AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ ವಿದ್ಯಾರ್ಥಿನಿ ದಾರುಣ ಸಾವು; ಪ್ರಿಯಕರನ ಬಂಧನ

ಕಳೆದ ಶನಿವಾರ ಕಾಲೇಜಿಗೆ ರಜೆ ಇದ್ದು, ಪ್ರಿಯಕರನ ಕೋರಿಕೆಯಂತೆ ಇಬ್ಬರೂ ಪಾರ್ಟಿ ಮಾಡಿದ್ದಾರೆ. ಯುವತಿ ಮದ್ಯ ಸೇವಿಸಿ ರಾತ್ರಿ ಮಲಗಿದ್ದು, ಬೆಳಗ್ಗಿನ ಹೊತ್ತಿಗೆ ಹಠಾತ್ ಸಾವನ್ನಪ್ಪಿದ್ದಾಳೆ. ಈ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಿಯಕರನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮದ್ಯ ಸೇವಿಸಿ ವಿದ್ಯಾರ್ಥಿನಿ ದಾರುಣ ಸಾವು; ಪ್ರಿಯಕರನ ಬಂಧನ
ರಿತಿ ಏಂಜೆಲ್ (19)
ಅಕ್ಷತಾ ವರ್ಕಾಡಿ
|

Updated on:Feb 13, 2024 | 5:35 PM

Share

ಪ್ರಿಯಕರನ ಕೋರಿಕೆಯಂತೆ ಪ್ರೇಯಿಸಿ ಪಾರ್ಟಿ ಮಾಡಲು ಸಖತ್​​ ಆಗಿ ಪ್ಲಾನ್​​ ಮಾಡಿದ್ದಾಳೆ. ಇದರಂತೆ ಕಳೆದ ಶನಿವಾರ ಕಾಲೇಜಿಗೆ ರಜೆ ಇದುದ್ದರಿಂದ, ಇಬ್ಬರೂ ರಾತ್ರಿ ಮದ್ಯಪಾನ ಕುಡಿದ್ದು ಮಲಗಿದ್ದು, ಬೆಳಗ್ಗಿನ ಹೊತ್ತಿಗೆ ಯುವತಿಯ ಉಸಿರು ನಿಂತು ಹೋಗಿದೆ.  ಆಕಾಶ್ (20) ನೀಲಗಿರಿ ಜಿಲ್ಲೆಯ ಊಟಿಯ ಬಾಂಬೆ ಕ್ಯಾಸಲ್ ನವರು. ಈತನ ತಂದೆ ಮತ್ತು ತಂದೆ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರಿಂದ ಆಕಾಶ್ ಅಜ್ಜಿಯೊಂದಿಗೆ ವಾಸವಾಗಿದ್ದ. ಆತನ ಪ್ರೇಯಸಿ ರಿತಿ ಏಂಜೆಲ್ (19) ಊಟಿಯ ಪಿಂಕರ್ ಪೋಸ್ಟ್ ಮೂಲದವಳು. ಇವರಿಬ್ಬರು 10ನೇ ತರಗತಿಯಲ್ಲಿ ಒಟ್ಟಿಗೆ ಓದಿದ್ದರಿಂದ ಇಬ್ಬರೂ ಪರಿಚಿತರು. ಈ ಪರಿಚಯ ಅಂತಿಮವಾಗಿ ಪ್ರೀತಿಗೆ ತಿರುಗಿತ್ತು.ಈ ಮಧ್ಯೆ ರಿತಿ ಏಂಜೆಲ್ ಕೊಯಮತ್ತೂರಿನ ಖಾಸಗಿ ನರ್ಸಿಂಗ್ ಕಾಲೇಜಿಗೆ ಮತ್ತು ಆಕಾಶ್ ನೀಲಗಿರಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡಿದ್ದ. ಪ್ರೇಮಿಗಳು ಕಾಲಕಾಲಕ್ಕೆ ಭೇಟಿಯಾಗುತ್ತಿದ್ದರು.

ಹೀಗಿರುವಾಗ ಕಳೆದ ಶನಿವಾರ ಕಾಲೇಜಿಗೆ ರಜೆ ಇದ್ದು, ಗೆಳೆಯನ ಕೋರಿಕೆಯಂತೆ ಕೊಯಮತ್ತೂರಿನಿಂದ ರಿತಿ ಏಂಜೆಲ್ ಬಂದಿದ್ದಳು. ಅಲ್ಲಿ ಟಾಸ್ಮಾಕ್ ಬಾರ್ ನಲ್ಲಿ ಮದ್ಯ ಖರೀದಿಸಿದ ಬಳಿಕ ವಿದ್ಯಾರ್ಥಿನಿಯನ್ನು ಗೆಳೆಯ ದ್ವಿಚಕ್ರ ವಾಹನದಲ್ಲಿ ಹತ್ತಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅವರು ಆನ್‌ಲೈನ್‌ನಲ್ಲಿ ಆಹಾರವನ್ನು ಬುಕ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಆಕಾಶ್ ಮತ್ತು ರಿತಿ ಏಂಜೆಲ್ ಮದ್ಯ ಸೇವಿಸಿದ್ದಾರೆ. ಇದಾದ ಬಳಿಕ ಮೋಟಾರ್ ಸೈಕಲ್ ನಲ್ಲಿ ಸಮೀಪದ ಪೈನ್ ಅರಣ್ಯ ಪ್ರದೇಶಕ್ಕೆ ತೆರಳಿ ಮ್ಯಾಜಿಕ್ ಮಶ್ರೂಮ್ ಗಳನ್ನು ತೆಗೆದುಕೊಂಡು ವೈನ್ ಸಮೇತ ತಿಂದಿದ್ದಾರೆ. ಇದರಿಂದ ಇಬ್ಬರೂ ಮಾದಕ ವ್ಯಸನಕ್ಕೆ ಒಳಗಾಗಿ ಗೊಂದಲದ ಗೂಡಾಗಿದ್ದಾರೆ. ನಂತರ ಇಬ್ಬರೂ ನಿದ್ರೆಗೆ ಜಾರಿದ್ದಾರೆ.

ಇದನ್ನೂ ಓದಿ: ಓಯೋ ರೂಮ್ ಬುಕ್ ಮಾಡಿದ ವ್ಯಕ್ತಿ; ರೂಮ್​​ ಕಂಡು ಕಂಗಾಲು

ಬೆಳಗ್ಗೆ ಎದ್ದ ಆಕಾಶ್ ರಿತಿ ಏಂಜೆಲ್ ಹಾಸಿಗೆಯಿಂದ ಏಳದಿರುವುದನ್ನು ಕಂಡು ಶಾಕ್ ಆಗಿದ್ದಾನೆ. ರಿತಿ ಏಂಜೆಲ್ ಎಬ್ಬಿಸಿದರೂ ಏಳದ ಕಾರಣ ಆಂಬ್ಯುಲೆನ್ಸ್ ಗಾಗಿ 108ಕ್ಕೆ ಕರೆ ಮಾಡಿದ್ದಾರೆ. ವೈದ್ಯರು ಯುವತಿಯನ್ನು ಪರೀಕ್ಷಿಸಿ ಆಕೆ ಮೃತಪಟ್ಟಿರುವ ಬಗ್ಗೆ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಊಟಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕಾಶ್ ನನ್ನು ಬಂಧಿಸಿದ್ದಾರೆ. ರಿತಿ ಏಂಜೆಲ್ ಸಾವಿನ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Tue, 13 February 24

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು