AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಅಕ್ಷಯ್​ ಪಲ್ಲಮಜಲು​​
|

Updated on: Mar 07, 2026 | 3:59 PM

Share

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಹೆಲಿಕಾಪ್ಟರ್ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆಯಿಂದ ಆವೃತವಾಗಿತ್ತು. ಪೈಲಟ್ ಲಖನೌ ಏರ್‌ಪೋರ್ಟ್‌ನಲ್ಲಿ ಯಶಸ್ವಿ ತುರ್ತು ಭೂಸ್ಪರ್ಶ ಮಾಡಿದ ಕಾರಣ, ಡಿಸಿಎಂ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದಾರೆ. ಯಾವುದೇ ಗಾಯಗಳಾಗಿಲ್ಲ.

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ ಇದ್ದಕ್ಕಿದ್ದಂತೆ ಕೆಬಿನ್‌ನೊಳಗೆ ದಟ್ಟವಾದ ಹೊಗೆ ಆವರಿಸಿತು. ಅಷ್ಟೇ ಅಲ್ಲದೆ, ಕಾಕ್‌ಪಿಟ್‌ನಲ್ಲಿದ್ದ ಡಿಜಿಟಲ್ ಡಿಸ್‌ಪ್ಲೇ ಸಿಸ್ಟಮ್ ಕೂಡ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್ ತಕ್ಷಣವೇ ಲಖನೌ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅನ್ನು ಸಂಪರ್ಕಿಸಿ ತುರ್ತು ಪರಿಸ್ಥಿತಿಯ ಮಾಹಿತಿ ನೀಡಿದರು. ಎಟಿಸಿಯಿಂದ ತಕ್ಷಣದ ಅನುಮತಿ ಪಡೆದ ಪೈಲಟ್, ಹೆಲಿಕಾಪ್ಟರ್ ಅನ್ನು ಲಖನೌನ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಅಮೌಸಿ) ತಿರುಗಿಸಿ ಸುರಕ್ಷಿತವಾಗಿ ಇಳಿಸಿದರು.ಹೆಲಿಕಾಪ್ಟರ್‌ನಲ್ಲಿ ಡಿಸಿಎಂ ಜೊತೆಗೆ ಅವರ ಆಪ್ತ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳಿದ್ದರು. ಲ್ಯಾಂಡಿಂಗ್ ಆದ ತಕ್ಷಣ ಎಲ್ಲರನ್ನೂ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಯಿತು. ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More