ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಕೆಲವೊಮ್ಮೆ ಈ ದೃಶ್ಯಗಳು ನಿಜಕ್ಕೂ ನಮ್ಮಲ್ಲಿ ಅಚ್ಚರಿಯನ್ನು ಮೂಡಿಸುತ್ತದೆ. ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಸಫಾರಿಗೆ ಬಂದಂತಹ ಪ್ರವಾಸಿಗರ ಮುಂದೆಯೇ ದೈತ್ಯ ಹುಲಿಯೊಂದು ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ.
ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು, ಹುಲಿಯ ದಾಳಿಯಿಂದ ಹೇಗಾದರೂ ತಪ್ಪಿಸಿಕೊಂಡು ಜೀವ ಉಳಿದ್ರೆ ಸಾಕಪ್ಪಾ ಎಂದು ಪುಟ್ಟ ಕರಡಿಯೊಂದು ಕಾಲ್ಕಿತ್ತು ಓಡಿ ಹೋಗಿದೆ. ಹುಲಿರಾಯನ ಈ ಭಯಾನಕ ಬೇಟೆಯ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಸಿದ್ಧಾರ್ಥ್ ಸಿಂಗ್ ಸೆರೆ ಹಿಡಿದಿದ್ದು, ಈ ವಿಡಿಯೋವನ್ನು ಅರಣ್ಯಾಧಿಕಾರಿ ರಮೇಶ್ ಪಾಂಡೆ (rameshpandeyifs) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವೈರಲ್ ವಿಡಿಯೋದಲ್ಲಿ ಪಿಲಿಭಿತ್ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಪ್ರವಾಸಿಗರ ದಂಡೊಂದು ಸಫಾರಿಗೆಂದು ಬಂದಿತ್ತು, ಆ ಸಂದರ್ಭದಲ್ಲಿ ಪ್ರವಾಸಿಗರ ಮುಂದೆಯೇ ಸೋಮಾರಿ ಕರಡಿಯೊಂದನ್ನು ಹುಲಿರಾಯ ಅಟ್ಟಾಡಿಸಿಕೊಂಡು ಹೋಗಿದೆ. ಈ ಭಯಾನಕ ದೃಶ್ಯವನ್ನು ದೃಶ್ಯವನ್ನು ಕಂಡು ಪ್ರವಾಸಿಗರು ಫುಲ್ ಶಾಕ್ ಆಗಿದ್ದಾರೆ.
ಇದನ್ನೂ ಓದಿ: ನ್ಯಾಚುರಲ್ ಲುಕ್ ಪಡೆಯಲು ಮತ್ತೊಮ್ಮೆ ಪ್ಲಾಸ್ಟಿಕ್ ಸರ್ಜರಿ ಮೊರೆ ಹೋದ ರಿಯಲ್ ಲೈಫ್ ಬಾರ್ಬಿ ಡಾಲ್
ಏಪ್ರಿಲ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ದೃಶ್ಯ ನೋಡಲು ನಿಜವಾಗಿಯೂ ಭಯಾನಕವಾಗಿದೆ ಜೊತೆಗೆ ರೋಮಾಂಚಕವಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ