Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ

ಹೃದಯಾಘಾತದ ವೇಳೆ ಸಿಪಿಆರ್‌ ನೀಡುವ ಮೂಲಕ ವ್ಯಕ್ತಿಯನ್ನು ಬದುಕಿಸಬಹುದು. ಅದೇ ರೀತಿ ಇಲ್ಲೊಬ್ರು ಟಿಟಿಇ ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾದಾಗ ತಮ್ಮ ಸಮಯಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Nov 24, 2024 | 6:20 PM

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗಿದೆ. ಹೀಗೆ ಯಾರಿಗಾದ್ರೂ ಹೃದಯಾಘಾತವಾದ್ರೆ ತಕ್ಷಣಕ್ಕೆ ಸಿಪಿಆರ್‌ ಚಿಕಿತ್ಸೆಯನ್ನು ನೀಡುವ ಮೂಲಕ ಆ ವ್ಯಕ್ತಿಗಳ ಪ್ರಾಣವನ್ನು ಉಳಿಸಬಹುದು. ಹೀಗೆ ಸಿಪಿಆರ್‌ ನೀಡುವ ಮೂಲಕ ವೈದ್ಯರು ಮಾತ್ರವಲ್ಲದೆ ಸಾಮಾನ್ಯರೂ ಕೂಡಾ ಅಮೂಲ್ಯ ಜೀವಗಳನ್ನು ಕಾಪಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಆ ತಕ್ಷಣ ಅಲ್ಲಿದ್ದ ಟಿಟಿಇ ತಮ್ಮ ಸಮಯ ಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

15708 ಅಮ್ರಪಾಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದ್ದು, ಟಿಟಿಇ ಸಿಪಿಆರ್‌ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ಜನರಲ್‌ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ 70 ವರ್ಷದ ವ್ಯಕ್ತಿಯೊಬ್ಬರು ಹಠಾತ್‌ ಹೃದಯಾಘಾತಕ್ಕೆ ತುತ್ತಾಗಿದ್ದು, ಆ ತಕ್ಷಣ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಮನಮೋಹನ್‌ ಸಿಪಿಆರ್‌ ನೀಡಿ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ನಂತರ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಛಾಪ್ರಾ ರೈಲ್ವೆ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ದಿನಕ್ಕೆ ಒಂದು ಲಕ್ಷ ಸಂಪಾದನೆ ಮಾಡಲು ಸುಧಾ ಮೂರ್ತಿ ಹೇಳಿದ್ದಾರೆಂಬ ವಿಡಿಯೋ ವೈರಲ್

North Eastern Railway ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಯನ್ನು ಮಲಗಿಸಿ ಟಿಟಿಇ ಸಮಯಕ್ಕೆ ಸರಿಯಾಗಿ ಸಿಪಿಆರ್‌ ಚಿಕಿತ್ಸೆ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಸಿಪಿಆರ್‌ ಚಿಕಿತ್ಸೆಯ ಮೂಲಕ ಟಿಟಿಇ ಮನಮೋಹನ್‌ ಒಂದು ಅಮೂಲ್ಯ ಜೀವವನ್ನು ಉಳಿಸಿದ್ದು, ಇವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:20 pm, Sun, 24 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ