AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಸಿವಿನಿಂದ ಕಂಗೆಟ್ಟು ಬರ್ಗರ್‌ ಕಟ್‌ ಮಾಡಲು ಹೋಗಿ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಚುಚ್ಚಿಕೊಂಡ ವ್ಯಕ್ತಿ

ಕೆಲವೊಂದು ಸಾವಿನ ಸುದ್ದಿಗಳನ್ನು ಕೇಳಿದಾಗ ಅರೇ ಸಾವು ಹಿಂಗೂ ಕೂಡಾ ಬರುತ್ತಾ ಅಂತ ನಾವೆಲ್ರೂ ಶಾಕ್‌ ಆಗುತ್ತೇವೆ. ಇದೀಗ ಇಲ್ಲೊಂದು ಇಂತಹದ್ದೇ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಮೊದಲೇ ಹಸಿವಿನಿಂದ ಕಂಗೆಟ್ಟಿದ್ದ ವ್ಯಕ್ತಿಯೊಬ್ಬರು ಎರಡು ಫ್ರೋಜನ್‌ ಬರ್ಗರ್‌ಗಳನ್ನು ಚಾಕುವಿಂದ ಬೇರ್ಪಡಿಸುವ ಸಂದರ್ಭದಲ್ಲಿ ಅಕಸ್ಮಾತಾಗಿ ಚಾಕು ಅವರ ಹೊಟ್ಟೆಗೆ ತಗುಲಿ ಸಾವನ್ನಪ್ಪಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral: ಹಸಿವಿನಿಂದ ಕಂಗೆಟ್ಟು ಬರ್ಗರ್‌ ಕಟ್‌ ಮಾಡಲು ಹೋಗಿ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಚುಚ್ಚಿಕೊಂಡ ವ್ಯಕ್ತಿ
ಸಾಂದರ್ಭಿಕ ಚಿತ್ರ ( ಫ್ರೋಜನ್‌ ಬರ್ಗರ್‌)
ಮಾಲಾಶ್ರೀ ಅಂಚನ್​
| Edited By: |

Updated on: Sep 19, 2024 | 3:13 PM

Share

ಸಾವು ಯಾವ ಸಂದರ್ಭದಲ್ಲಿ ಯಾವ ರೂಪದಲ್ಲಿ ಬರುತ್ತೆ ಅನ್ನೋದನ್ನು ಊಹಿಸೋಕೆ ಸಾಧ್ಯವಿಲ್ಲ. ಈಗಷ್ಟೇ ಸ್ವಲ್ಪ ಹೊತ್ತಿನ ಹಿಂದೆ ಖುಷಿಖುಷಿಯಿಂದ, ಲವಲವಿಕೆಯಿಂದ ಇದ್ದವರು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಹಲವು ಉದಾಹರಣೆಗಳು ಕಣ್ಣ ಮುಂದಿವೆ. ಅದರಲ್ಲೂ ಕೆಲವೊಂದು ಸಾವಿನ ಸುದ್ದಿಗಳನ್ನು ಕೇಳಿದಾಗ ಅರೇ ಸಾವು ಹಿಂಗೂ ಕೂಡಾ ಬರುತ್ತಾ ಅಂತ ನಾವೆಲ್ರೂ ಶಾಕ್‌ ಆಗುತ್ತೇವೆ. ಇದೀಗ ಇಂತಹದ್ದೇ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬರು ಎರಡು ಫ್ರೋಜನ್‌ ಬರ್ಗರ್‌ಗಳನ್ನು ಚಾಕುವಿಂದ ಬೇರ್ಪಡಿಸುವ ಸಂದರ್ಭದಲ್ಲಿ ಅಕಸ್ಮಾತ್‌ ಆಗಿ ಚಾಕು ಅವರ ಹೊಟ್ಟೆಗೆ ತಗುಲಿ ಸಾವನ್ನಪ್ಪಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಘಟನೆ ಇಂಗ್ಲೆಂಡ್‌ನಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರು ಎರಡು ಫ್ರೋಜನ್‌ ಬರ್ಗರ್‌ಗಳನ್ನು ಚಾಕುವಿಂದ ಬೇರ್ಪಡಿಸುವ ಸಂದರ್ಭದಲ್ಲಿ ಅಕಸ್ಮಾತಾಗಿ ಚಾಕು ಅವರ ಹೊಟ್ಟೆಗೆ ತಗುಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಕಳೆದ ವರ್ಷ ಜುಲೈನಲ್ಲಿ ನಡೆದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ 57 ವರ್ಷ ವಯಸ್ಸಿನ ಬ್ಯಾರಿ ಗ್ರಿಫಿತ್ಸ್‌ ಎಂಬವರು ತಮ್ಮ ಮನೆಯಲ್ಲಿ ಬರ್ಗರ್‌ ಕಟ್‌ ಮಾಡುವ ಸಂದರ್ಭದಲ್ಲಿ ಅವರ ಹೊಟ್ಟೆಗೆ ಚಾಕು ತಗುಲಿದ್ದು, ಚಾಕು ಬಲವಾಗಿ ಚುಚ್ಚಿದ ಕಾರಣ ಅವರು ಸಾವನ್ನಪ್ಪಿದ್ದಾರೆ.

ಮೊದಲೇ ಗ್ರಿಫಿತ್ಸ್‌ ಒಬ್ಬಂಟಿಯಾಗಿ ವಾಸಿಸುತ್ತಿದ್ದರಿಂದ ಅವರ ಸಾವಿನ ಸುದ್ದಿ ಯಾರಿಗೂ ತಿಳಿದಿರಲಿಲ್ಲ. ಹಲವು ದಿನಗಳ ನಂತರ ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದು, ತಪಾಸಣೆಗಾಗಿ ಮನೆಗೆ ಬಂದಾಗ ಅಡುಗೆ ಮನೆ ಮತ್ತು ಮಲಗುವ ಕೋಣೆಯ ಉದ್ದಕ್ಕೂ ರಕ್ತ ಚೆಲ್ಲಿರುವ ಕಲೆ ಇರುವುದನ್ನು ಕಂಡುಕೊಂಡರು. ಅದೇ ಸಂದರ್ಭದಲ್ಲಿ ಸಾಕ್ಷಿಗಳನ್ನು ಕಲೆ ಹಾಕಿದಾಗ ಈ ವ್ಯಕ್ತಿಯನ್ನು ಬೇರೆ ಯಾರು ಕೊಂದಿಲ್ಲ ಎಂಬುದು ಕೂಡಾ ಪತ್ತೆಯಾಗಿದೆ.

ಇದನ್ನೂ ಓದಿ: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಈ ಪ್ರಕರಣವನ್ನು ಭೇದಿಸಲು ಸಾಧ್ಯವಾಗದೆ ಪೊಲೀಸರು ಈ ವಿಚಾರಣೆಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಪಾರ್ಶ್ವವಾಯುಗೆ ತುತ್ತಾಗಿ ಒಂದು ಕೈಯ ಸಮತೋಲನವನ್ನೇ ಕಳೆದುಕೊಂಡಿದ್ದ ಗ್ರಿಫಿತ್ಸ್‌ ಫ್ರೋಜನ್‌ ಬರ್ಗರ್‌ ಅನ್ನು ಬೇರ್ಪಡಿಸುವ ಸಂದರ್ಭದಲ್ಲಿ ಅವರ ಹೊಟ್ಟೆಗೆ ಅಕಸ್ಮಾತ್‌ ಆಗಿ ಚಾಕು ಚುಚ್ಚಿ ಹೋಗಿದೆ ಎಂಬ ವಿಚಾರ ತಿಳಿದು ಬಂದಿದೆ. ಕೊನೆಯಲ್ಲಿ ಇದು ಕೊಲೆ ಅಥವಾ ಆತ್ಮಹತ್ಯೆ ಆಗಿಲ್ಲ ಬದಲಾಗಿ ಆಕಸ್ಮಿಕ ಸಾವು ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ವೈರಲ್​​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ