Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ಶರವೇಗದಲ್ಲಿ ಬಂದ ರೈಲು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ
Follow us
ಅಕ್ಷತಾ ವರ್ಕಾಡಿ
|

Updated on: Oct 01, 2023 | 12:26 PM

ಉತ್ತರ ಪ್ರದೇಶ: ಬಾರಾಬಂಕಿಯ ಫರ್ಮಾನ್(14) ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಯುವಕ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ರೈಲು ಬಂದು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದಾಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ.

ವಿಡಿಯೋ ಇಲ್ಲಿದೆ ನೋಡಿ:

ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್‌ ಎಂದು ಗುರುತಿಸಲಾಗಿದೆ. ಅವನು ತನ್ನ ಸ್ನೇಹಿತರಾದ ಶುಐಬ್, ನಾದಿರ್ ಮತ್ತು ಸಮೀರ್ ಜೊತೆ ರೀಲ್ಸ್​​ ಮಾಡಲು ಹೋಗಿರುವುದು ತಿಳಿದುಬಂದಿದೆ. ಆದರೆ, ಫರ್ಮಾನ್ ದಾಮೆದರ್‌ಪುರ ಗ್ರಾಮದ ಪಕ್ಕದ ರೈಲ್ವೆ ಕ್ರಾಸಿಂಗ್ ಬಳಿ ರೈಲು ಹಳಿಗಳ ಬಳಿ ನಿಂತು ರೀಲ್‌ ಮಾಡಲು ತಯಾರಿ ನಡೆಸುತ್ತಿದ್ದಂತೆ ವೇಗವಾಗಿ ಬಂದ ರೈಲು ಅವನಿಗೆ ಡಿಕ್ಕಿ ಹೊಡೆದು ವೇಗದ ರಭಸಕ್ಕೆ ಆತನನ್ನು ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ.

ಇದನ್ನೂ ಓದಿ: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ

ವರದಿಗಳ ಪ್ರಕಾರ, ರೈಲಿನ ವೇಗದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹತ್ತಿರದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್