Viral: ಹಣಕ್ಕಾಗಿ ಬ್ಲಾಕ್‌ಮೇಲ್;‌ ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ

ಪ್ರೀತಿ, ಪ್ರೇಮದ ಹೆಸರಲ್ಲಿ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಂಡವರು ಹಲವರಿದ್ದಾರೆ. ಅದೇ ರೀತಿಯ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ತಾನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗೆಳತಿಯ ಬ್ಯಾಕ್‌ಮೇಲ್‌ ಕಾಟಕ್ಕೆ ಹೆದರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಹಣಕ್ಕಾಗಿ ಬ್ಲಾಕ್‌ಮೇಲ್;‌ ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ
ವೈರಲ್​​ ಪೋಸ್ಟ್​​
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 17, 2024 | 6:13 PM

ಪ್ರೀತಿ ಮಾಯೆ ಹುಷಾರ್‌ ಎಂದು ತಿಳಿದವರು ಹೇಳುತ್ತಾರೆ. ಈ ಪ್ರೀತಿಯೆಂಬ ಮಾಯೆಯಲ್ಲಿ ಸಿಲುಕಿ ತಮ್ಮ ಸುಂದರ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಹೌದು ತಾನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಜೀವದ ಮೋಸದಾಟಕ್ಕೆ ಬೇಸರಗೊಂಡು ಅದೆಷ್ಟೋ ಜನರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ದುಡ್ಡಿಗಾಗಿ ಪ್ರಿಯತಮೆ ಮಾಡುತ್ತಿದ್ದ ಬ್ಲಾಕ್‌ಮೇಲ್‌ಗೆ ಬೇಸತ್ತು ಉದ್ಯಮಿಯೊಬ್ಬರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಇಲ್ಲಿನ ಉದ್ಯಮಿಯೊಬ್ಬರು ಗೆಳತಿಯ ಬ್ಲಾಕ್‌ಮೇಲ್‌ ಕಾಟಕ್ಕೆ ಬೇಸತ್ತು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 15 ರಂದು ಈ ಘಟನೆ ನಡೆದಿದ್ದು, ಉದ್ಯಮಿ ಮನೋಜ್‌ ಕುಮಾರ್‌ (34) ಸೈರ್‌ಪುರ ಪ್ರದೇಶದ ಹೋಟೆಲ್‌ ಒಂದರಲ್ಲಿ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಬಳಿ ಪೊಲೀಸರಿಗೆ ಪಿಸ್ತೂಲ್‌, ಕಾರ್ಟ್ರಿಡ್ಜ್‌ ಶೆಲ್‌ಗಳು ಮತ್ತು ಡೆತ್ ನೋಟ್‌ ಸಿಕ್ಕಿದ್ದು, ಆ ಲೆಟರ್‌ನಲ್ಲಿ ಉದ್ಯಮಿ ತಾನು ಪ್ರೀತಿಸಿದಾಕೆಯಿಂದ ಮೋಸ ಹೋಗಿರುವುದಾಗಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ

ವೈರಲ್​​​ ಪೋಸ್ಟ್​​​

ʼಆಕೆ ನನ್ನನ್ನು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಿದ್ದು ಮಾತ್ರವಲ್ಲದೆ ಹಣಕ್ಕಾಗಿ ಪದೇ ಪದೇ ನನಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಳು. ನಾನು ನನ್ನ ಫ್ಲಾಟ್‌ ಅನ್ನು 7 ಲಕ್ಷ ರೂಪಾಯಿಗಳಿಗೆ ಮಾರಿ ಆ ಹಣವನ್ನು ಕೂಡಾ ಆಕೆಗೆ ನೀಡಿದ್ದೇನೆ. ಹೀಗಿದ್ದರೂ ಆಕೆಯ ಹಣದ ದಾಹ ಕಡಿಮೆಯಾಗಿರಲಿಲ್ಲ. ನನ್ನ ಈ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲʼ ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿದೆ.

ವಾಣಿ ಮೆಹ್ರೋತ್ರಾ (vani_mehrotra) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ