Video: 20 ಸಾವಿರ ರೂಪಾಯಿಗಳಿಗೆ ಹೆತ್ತ ಕಂದಮ್ಮನನ್ನೇ ಮಾರಲು ಹೊರಟ ತಾಯಿ, ಕಾರಣ ಏನ್‌ ಗೊತ್ತಾ?

ತಾಯಿಯಾದವಳು ಎಷ್ಟೇ ಕಷ್ಟ ಇದ್ರೂ, ತನ್ನ ಮಗುವನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಾಳೆ. ಆದ್ರೆ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ಗಂಡನಿಲ್ಲ ಜೊತೆಗೆ ಅತ್ತೆ ಮನೆಯವರು ಸರಿಯಾಗಿ ನೋಡಿಕೊಳ್ಳದೆ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ನನ್ಗೆ ಇದೀಗ ದಿಕ್ಕೇ ತೋಚುತ್ತಿಲ್ಲ ಎಂದು ಹೆತ್ತ ತಾಯಿಯೇ ತನ್ನ ಕಂದಮ್ಮನನ್ನು 20 ಸಾವಿರ ರೂ. ಗಳಿಗೆ ಮಾರಾಟ ಮಾಡಲು ಮುಂದಾಗಿದ್ದಾಳೆ. ಈ ಕುರಿತ ಮನಕಲಕುವ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Video: 20 ಸಾವಿರ ರೂಪಾಯಿಗಳಿಗೆ ಹೆತ್ತ ಕಂದಮ್ಮನನ್ನೇ ಮಾರಲು ಹೊರಟ ತಾಯಿ, ಕಾರಣ ಏನ್‌ ಗೊತ್ತಾ?
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 07, 2024 | 4:06 PM

ತಾಯಿಯಾದವಳಿಗೆ ತನ್ನ ಮಗುವೆಂದರೆ ಎಲ್ಲಿಲ್ಲದ ಪ್ರೀತಿ. ಜಗತ್ತಿನಲ್ಲಿ ಯಾರನ್ನು ಬಿಟ್ಟು ಕೊಟ್ಟರೂ ಹೆತ್ತ ಕಂದಮ್ಮನನ್ನು ಆಕೆ ಬಿಟ್ಟು ಕೊಡಲಾರಳು. ತನ್ನ ಮಗುವಿಗಾಗಿ ಎಂತಹ ಕಷ್ಟವನ್ನು ಬೇಕಾದ್ರೂ ಮೆಟ್ಟಿ ನಿಲ್ಲುತ್ತಾಳೆ. ಆದ್ರೆ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ಗಂಡನಿಲ್ಲ ಜೊತೆಗೆ ಅತ್ತೆ ಮನೆಯವರು ಸರಿಯಾಗಿ ನೋಡಿಕೊಳ್ಳದೆ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ನನಗೆ ಏನು ಮಾಡ್ಬೇಕು ಅಂತಾನೂ ಗೊತ್ತಾಗುತ್ತಿಲ್ಲ ಎಂದು ಅಸಹಾಯಕ ಪರಿಸ್ಥಿತಿಯಲ್ಲಿರುವ ಹೆತ್ತ ತಾಯಿಯೇ ತನ್ನ ಕಂದಮ್ಮನನ್ನು 20 ಸಾವಿರ ರೂ. ಗಳಿಗೆ ಮಾರಾಟ ಮಾಡಲು ಮುಂದಾಗಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸುಲ್ತಾನಾ ಹೆಸರಿನ ಮಹಿಳೆಯೊಬ್ಬಳು 20 ಸಾವಿರ ರೂ. ಗಳಿಗೆ ತನ್ನ ಮಗುವನ್ನು ಮಾರಾಟ ಮಾಡಲು ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾಳೆ. ಹೀಗೆ ಬಂದವಳು ನನಗೆ ಗಂಡನಿಲ್ಲ, ಮಗುವನ್ನು ನನ್ನೊಂದಿಗೆ ಇರಿಸಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ, ದಯವಿಟ್ಟು 20 ಸಾವಿರ ಕೊಟ್ಟು ನನ್ನ ಮಗುವನ್ನು ಕರೆದುಕೊಂಡು ಹೋಗಿ ಎಂದು ಹೇಳಿದ್ದಾಳೆ. ಇದನ್ನು ಕಂಡು ವೈದ್ಯರು ಪೊಲೀಸರಿಗೆ ಕರೆ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಏಕೆ ಮಗುವನ್ನು ಮಾರಾಟ ಮಾಡಲು ಮುಂದಾಗಿದ್ದೀರಿ ಎಂದು ಪ್ರಶ್ನೆ ಕೇಳುತ್ತಾರೆ. ಆ ಸಂದರ್ಭದಲ್ಲಿ ನನ್ನ ಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬಳಿಕ ಅತ್ತೆ ಮನೆಯವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳದೆ ಮನೆಯಿಂದ ಹೊರ ಹಾಕಿದ್ದಾರೆ. ಒಂದು ಹೊತ್ತಿನ ಊಟಕ್ಕೂ ನಾನು ಪರದಾಡುವಂತ ಪರಿಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ನಾನು ಮಗುವನ್ನು ಚೆನ್ನಾಗಿ ನೋಡಿಕೊಳ್ಳಲು ಸಾಧ್ಯವೇ ಮತ್ತು ಮಗುವನ್ನು ಬಿಟ್ಟು ನಾನು ಹೇಗೆ ಕೆಲಸಕ್ಕೆ ಹೋಗಲು ಸಾಧ್ಯ ಅದಕ್ಕಾಗಿ ಮಗುವನ್ನು ಮಾರಾಟ ಮಾಡಲು ನಿರ್ಧರಿಸಿದೆ ನೋವಿನಿಂದ ತನ್ನ ಕಷ್ಟವನ್ನು ಹೇಳಿಕೊಳ್ಳುತ್ತಾಳೆ. ನಂತರ ಪೊಲೀಸರು ಕುಟುಂಬಸ್ಥರನ್ನು ಕರೆಸಿ, ಆಕೆಗೆ ಸಮಧಾನ ಮಾಡಿ ಮಗು ಹಾಗೂ ತಾಯಿಯನ್ನು ಮನೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಗೆಳತಿಯ ಕೈಗೆ ಪಿಸ್ತೂಲ್ ಕೊಟ್ಟು ಬೆಡ್‌ರೂಮ್‌ನಲ್ಲಿ ರೀಲ್ಸ್‌ ಮಾಡಿದ ಪೊಲೀಸ್‌ ಅಧಿಕಾರಿ

ಈ ಕುರಿತ ಪೋಸ್ಟ್‌ ಒಂದನ್ನು TrueStoryUP ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಮಗುವನ್ನೇಕೆ ಮಾರಾಟ ಮಾಡಲು ಬಂದೆ ಎಂಬ ನೋವಿನ ಕಥೆಯನ್ನು ಹೇಳುವ ದೃಶ್ಯವನ್ನು ಕಾಣಬಹುದು.

ಆಗಸ್ಟ್‌ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಡತನ ನಮ್ಮನ್ನು ಎಂತಹ ಪರಿಸ್ಥಿತಿಗೆ ತಂದೊಡ್ಡುತ್ತದೆಯಲ್ಲವೇʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆ ಮಹಿಳೆಯ ಸ್ಥಿತಿ ನೋಡಲು ನಿಜಕ್ಕೂ ದುಃಖಕರವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 7 August 24

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ