AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಂದೇ ಭಾರತ್ ರೈಲು ಟಿಕೆಟ್‌ ಹಾಫ್ ರೇಟ್‌ಗೆ ಮಾರಾಟ, ಟಿಟಿಇ ಅಮಾನತು

ಭಾರತದ ಹೆಮ್ಮೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಧಿಕೃತ ದರಕ್ಕಿಂತ ಕಡಿಮೆ ಹಣಕ್ಕೆ ಟಿಕೆಟ್ ನೀಡಿ ಹಣ ಮಾಡುತ್ತಿದ್ದ ಟಿಕೆಟ್ ಪರೀಕ್ಷಕನನ್ನು ಭಾರತೀಯ ರೈಲ್ವೆ ಅಮಾನತುಗೊಳಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಂದೇ ಭಾರತ್ ರೈಲು ಟಿಕೆಟ್‌ ಹಾಫ್ ರೇಟ್‌ಗೆ ಮಾರಾಟ, ಟಿಟಿಇ ಅಮಾನತು
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: May 13, 2026 | 12:13 PM

Share

ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharath Express) ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ಮಾರುತ್ತಿದ್ದ ವೇಳೆ ಟಿಟಿಇ ಸಿಕ್ಕಿ ಬಿದ್ದಿದ್ದಾನೆ. ತಕ್ಷಣವೇ ಕ್ರಮ ಕೈಗೊಂಡ ರೈಲ್ವೆ ಇಲಾಖೆಯೂ ಟಿಟಿಇಯನ್ನು (TTE) ಕೆಲಸದಿಂದ ಅಮಾನತುಗೊಳಿಸಿದೆ.

ಘರ್ ಕೆ ಕಲೇಷ್ (Ghar Ke Kalesh) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಟಿಟಿಇ ಹಾಗೂ ಪ್ರಯಾಣಿಕರ ನಡುವಿನ ಸಂಭಾಷಣೆ ನೀವು ಗಮನಿಸಬಹುದು. 700 ರೂಪಾಯಿ ವಂದೇ ಭಾರತ್ ಟಿಕೆಟ್ ನ್ನು ಕೇವಲ 380 ರೂಪಾಯಿಗಳಿಗೆ ಕೊಡುವುದಾಗಿ ಟಿಟಿಇ ಹೇಳುತ್ತಿರುವುದನ್ನು ಕಾಣಬಹುದು. ಟಿಟಿಇ ಇದು ನಿಯಮಕ್ಕೆ ವಿರುದ್ಧ ಎಂದು ಹೇಳುತ್ತಲೇ, ಕಡಿಮೆ ಹಣಕ್ಕೆ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಹೇಳುತ್ತಿರುವುದನ್ನು ನೀವು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದಾನಾಪುರ ವಿಭಾಗದ ರೈಲ್ವೆ ವ್ಯವಸ್ಥಾಪಕರು, ಸಂಬಂಧಿತ ಟಿಟಿಇಯನ್ನು ತನಿಖೆ ಮುಗಿಯುವವರೆಗೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ

ಈ ವಿಡಿಯೋ ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡುಕೊಂಡಿದ್ದು, ಒಬ್ಬ ಬಳಕೆದಾರ, ಭ್ರಷ್ಟಾಚಾರದ ಪರಮಾವಧಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನಮ್ಮ ದೇಶದ ವ್ಯವಸ್ಥೆಯನ್ನು ಹಾಳು ಮಾಡುವವರು ಇಂತಹವರೇ ಎಂದು ಹೇಳಿದ್ದಾರೆ. ಮತ್ತೊಬ್ಬರು, ಟಿಟಿಇ ಸಹಾಯ ಮಾಡುವ ಮನೋಭಾವ ತುಂಬಾನೇ ಇದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸತತ ಸೋಲಿನ ಬಳಿಕ ಗೆಲುವು: ತಮ್ಮ ಕನಸುಗಳನ್ನ ಬಿಚ್ಚಿಟ್ಟ ಗೆದ್ದ ರಂಗನಾಥ್
ಸತತ ಸೋಲಿನ ಬಳಿಕ ಗೆಲುವು: ತಮ್ಮ ಕನಸುಗಳನ್ನ ಬಿಚ್ಚಿಟ್ಟ ಗೆದ್ದ ರಂಗನಾಥ್
ಮಟ್ಕಾ-ಜೂಜಾಟ ತಡೆಯದಿದ್ದರೆ ಧರಣಿ ಎಂದ ಕಾಂಗ್ರೆಸ್​ ಶಾಸಕ
ಮಟ್ಕಾ-ಜೂಜಾಟ ತಡೆಯದಿದ್ದರೆ ಧರಣಿ ಎಂದ ಕಾಂಗ್ರೆಸ್​ ಶಾಸಕ
ಮನೆ ಮನೆಗೆ ನಲ್ಲಿ ಇದ್ದೂ ಹನಿಯೂ ನೀರಿಲ್ಲ
ಮನೆ ಮನೆಗೆ ನಲ್ಲಿ ಇದ್ದೂ ಹನಿಯೂ ನೀರಿಲ್ಲ
ರಿಯಾದ್‌ನಲ್ಲಿರುವ ಸೌದಿ ರಕ್ಷಣಾ ಸಚಿವಾಲಯದ ಮೇಲೆ ಹೌತಿಯಿಂದ ಕ್ಷಿಪಣಿ ದಾಳಿ
ರಿಯಾದ್‌ನಲ್ಲಿರುವ ಸೌದಿ ರಕ್ಷಣಾ ಸಚಿವಾಲಯದ ಮೇಲೆ ಹೌತಿಯಿಂದ ಕ್ಷಿಪಣಿ ದಾಳಿ
‘ಅವನಿಗೆ ಧಮ್ ಇದ್ರೆ ಹೊರಗೆ ಬಂದಾಗ ನನ್ನ ಫೇಸ್ ಮಾಡಲಿ’: ದರ್ಶನ್ ಗರಂ
‘ಅವನಿಗೆ ಧಮ್ ಇದ್ರೆ ಹೊರಗೆ ಬಂದಾಗ ನನ್ನ ಫೇಸ್ ಮಾಡಲಿ’: ದರ್ಶನ್ ಗರಂ
99 ಲಕ್ಷ ವೋಟ್ ಡಿಲೀಟ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
99 ಲಕ್ಷ ವೋಟ್ ಡಿಲೀಟ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಸ್ಟಿಂಗ್ ಚರ್ಚೆ ನಡುವೆ ಕುಮಾರಸ್ವಾಮಿ ಭೇಟಿಯಾದ ರಾಜೇಂದ್ರ ರಾಜಣ್ಣ
ಸ್ಟಿಂಗ್ ಚರ್ಚೆ ನಡುವೆ ಕುಮಾರಸ್ವಾಮಿ ಭೇಟಿಯಾದ ರಾಜೇಂದ್ರ ರಾಜಣ್ಣ
ಧನ್ವೀರ್ ವಿವಾದ: ದರ್ಶನ್ ನೋಡಲು ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಧನ್ವೀರ್ ವಿವಾದ: ದರ್ಶನ್ ನೋಡಲು ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದು
ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದು
‘ಸೌಂದರ್ಯಾ ಸ್ವಯಂವರ’ದಲ್ಲಿ ನಗುವೋ ನಗು: ವಿಡಿಯೋ ನೋಡಿ
‘ಸೌಂದರ್ಯಾ ಸ್ವಯಂವರ’ದಲ್ಲಿ ನಗುವೋ ನಗು: ವಿಡಿಯೋ ನೋಡಿ