Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರಡಿಯನ್ನು ಅಟ್ಟಾಡಿಸಿಕೊಂಡು ಹೋದ ಹುಲಿರಾಯ;  ವೈರಲ್ ಆಯ್ತು ವಿಡಿಯೋ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಿಂದ ಅಚ್ಚರಿಯ ವಿಡಿಯೋವೊಂದು ಹೊರ ಬಿದ್ದಿದ್ದು, ಪ್ರವಾಸಿಗರ ಮುಂದೆಯೇ ಹುಲಿರಾಯ ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 05, 2024 | 5:27 PM

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಕೆಲವೊಮ್ಮೆ  ಈ ದೃಶ್ಯಗಳು  ನಿಜಕ್ಕೂ ನಮ್ಮಲ್ಲಿ ಅಚ್ಚರಿಯನ್ನು ಮೂಡಿಸುತ್ತದೆ.  ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಸಫಾರಿಗೆ ಬಂದಂತಹ ಪ್ರವಾಸಿಗರ ಮುಂದೆಯೇ ದೈತ್ಯ ಹುಲಿಯೊಂದು ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ.

ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು,  ಹುಲಿಯ ದಾಳಿಯಿಂದ ಹೇಗಾದರೂ ತಪ್ಪಿಸಿಕೊಂಡು  ಜೀವ ಉಳಿದ್ರೆ ಸಾಕಪ್ಪಾ ಎಂದು ಪುಟ್ಟ  ಕರಡಿಯೊಂದು  ಕಾಲ್ಕಿತ್ತು ಓಡಿ ಹೋಗಿದೆ. ಹುಲಿರಾಯನ ಈ ಭಯಾನಕ ಬೇಟೆಯ ದೃಶ್ಯವನ್ನು  ವನ್ಯಜೀವಿ ಛಾಯಾಗ್ರಾಹಕ ಸಿದ್ಧಾರ್ಥ್ ಸಿಂಗ್ ಸೆರೆ ಹಿಡಿದಿದ್ದು, ಈ  ವಿಡಿಯೋವನ್ನು ಅರಣ್ಯಾಧಿಕಾರಿ ರಮೇಶ್ ಪಾಂಡೆ (rameshpandeyifs)  ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಪಿಲಿಭಿತ್ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಪ್ರವಾಸಿಗರ ದಂಡೊಂದು ಸಫಾರಿಗೆಂದು ಬಂದಿತ್ತು, ಆ ಸಂದರ್ಭದಲ್ಲಿ ಪ್ರವಾಸಿಗರ ಮುಂದೆಯೇ  ಸೋಮಾರಿ ಕರಡಿಯೊಂದನ್ನು  ಹುಲಿರಾಯ  ಅಟ್ಟಾಡಿಸಿಕೊಂಡು ಹೋಗಿದೆ. ಈ ಭಯಾನಕ ದೃಶ್ಯವನ್ನು ದೃಶ್ಯವನ್ನು ಕಂಡು ಪ್ರವಾಸಿಗರು ಫುಲ್ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ನ್ಯಾಚುರಲ್ ಲುಕ್ ಪಡೆಯಲು ಮತ್ತೊಮ್ಮೆ ಪ್ಲಾಸ್ಟಿಕ್ ಸರ್ಜರಿ ಮೊರೆ ಹೋದ ರಿಯಲ್ ಲೈಫ್ ಬಾರ್ಬಿ ಡಾಲ್ 

ಏಪ್ರಿಲ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ದೃಶ್ಯ ನೋಡಲು ನಿಜವಾಗಿಯೂ ಭಯಾನಕವಾಗಿದೆ ಜೊತೆಗೆ ರೋಮಾಂಚಕವಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!