Tirupati Laddu Row-: ತಿರುಪತಿ ಪ್ರತ್ಯೇಕ ರಾಜ್ಯವಾಗಬೇಕು, ನೋ ವೇ ಚಾನ್ಸೆ ಇಲ್ಲ ಎಂದ ಸುಪ್ರೀಂ

ತಿರುಪತಿ ದೇವಾಲಯದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ನವೆಂಬರ್‌ 8) ವಜಾಗೊಳಿಸಿದೆ.

Tirupati Laddu Row-: ತಿರುಪತಿ ಪ್ರತ್ಯೇಕ ರಾಜ್ಯವಾಗಬೇಕು, ನೋ ವೇ ಚಾನ್ಸೆ ಇಲ್ಲ ಎಂದ ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 08, 2024 | 6:30 PM

ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಾಲಯದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ನವೆಂಬರ್‌ 8) ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಮತ್ತು ಗ್ಲೋಬಲ್‌ ಪೀಸ್‌ ಇನಿಶಿಯೇಟಿವ್‌ ಸಂಘಟನೆಯ ಅಧ್ಯಕ್ಷ ಕೆ.ಎ.ಪಾಲ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ಈ ಬಗ್ಗೆ ಖುದ್ದು ಪಾಲ್‌ ಅವರೇ ವಾದ ಮಂಡಿಸಿದ್ದು, ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳಾದ ಬಿ.ಆರ್‌. ವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರಿದ್ದ ಪೀಠ ಸಿಬಿಐ ತನಿಖೆ ಮತ್ತು ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

“ನೀವು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದರೆ ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಹಾಗೂ ಇತ್ಯಾದಿ ಪುಣ್ಯ ಸ್ಥಳಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ಹಾಗಾಗಿ ನಿರ್ಧಿಷ್ಟ ಧರ್ಮಕ್ಕಾಗಿ ನಾವು ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತೇವೇ” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಆ ಸಂಭಾಜಿ ಮಹರಾಜ ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು; ಮುಸ್ಲಿಂ ಮಹಿಳೆಯ ವಿವಾದಾತ್ಮಕ ಹೇಳಿಕೆ

ತಿರುಪತಿ ಲಡ್ಡು ಪ್ರಸಾದವನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್‌ ವರದಿ ಬಂದ ನಂತರ ಹಾಗೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪಗಳು ಭಕ್ತರಲ್ಲಿ ತೋವ್ರ ಕಳವಳ ಮೂಡಿಸಿತ್ತು. ಹೀಗಾಗಿ ಲಡ್ಡು ಪ್ರಸಾದ ತಯಾರಿಕೆಯ ಸುತ್ತಲಿನ ಭ್ರಷ್ಟಾಚಾರ ಹಾಗೂ ಅದರ ಸುತ್ತಲಿನ ಆರೋಪದ ಬಗ್ಗೆ ಸಿಬಿಐ ಸಮಗ್ರ ತನಿಖೆ ನಡೆಸಬೇಕೆಂದು ಪಾಲ್‌ ಮನವಿ ಮಾಡಿದ್ದರು. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಆಗಸ್ಟ್‌ 4 ರಂದು ಐವರು ಸದಸ್ಯರ ನೇತೃತ್ವದ ಎಸ್.ಐ.ಟಿ ಯನ್ನು ಕೂಡಾ ರಚನೆ ಮಾಡಿತ್ತು. ಇದೀಗ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು