Video: ಮಕ್ಕಳ ಮುಂದೆಯೇ ಅಮ್ಮನಿಗೆ ಅವಮಾನ, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದ ಗ್ರಾಮಸ್ಥರು

ಇಲ್ಲೊಂದು ಮನುಕುಲವೇ ತಲೆ ತಗ್ಗಿಸುವಂತಹ ಅಮಾನವೀಯ ಕೃತ್ಯವೊಂದು ನಡೆದಿದ್ದು, ವಿವಾಹಿತ ಮಹಿಳೆಯೊಬ್ಬಳು ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂಬ ಕಾರಣಕ್ಕೆ ಪಂಚಾಯ್ತಿ ಆದೇಶದ ಮೇರೆಗೆ ಗ್ರಾಮಸ್ಥರು ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಮುಖಕ್ಕೆ ಮಸಿ ಬಳಿದು, ತಲೆ ಬೋಳಿಸಿದ್ದು ಮಾತ್ರವಲ್ಲದೆ, ಮಕ್ಕಳ ಎದುರೇ ಆಕೆಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ್ದಾರೆ. ಈ ದುಶ್ಕೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Video: ಮಕ್ಕಳ ಮುಂದೆಯೇ ಅಮ್ಮನಿಗೆ ಅವಮಾನ, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದ ಗ್ರಾಮಸ್ಥರು
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 30, 2024 | 3:12 PM

ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಆದರೆ ಈ ಕೆಲವೊಬ್ಬರು ಕಾನೂನನ್ನೇ ಕೈಗೆ ತೆಗೆದುಕೊಂಡು ಅನಾಚಾರಗಳನ್ನು ಮೆರೆಯುತ್ತಾರೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ವಿವಾಹಿತ ಮಹಿಳೆಯೊಬ್ಬಳು ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂಬ ಕಾರಣಕ್ಕೆ ಕಾನೂನನ್ನು ಕೈಗೆ ತೆಗೆದುಕೊಂಡು ಪಂಚಾಯ್ತಿ ಆದೇಶದ ಮೇರೆಗೆ ಗ್ರಾಮಸ್ಥರು ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಮುಖಕ್ಕೆ ಮಸಿ ಬಳಿದು, ತಲೆ ಬೋಳಿಸಿದ್ದು ಮಾತ್ರವಲ್ಲದೆ, ಮಕ್ಕಳ ಎದುರೇ ಆ ಮಹಿಳೆಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ್ದಾರೆ. ಈ ಅಮಾನವೀಯ ಕೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಹಟಿಗಾಂವ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಚೋಟ್ಕಿ ಇಬ್ರಾಹಿಂಪುರ ಗ್ರಾಮದಲ್ಲಿ ನಡೆದಿದ್ದು, ವಿವಾಹಿತ ಮಹಿಳೆಯೊಬ್ಬಳು ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಪಂಚಾಯ್ತಿ ಮೆಟ್ಟಿಲೇರಿದೆ. ಈ ಪಂಚಾಯ್ತಿ ಆದೇಶದ ಮೇರೆಗೆ ಗ್ರಾಮಸ್ಥರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಆಕೆಯ ಹೆತ್ತ ಮಕ್ಕಳ ಮುಂದೆಯೇ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರವನ್ನು ಹಾಕಿ ಅಮಾನುಷವಾಗಿ ವರ್ತಿಸಿದ್ದಾರೆ. ಈ ಘಟನೆಯ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಈ ಕೃತ್ಯ ಎಸಗಿದ 15 ಜನರನ್ನು ಬಂಧಿಸಲಾಗಿದೆ. ಇನ್ನೂ ಐವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು The Dalith Voice ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ, ಆಕೆಯ ಮುಖಕ್ಕೆ ಮಸಿ ಬಳಿಯುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೃದ್ದೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕೂರಿಸಿ ಹೊಳೆ ದಾಟಿ ಆಸ್ಪತ್ರೆಗೆ ಕರೆದುಕೊಂಡು ಬಂದ ವ್ಯಕ್ತಿ

ಜುಲೈ 29 ರಂದು ಹಂಚಿಕೊಳ್ಳಲಾದ ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಅಮಾನವೀಯ ಕೃತ್ಯ ಮೆರೆದ ಪಾಪಿಗಳಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Tue, 30 July 24