AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ

Accident : ಕಳೆದ ವರ್ಷ ಲಂಡನ್​ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದ ದಾಖಲೆಯನ್ವಯ ಇದೀಗ ಟ್ರ್ಯಾಕ್ಟರ್​ ಚಾಲಕನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ
ಟ್ರ್ಯಾಕ್ಟರ್ ಕಾರ್​ ಅನ್ನು ನುಜ್ಜುಗುಜ್ಜಾಗಿಸಿರುವ ದೃಶ್ಯ
TV9 Web
| Edited By: ಶ್ರೀದೇವಿ ಕಳಸದ|

Updated on: Jun 07, 2023 | 10:34 AM

Share

Drugs : ಹತ್ತೊಂಬತ್ತು ವರ್ಷದ ಟ್ರ್ಯಾಕ್ಟರ್​ ಚಾಲಕನೊಬ್ಬ ಡ್ರಗ್ಸ್​ ಸೇವಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಎದುರಿನ ಕಾರನ್ನು ನುಜ್ಜುಗುಜ್ಜಾಗಿಸಿದ ವಿಡಿಯೋ ಇದೀಗವ ವೈರಲ್ ಆಗಿದೆ. ಲಂಡನ್​ನಲ್ಲಿ ನಡೆದ ಈ ಹಳೆಯ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಾರ್ಲಿಸ್ಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ ಆರೋಪಿಗೆ 60 ಗಂಟೆಗಳ ಕಾಲ ಸಂಬಳರಹಿತ ಕೆಲಸ ಮತ್ತು  ಎಂಟು ವಾರಗಳ ಕಾಲ ಕೆಲಸದಿಂದ ಅಮಾನತುಗೊಳಿಸುವಂತೆ ಆದೇಶ ನೀಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ದುರ್ಘಟನೆಯು ಕಳೆದ ವರ್ಷದ ಸೆಪ್ಟೆಂಬರ್​ನಲ್ಲಿ ಸಫೋಲ್ಕ್​ನ ಮಿಲ್ಡೆನ್​ ಹಾಲ್​ ವಾಯುನೆಲೆಯ ಬಳಿ ಸಂಭವಿಸಿತ್ತು. 19 ವರ್ಷದ ಚಾಲಕ ಸೋವರ್ಬಿ ಕೊಕೇನ್ ಸೇವಿಸಿದ ಪರಿಣಾಮ ವೇಗಮಿತಿಯನ್ನು ಮೀರಿರುವುದಾಗಿ ತಿಳಿದು ಬಂದಿದೆ. ಜೂನ್ 6ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಲ್ಲಿ ಸದರಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ : Viral Video: ಕಪ್ಪಾ ಕ್ಲಾಸಿಕಲ್​ ವಿಥ್ ಕಾಫಿ ಗ್ಲಾಸ್​; 5 ಲಕ್ಷ ಜನರು ಮೆಚ್ಚಿದ ಈ ರೀಲ್ಸ್

ಕಾರ್​ ಡ್ರೈವರ್ ಕಾರ್​ ಅನ್ನು ರಸ್ತೆಬದಿಗೆ ಚಲಿಸಿದ್ದರಿಂದ ಅದೃಷ್ಟವಶಾತ್​ ಆತನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ವಾಯುನೆಲೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಮಾದಕ ವ್ಯಸನಿಯಾಗಿದ್ದ ಟ್ರ್ಯಾಕ್ಟರ್​ ಚಾಲಕ ನ್ಯಾಯಾಲಯದ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಈ ಹಳೆಯ ವಿಡಿಯೋ ನೋಡಿದ ನೆಟ್ಟಿಗರು, ಸದ್ಯ ಯಾರೂ ಪ್ರಾಣಾಪಾಯಕ್ಕೆ ಗುರಿಯಾಗಿಲ್ಲವಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 3.1 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದು, ಸುಮಾರು 5 ಸಾವಿರ ಜನರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ