿಯಲ್‌ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟವಿರಲಿ, ಮುಗ್ಧತೆ ಇರಲಿ ಎಲ್ಲವೂ ಚೆನ್ನ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ಆಗಿದ್ದು, ಮರಿ ಆನೆಯೊಂದು ಓಡುತ್ತಾ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿರುವ ದೃಶ್ಯ ನೋಡುಗರ ಮನ ಗೆದ್ದಿದೆ.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ  ಮುದ್ದಾದ ದೃಶ್ಯ
ಸಾಂದರ್ಭಿಕ ಚಿತ್ರImage Credit source: National Geographic
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: May 05, 2024 | 4:02 PM

ಯಾವುದೇ ಪ್ರಾಣಿಯ ಮರಿಯಾದರೂ ಸರಿ, ಆ ಪುಟ್ಟ ಪುಟ್ಟ ಮುಗ್ಧ ಜೀವಿಗಳು ಯಾವಾಗಲೂ ತುಂಟಾಟವಾಡುತ್ತಾ ಇರುತ್ತವೆ. ಇವುಗಳ ತುಂಟಾಟ ನೋಡುವುದೇ ಒಂದು ಮಜಾ. ಮೂಕ ಪ್ರಾಣಿಗಳ ಮುಗ್ಧತೆಯ ಆಟ, ಓಟ ಮನಸ್ಸಿಗೆ ಒಂದು ರೀತಿಯ ಮುದ ನೀಡುತ್ತದೆ. ಅದರಲ್ಲೂ ಈ ಮುದ್ದಾದ ಮರಿ ಆನೆಗಳ ತುಂಟಾಟವನ್ನು ನೋಡುವುದೇ ಒಂದು ಚೆಂದ. ಸದ್ಯ ಅಂತಹದ್ದೊಂದು ಮುದ್ದಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ ಎನ್ನುತ್ತಾ, ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ತನ್ನ ತಾಯಿಯ ಬಳಿ ಓಡಿ ಹೋಗಿದೆ. ಈ ಮುದ್ದಾದ ದೃಶ್ಯ ನೋಡುಗರ ಮನ ಸೆಳೆದಿದೆ.

ಈ ದೃಶ್ಯವನ್ನು ಕೀನ್ಯಾದ ಅಂಬೋಸೆಲಿ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿ ಛಾಯಗ್ರಾಹಕ ಫಿಲಿಪ್ ಅವರು ಸೆರೆ ಹಿಡಿದಿದ್ದಾರೆ. ಮತ್ತು ಈ ವಿಡಿಯೋವನ್ನು ಅವರು (@sightingsbyphil) ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ವೈರಲ್‌ ವಿಡಿಯೋದಲ್ಲಿ ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ, ನಾನ್‌ ಬರ್ತಿದ್ದೀನಿ ಎನ್ನುತ್ತಾ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ತಾಯಿಯ ಬಳಿ ಕಂದಮ್ಮ ಖುಷಿಯಿಂದ ಓಡೋಡಿ ಬರುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಏಪ್ರಿಲ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಐದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟಾಣಿ ಆನೆಯ ಮುದ್ದಾದ ವಿಡಿಯೋವನ್ನು ಕಂಡು ನೆಟ್ಟಿಗರಂತೂ ಫುಲ್‌ ಖುಷ್ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್