AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರವಾಸಿಗ ಹುಲಿ ಬಾಯಿಂದ ಜಸ್ಟ್ ಮಿಸ್; ಭಯಾನಕ ವೈರಲ್ ವಿಡಿಯೋ ಇಲ್ಲಿದೆ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳನ್ನು ನೋಡಿದಾಗ ನಮ್ಮ ಕಣ್ಣಿಂದ ನಂಬಲು ಅಸಾಧ್ಯವೆನಿಸುತ್ತದೆ. ಆದರೆ ಇದೀಗ ಸಫಾರಿಯ ವೇಳೆ ಪ್ರವಾಸಿಗನೊಬ್ಬ ಹುಲಿ ಬಾಯಿಂದ ಜಸ್ಟ್ ಮಿಸ್ ಆದ ಭಯಾನಕ ದೃಶ್ಯವು ಸದ್ಯ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪ್ರವಾಸಿಗ ಹುಲಿ ಬಾಯಿಂದ ಜಸ್ಟ್ ಮಿಸ್; ಭಯಾನಕ ವೈರಲ್ ವಿಡಿಯೋ ಇಲ್ಲಿದೆ
ವೈರಲ್‌ ವಿಡಿಯೋ Image Credit source: Facebook
ಸಾಯಿನಂದಾ
|

Updated on: Nov 04, 2025 | 10:29 AM

Share

ಹುಲಿಗಳು (tigers)  ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು. ಕಾಡಿನಲ್ಲಿ ಯಾವುದಾದರೂ ಬೇಟೆ ಸಿಗುತ್ತಾ ಅಂತ ಅತ್ತಿಂದ ಇತ್ತ ಕಣ್ಣಾಯಿಸುತ್ತಾ ಓಡಾಡುತ್ತಿರುತ್ತವೆ. ಹಸಿದ ಹುಲಿಗಳು ಯಾರೇ ಸಿಕ್ಕರೂ ಬಿಡುವುದೇ ಇಲ್ಲ. ನೀವೇನಾದ್ರೂ ಸಫಾರಿಗೆ ಹೋದಾಗ ಹುಲಿಯೂ ನಿಮ್ಮ ಮೇಲೆ ದಾಳಿ ಮಾಡಿದ್ರೆ ಹೇಗಿರುತ್ತೆ ಎಂದು ಒಮ್ಮೆ ಊಹಿಸಿ. ಹೌದು, ಸಫಾರಿ ವೇಳೆ ಹುಲಿಯೊಂದು ಪ್ರವಾಸಿಗ (tourist) ಮೇಲೆ ಹುಲಿ ದಾಳಿ ಮಾಡಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಭಯಾನಕ ದೃಶ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರವಾಸಿಗನ ಮೇಲೆ ದಾಳಿ ಮಾಡಿದ ಹುಲಿ

Srikanta Chinnu ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸಫಾರಿ ವೇಳೆ ಪ್ರವಾಸಿಗನೊಬ್ಬ ಜಿಂಕೆ ಕಂಡೊಡನೆ ಮುದ್ದಿಸಲು ಹೋಗಿದ್ದಾನೆ. ನೋಡ ನೋಡುತ್ತಿದ್ದಂತೆ ಹುಲಿಯೂ ಈ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದು ಕೂದಲೆಳೆ ಅಂತರದಲ್ಲಿ ಹುಲಿಗೆ ಆಹಾರವಾಗುವುದರಿಂದ ತಪ್ಪಿಸಿಕೊಂಡಿದ್ದಾನೆ. ಈ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು  ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಹುಲಿಯನ್ನು ಕಂಡೊಡನೆ ತಮ್ಮ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ನನ್ನ ಬೇಟೆಯಲ್ಲಿ ನಿನಗೂ ಪಾಲು ಇದೆ; ತನ್ನನ್ನು ಸಾಕಿದ ವ್ಯಕ್ತಿಯೊಂದಿಗೆ ತನ್ನ ಬೇಟೆಯನ್ನು ಹಂಚಿಕೊಂಡು ತಿಂದ ಸಿಂಹಿಣಿ

ಈ ವಿಡಿಯೋ ಮೂವತ್ತನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಹುಲಿಯಿಂದ ತಪ್ಪಿಸಿಕೊಂಡು ಆತ ಎಲ್ಲಿ ಓಡಿ ಹೋದ ಎಂದಿದ್ದಾರೆ. ಇನ್ನೊಬ್ಬರು, ಈ ವ್ಯಕ್ತಿಯ ವಿರುದ್ಧ ಅರಣ್ಯ ಇಲಾಖೆಯೂ ಕಠಿಣ ಕ್ರಮ ಕೈಗೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಹುಲಿಗಿಂತ ಭಯಾನಕ ಈ ಎಐ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?