Viral: ಅಂಗಡಿಗೆ ಬಂದ ಪುಟ್ಟ ಬಾಲಕಿಯ ಖಾಸಗಿ ಅಂಗ ಮುಟ್ಟಿದ 70 ರ ಮುದುಕ

ಮಹಿಳೆಯರ, ಹೆಣ್ಣು ಮಕ್ಕಳ ಮೇಲಾಗುತ್ತಿರುವ ಕಿರುಕುಳ, ಲೈಂಗಿಕ ದೌರ್ಜನ್ಯಗಳ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇವೆ. ಇದೀಗ ಅಂತಹದ್ದೇ ನಾಚಿಕೆಗೇಡಿನ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಅಂಗಡಿಗೆ ತಿಂಡಿ ತಿನಿಸು ಖರೀದಿಸಲು ಬಂದಿದ್ದ ಪುಟ್ಟ ಬಾಲಕಿಗೆ ತಿಂಡಿ ಕೊಟ್ಟು 70 ವರ್ಷದ ಮುದುಕನೊಬ್ಬ ಆ ಬಾಲಕಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

Viral: ಅಂಗಡಿಗೆ ಬಂದ ಪುಟ್ಟ ಬಾಲಕಿಯ ಖಾಸಗಿ ಅಂಗ ಮುಟ್ಟಿದ 70 ರ ಮುದುಕ
ವೈರಲ್​​​ ಪೋಸ್ಟ್​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 06, 2024 | 10:43 AM

ದೇಶದಲ್ಲಿ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದರೂ ಮಹಿಳೆಯರು, ಹೆಣ್ಣು ಮಕ್ಕಳ ಮೇಲಾಗುತ್ತಿರುವಂತಹ ಲೈಂಗಿಕ ದೌರ್ಜನ್ಯಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಕೆಲಸಕ್ಕೆ, ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣು ಮಕ್ಕಳು ಒಂದಲ್ಲಾ ಒಂದು ರೀತಿಯಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳಗಳನ್ನು ಎದುರಿಸುತ್ತಲೇ ಇದ್ದಾರೆ. ಇಂತಹ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ನಾಚಿಕೆಗೇಡಿನ ಕೃತ್ಯವೊಂದು ಬೇಳಕಿಗೆ ಬಂದಿದ್ದು, 70 ವರ್ಷದ ಮುದುಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೌದು ತಿಂಡಿ ಕೊಡುವ ನೆಪದಪಲ್ಲಿ ಬಾಲಕಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದ್ದು, ಅಂಗಡಿಗೆ ಬಂದಂತಹ ಬಾಲಕಿಯ ಜೊತೆ ವೃದ್ಧನೊಬ್ಬ ವರ್ತಿಸಿದ್ದಾನೆ. ಸಪ್ಟೆಂಬರ್‌ 3 ರಂದು ಅಪ್ರಾಪ್ತ ಬಾಲಕಿಯೊಬ್ಬಳು ಮೊಹಮ್ಮದ್‌ ಅನ್ವರ್‌ (70) ಎಂಬಾತನ ಪೆಟ್ಟಿ ಅಂಗಡಿಗೆ ತಿಂಡಿ ತಿನಿಸು ಖರೀದಿಸಲು ಬಂದಿದ್ದು, ಆ ಸಂದರ್ಭದಲ್ಲಿ ಚಾಕಲೇಟ್‌ ಕೊಡುವ ನೆಪದಲ್ಲಿ ಬಾಲಕಿಯನ್ನು ಹತ್ತಿರ ಕರೆಸಿಕೊಂಡು ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಈತನ ಪೈಶಾಚಿಕ ಕೃತ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸೀತಾಪುರ ಪೊಲೀಸರು ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅನ್ವರ್‌ನನ್ನು ಬಂಧಿಸಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು ಲಕ್ಷಯ್‌ ಮೆಹ್ತಾ (Lakshay Mehta) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ 70 ವರ್ಷದ ಅಂಗಡಿ ಮಾಲೀಕ ತಿಂಡಿ ಕೊಡುವ ನೆಪದಲ್ಲಿ ಅಪ್ರಪ್ತಾ ಬಾಲಕಿಯ ಖಾಸಗಿ ಅಂಗವನ್ನು ಮುಟ್ಟುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕಾಲೇಜು ಶೌಚಾಲಯದಲ್ಲಿ ಕಾಣಿಸಿಕೊಂಡ ರಾಶಿ ರಾಶಿ ಹಾವಿನ ಮರಿಗಳು; ಎದೆ ಝಲ್‌ ಎನಿಸುವ ವಿಡಿಯೋ

ಸೆಪ್ಟೆಂಬರ್‌ 4 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಿಡಿಯೋ ಮಾಡುವ ಬದಲು ಆ ಹುಡುಗಿಯನ್ನು ತಕ್ಷಣ ರಕ್ಷಿಸಬಹುದಿತ್ತಲ್ಲವೇ?ʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ