ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗಿದೆ. ಹೀಗೆ ಯಾರಿಗಾದ್ರೂ ಹೃದಯಾಘಾತವಾದ್ರೆ ತಕ್ಷಣಕ್ಕೆ ಸಿಪಿಆರ್ ಚಿಕಿತ್ಸೆಯನ್ನು ನೀಡುವ ಮೂಲಕ ಆ ವ್ಯಕ್ತಿಗಳ ಪ್ರಾಣವನ್ನು ಉಳಿಸಬಹುದು. ಹೀಗೆ ಸಿಪಿಆರ್ ನೀಡುವ ಮೂಲಕ ವೈದ್ಯರು ಮಾತ್ರವಲ್ಲದೆ ಸಾಮಾನ್ಯರೂ ಕೂಡಾ ಅಮೂಲ್ಯ ಜೀವಗಳನ್ನು ಕಾಪಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಆ ತಕ್ಷಣ ಅಲ್ಲಿದ್ದ ಟಿಟಿಇ ತಮ್ಮ ಸಮಯ ಪ್ರಜ್ಞೆಯಿಂದ ಸಿಪಿಆರ್ ನೀಡುವ ಮೂಲಕ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.
15708 ಅಮ್ರಪಾಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಟಿಟಿಇ ಸಿಪಿಆರ್ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ 70 ವರ್ಷದ ವ್ಯಕ್ತಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ತುತ್ತಾಗಿದ್ದು, ಆ ತಕ್ಷಣ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಮನಮೋಹನ್ ಸಿಪಿಆರ್ ನೀಡಿ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ನಂತರ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಛಾಪ್ರಾ ರೈಲ್ವೆ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಯಿತು.
चलती ट्रेन में यात्री को आया हार्ट अटैक, टीटीई ने दिया सीपीआर, बच गई जान
आज ट्रेन सं. 15708 में एक व्यक्ति के अचेत होने की सूचना पर TTE मनमोहन ने बिना देरी किए उस व्यक्ति को *सीपीआर * देना शुरू किया। लगातार प्रयासों के बाद, व्यक्ति ने अपनी आँखें खोली और बेहतर महसूस करने लगा। pic.twitter.com/all14eKc2v
— North Eastern Railway (@nerailwaygkp) November 23, 2024
ಇದನ್ನೂ ಓದಿ: ದಿನಕ್ಕೆ ಒಂದು ಲಕ್ಷ ಸಂಪಾದನೆ ಮಾಡಲು ಸುಧಾ ಮೂರ್ತಿ ಹೇಳಿದ್ದಾರೆಂಬ ವಿಡಿಯೋ ವೈರಲ್
North Eastern Railway ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಯನ್ನು ಮಲಗಿಸಿ ಟಿಟಿಇ ಸಮಯಕ್ಕೆ ಸರಿಯಾಗಿ ಸಿಪಿಆರ್ ಚಿಕಿತ್ಸೆ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಸಿಪಿಆರ್ ಚಿಕಿತ್ಸೆಯ ಮೂಲಕ ಟಿಟಿಇ ಮನಮೋಹನ್ ಒಂದು ಅಮೂಲ್ಯ ಜೀವವನ್ನು ಉಳಿಸಿದ್ದು, ಇವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:20 pm, Sun, 24 November 24